
CHITRADURGA NEWS | 24 DECEMBER 2024
ಚಿತ್ರದುರ್ಗ: ಕೋನಸಾಗರ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ವಾರ್ಡನ್ ಫಯಾಜ್ ಬಾಷಾ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಮಂಗಳವಾರದ ಹತ್ತಿ ರೇಟ್

ಟೂ-ಟಯರ್ ಕಾಟ್ ದುರಪಯೋಗ ಪಡಿಸಿಕೊಂಡ ಆರೋಪದ ಮೇರೆಗೆ ಅಮಾನತುಗೊಳಿಸಲಾಗಿದೆ.
ಮೊಳಕಾಲ್ಮೂರು ಟಾನ್ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ವಾರ್ಡ್ನ ಆಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ನಿಲಯಕ್ಕಾಗಿ, ಚಿತ್ರದುರ್ಗ ನಗರದ ಐ.ಯು.ಡಿ.ಪಿ ಲೇ ಔಟ್‌ನ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಹೆಚ್ಚುವರಿಯಾಗಿದ್ದ 30 ಟೂ-ಟಯರ್ ಕಾಟ್, 44 ಬೆಡ್ ಮತ್ತು 36 ಪಿಲ್ಲೋಗಳನ್ನು ತೆಗೆದುಕೊಂಡು ಹೋಗಿದ್ದ, ವಾರ್ಡನ್ ಫಯಾಜ್ ಬಾಷಾ ಇವುಗಳಲ್ಲಿ 30 ಟೂ-ಟಯರ್ ಕಾಟ್‌ಗಳನ್ನು ದುರಪಯೋಗ ಪಡಿಸಿಕೊಂಡಿದ್ದಾರೆ.
ಕ್ಲಿಕ್ ಮಾಡಿ ಓದಿ: ಅಮಿತ್ ಶಾ, ಸಿ.ಟಿ ರವಿ ವಿರುದ್ಧ AAP ಪ್ರತಿಭಟನೆ
ಸರ್ಕಾರಿ ಆಸ್ತಿಗಳ ದುರ್ಬಳಕೆ, ಕರ್ತವ್ಯ ನಿರ್ಲಕ್ಷತೆ ಮತ್ತು ಬೇಜಬ್ದಾರಿ ತೋರಿದ ಆಧಾರದಲ್ಲಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನೀಡಿದ ವರದಿ ಆಧರಿಸಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಕೆ.ಸಿ.ಎಸ್(ಸಿ.ಸಿ.ಎ) ನಿಯಮಾವಳಿ-1957ರ ನಿಯಮ 10(1)ರ ಅನ್ವಯ ವಾರ್ಡನ್ ಫಯಾಜ್ ಬಾಷಾ ಅವರನ್ನು ಅಮಾನುತ್ತುಗೊಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
