
CHITRADURGA NEWS | 18 SEPTEMBER 2024
ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಅವರು ಸ್ವಚ್ಛತೆಯೇ ಸೇವೆ-2024ರ ಪ್ರಯುಕ್ತ ಸಸಿಗೆ ನೀರೆರೆಯುವ ಮೂಲಕ ಸ್ವಚ್ಛತಾ ಹೀ ಸೇವಾ ಆಂದೋಲನಕ್ಕೆ ಚಾಲನೆ ನೀಡಿ, ಸ್ವಚ್ಛತೆ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಕ್ಲಿಕ್ ಮಾಡಿ ಓದಿ: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಅಪಘಾತ
ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಗ್ರಾಮೀಣ ಪ್ರದೇಶದ ಜನರಲ್ಲಿ ನೈರ್ಮಲ್ಯ, ಶುಚಿತ್ವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಈಗಾಗಲೇ ಸೆಪ್ಟೆಂಬರ್ 14 ರಿಂದ ಸ್ವಚ್ಛತಾ ಹಿ ಸೇವಾ ಪಾಕ್ಷಿಕ ಆಚರಣೆ ಪ್ರಾರಂಭವಾಗಿದ್ದು, ಅಕ್ಟೋಬರ್ 02 ರವರೆಗೆ ನಡೆಯಲಿದೆ. ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಅಂದೋಲನ ರೀತಿಯಲ್ಲಿ ಸ್ವಚ್ಛತಾ ಅಭಿಯಾನ ನಡೆಸುವಂತೆ ತಿಳಿಸಿದರು.
ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವವನ್ನು ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ ಧ್ಯೇಯವಾಕ್ಯದೊಂದಿಗೆ ಸ್ವಚ್ಛತಾ ಕಿ ಭಾಗಿದಾರ, ಸಂಪೂರ್ಣ ಸ್ವಚ್ಛತಾ ಚಟುವಟಿಕೆಗಳು ಹಾಗೂ ಸಫಾಯಿ ಮಿತ್ರ ಸುರಕ್ಷಾ ಮೂರು ಚಟುವಟಿಕೆಗಳನ್ನು ಕೇಂದ್ರಿಕರಿಸಿ ಈ ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ ಎಂದರು.
ಇದೇ ವೇಳೆ ಜಿಲ್ಲಾ ಪಂಚಾಯಿತಿ ಆವರಣದಲ್ಲಿ “ತಾಯಿ ಹೆಸರಿನಲ್ಲಿ ಒಂದು ವೃಕ್ಷ” ಸಸಿ ನೆಡುವಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.
ಕ್ಲಿಕ್ ಮಾಡಿ ಓದಿ: Gaurasandra Maramma; ಹೊಳಲ್ಕೆರೆ ರಸ್ತೆಯ ಗೌರಸಂದ್ರ ಮಾರಮ್ಮ ದೇವಿಯ ಅಲಂಕಾರಕ್ಕೆ ಮನಸೋತ ಭಕ್ತರು
ಕಾರ್ಯಕ್ರಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಮಧು, ಸಹಾಯಕ ಯೋಜನಾಧಿಕಾರಿ ಸುಮಾ, ಸಾಮಾಜಿಕ ಅರಣ್ಯ ವಿಭಾಗದ ಅಧಿಕಾರಿಗಳು, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರು, ನರೇಗಾ ಜಿಲ್ಲಾ ಸಂಯೋಜಕರು, ಎನ್‌ಆರ್‌ಎಲ್‌ಎಂ ಸಮಾಲೋಚಕರು, ಜಿಲ್ಲಾ ಪಂಚಾಯಿತಿ ಎಲ್ಲಾ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

