CHITRADURGA NEWS | 10 JUNE 2025
ಚಿತ್ರದುರ್ಗ: ನಗರದ ಕೆಳಗೋಟೆಯ ಬಿ.ಎಲ್.ಗೌಡ ಲೇಔಟ್‍ನ ಸಹಕಾರ ಭವನದ ಜಿಲ್ಲಾ ಸಹಕಾರ ಯೂನಿಯನ್‍ನಲ್ಲಿ ಮಂಗಳವಾರ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಆರೋಗ್ಯವೇ ಭಾಗ್ಯಯುವಕರ ಸಂಘದ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ-2025ರ ಅಡಿಯಲ್ಲಿ “ಸ್ವಚ್ಛತಾ ಸೇ ಸಹಕಾರ” (ಸಹಕಾರದಿಂದ ಸ್ವಚ್ಛತೆ) ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
Also Read: ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ BIRTHDAY ಆಚರಣೆ

ಅಭಿಮಾನದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಹೆಚ್.ಎಂ.ದ್ಯಾಮಣ್ಣ ಮಾತನಾಡಿ, ಸ್ವಚ್ಛತೆ ಇದು ಒಂದು ದಿನದ ಕಾರ್ಯಕ್ರಮ ಆಗಬಾರದು. ನಾವು ನಮ್ಮ ಕಛೇರಿ, ಮನೆಗಳ ಸುತ್ತ ಮುತ್ತಲಿನ ಆವರಣವನ್ನು ದಿನ ನಿತ್ಯ ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಆರೋಗ್ಯವೇ ಭಾಗ್ಯ ಯುವಕರ ಸಂಘದ ನಿರ್ದೇಶಕ ಕಲ್ಲೇಶ್ ಡಿ.ಮೌರ್ಯ ಅವರು ಸ್ವಚ್ಛತೆ ಅಭಿಯಾನದ ವಿಷಯ ಕುರಿತು ನಮ್ಮ ಪರಿಸರವನ್ನು ಹೇಗೆ ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಎಂಬ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ನಂತರ ಸಹಕಾರ ಭವನ ಆವರಣದ ಸುತ್ತ ಮುತ್ತಸ್ವಚ್ಛತೆ ಮಾಡಲಾಯಿತು.
Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಸ್ವಚ್ಛತೆ ಅಭಿಯಾನ ಕಾರ್ಯಕ್ರಮದಲ್ಲಿ ಶಿವಮೊಗ್ಗ ಹಾಲು ಒಕ್ಕೂಟ ಹಾಗೂ ಜಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜಿ.ಬಿ.ಶೇಖರಪ್ಪ, ಸಹಕಾರ ಸಂಘಗಳ ಉಪನಿಬಂಧಕ ಆರ್.ಎಸ್.ದಿಲೀಪ್ ಕುಮಾರ್, ಸಹಾಯಕ ನಿಬಂಧಕ ಬಾಹುಬಲಿ ಹಂಜೆ, ಯೂನಿಯನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಜಯಶ್ರೀ ಹುನಗುಂದ, ಜಿಲ್ಲಾ ಸಹಕಾರ ಶಿಕ್ಷಕ ನಾಗರಾಜ್ ಪಾಟೀಲ್, ಆರೋಗ್ಯ ಭಾಗ್ಯ ಯುವಕರ ಸಂಘದ ಅಧ್ಯಕ್ಷ ಪರಶುರಾಮ್, ಉಪಾಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಸಹಕಾರ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್ ಸಿಬ್ಬಂದಿ ವರ್ಗದವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
