
CHITRADURGA NEWS | 28 OCTOBER 2025
ಚಿತ್ರದುರ್ಗ: ದೇಸಿ ಸಂಸ್ಕೃತಿ, ದೇಸಿ ಆಟ, ಆಹಾರ, ಕ್ರೀಡೆ, ಸಾವಯವ ಕೃಷಿ, ಆಯುರ್ವೇದ ಚಿಕಿತ್ಸೆ, ದೇಸಿ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಗಳನ್ನೊಳಗೊಂಡ ಸ್ವಾವಲಂಬನೆಯ ಪರಿಕಲ್ಪನೆಯಾದ ಸ್ವದೇಶಿ ಮೇಳ ಈ ಭಾರೀ ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸ್ವದೇಶಿ ಮೇಳದ ಸಂಘಟಕರಾದ ಜಗದೀಶ್ ತಿಳಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ಹತ್ತಿ ರೇಟ್ ಎಷ್ಟಿದೆ?

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ನಮ್ಮಲ್ಲಿ ಗುಡಿ ಕೈಗಾರಿಕೆಗಳು ಹೆಚ್ಚಾಗಿ ಬೆಳಕಿಗೆ ಬರಬೇಕಿದೆ, ಇವುಗಳು ತಯಾರು ಮಾಡಿದ ಉತ್ಪನ್ನಗಳನ್ನು ನಮ್ಮ ಜನತೆ ಖರೀದಿ ಮಾಡಬೇಕು. ಮಾರುಕಟ್ಟೆ ನಿರ್ಮಾಣ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಗುತ್ತಿದೆ.
ಈ ಮೇಳದಲ್ಲಿ ಕುಂಬಾರ, ಕಮ್ಮಾರ, ಚಮ್ಮಾರ, ಸಾವಯವ, ದೇಶಿ ವಸ್ತುಗಳ ತಯಾರಿ ಹಾಗೂ ಪ್ರದರ್ಶನ ನಡೆಯಲ್ಲಿದ್ದು ಹಲವು ರೀತಿಯ ಸ್ವದೇಶಿ ಗೋತಳಿ ಪ್ರದರ್ಶನ, ದೇಸಿ ಆಹಾರಗಳ ತಯಾರಿಕೆ ಮತ್ತು ಮಾರಾಟವೂ ಇರಲಿದೆ ಎಂದರು.
ನ. 12ರಿಂದ 16ರವರೆಗೆ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೇಳವನ್ನು ಸ್ವದೇಶಿ ಜಾಗರಣ ಮಂಚ್ ಆಯೋಜಿಸಿದೆ.
ಸ್ವಾವಲಂಬನೆ ಪರಿಕಲ್ಪನೆಯಡಿ ಸಿದ್ದಗೊಳ್ಳುತ್ತಿರುವ ಮೇಳದಲ್ಲಿ ದೇಶದ ವಿವಿಧೆಡೆಯಿಂದ ಸ್ವದೇಶಿ ಉತ್ಪನ್ನಗಳನ್ನು ತಯಾರಿಸುವ ಕರಕುಶಲಕರ್ಮಿಗಳು ಭಾಗವಹಿಸಲಿದ್ದಾರೆ. ಇದರಲ್ಲಿ ಸ್ಥಳೀಯರಿಗೆ ತರಬೇತಿ, ಪ್ರಾತ್ಯಕ್ಷಿಕೆ ನಡೆಸಿಕೊಡಲಿದ್ದಾರೆ. ಅದಕ್ಕಾಗಿ ಕ್ರೀಡಾಂಗಣದಲ್ಲಿ 200ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ.
ಇದನ್ನೂ ಓದಿ: BSC ನರ್ಸಿಂಗ್ ಸೀಟುಗಳಿಗೆ ಅರ್ಜಿ ಅಹ್ವಾನ
ಜಿಲ್ಲೆಯ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು, ರೈತರು, ಯುವ ಉದ್ಯಮಿಗಳಿಗೆ ವಿವಿಧ ರೀತಿಯ ಚಟುವಟಿಕೆ ಆಯೋಜಿಸಲಾಗಿದೆ. ಪ್ರತಿದಿನ ಸಂಜೆ ರಾಷ್ಟ್ರ, ರಾಜ್ಯ ಮಟ್ಟದ ಹಾಗೂ ಸ್ಥಳೀಯ ಕಲಾವಿದರಿಂದ ಸಂಗೀತ, ನಾಟಕ, ಯಕ್ಷಗಾನ, ತೊಗಲು ಗೊಂಬೆಯಾಟ ನಡೆಯಲಿದೆ.
ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುವವರಿಗೆ ಆಯುರ್ವೇದ, ಪ್ರಕೃತಿ ಚಿಕಿತ್ಸೆಯ ಮಾಹಿತಿಯನ್ನೂ ನೀಡಲಾಗುತ್ತಿದೆ ಎಂದು ತಿಳಿಸಿದರು.
ಸ್ವದೇಶಿ ಮೇಳದ ಸಂಯೋಜಕರು ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ನ.12ರಂದು ವಿಧ್ಯುಕ್ತವಾಗಿ ಮೇಳಕ್ಕೆ ಚಾಲನೆ ದೊರೆಯಲಿದೆ. ಅಂದು ಸ್ವಾವಲಂಬನೆ ಕಲ್ಪನೆಯ ಸ್ವದೇಶಿ ಮೇಳವನ್ನು ಪ್ಲಾಸ್ಟಿಕ್ ಮುಕ್ತವಾಗಿ ನಡೆಯುತ್ತಿರುವುದು ವಿಶೇಷವಾಗಿದೆ.
ಒಂದೇ ವೇದಿಕೆಯಲ್ಲಿ ಮಕ್ಕಳು, ಮಹಿಳೆಯರು, ಯುವಕರು, ಹಿರಿಯರು, ರೈತರು ಪಾಲ್ಗೊಳ್ಳಿದ್ದಾರ. ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ದೇಸಿ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ಸಂಜೆ ಜಾನಪದ ಕಲಾವೈಭವದಲ್ಲಿ ಅಜಿತ್ ಬಸಾಪುರ ಹಾಗೂ ತಂಡದಿಂದ ಜನಪದ ಗೀತಾಗಾಯನವಿದೆ.
ಇದನ್ನೂ ಓದಿ: ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣಕ್ಕೆ ಜಾಗ ಸಿಕ್ಕಿದೆ | ಸಮಾಜ ಸಹಕಾರ ನೀಡಲಿ | ಶ್ರೀರಾಮುಲು
ನ.13ಕ್ಕೆ ಸಾರ್ವಜನಿಕರಿಗೆ ನಿತ್ಯ ಬಳಸುವ ವಸ್ತುಗಳ ತಯಾರಿಕಾ ಶಿಬಿರ ನಡೆಯಲಿದೆ. ನಂತರ ಮಹಿಳಾ ಸಮಾವೇಶ ನಡೆಯಲಿದ್ದು, ಮಹಿಳಾ ಉದ್ಯಮಿಗಳು ಮಹಿಳೆಯರು ಉದ್ಯಮ ನಡೆಸಲು ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಸಂಜೆ ಶ್ವೇತಕುಮಾರ ಚರಿತ್ರೆ ಯಕ್ಷಗಾನ ಪ್ರಸಂಗ ನಡೆಯಲಿದೆ.
ನ.14ರಂದು ಆಯುರ್ವೇದ ಶಿಬಿರ ನಡೆಯಲಿದ್ದು, ವಿವಿಧೆಡೆಯಿಂದ ಬರುವ ಆಯುರ್ವೇದ ವೈದ್ಯರು ಪಂಚಕರ್ಮ ಚಿಕಿತ್ಸೆ ಬಗ್ಗೆ ಮಾಹಿತಿ ನೀಡುವರು. ಮಧ್ಯಾಹ್ನ ಯುವ ಸಮಾವೇಶ ನಡೆಯಲಿದ್ದು. ನಿರುದ್ಯೋಗ ಸಮಸ್ಯೆ, ಪರಿಹಾರಗಳ ಬಗ್ಗೆ ತಜ್ಞರು ಉಪನ್ಯಾಸ ನೀಡುವರು.
ಸಂಜೆ ಪಂ.ಪ್ರಕಾಶ್ ಹೆಗಡೆ ಕಲ್ಲಾರೆ ಮನೆ, ಪಂ.ವಿಜಯ್ ಗೋನಾಳ್, ಪಂ.ಮಹೇಶ್ ರಾಜ್ ಸಾಲೊಂಕೆ ಅವರಿಂದ ಕೊಳಲು- ಸಿತಾರ್ ಜುಗಲ್‍ಬಂದಿ ಕಾರ್ಯಕ್ರಮವಿದೆ.
ನ.15ರಂದು ತಾರಸಿ ತೋಟ ರೂಪಿಸುವ ತರಬೇತಿ ನಡೆಯಲಿದೆ. ನಂತರ ರೈತರೊಂದಿಗೆ ಸಂವಾದ ನಡೆಯಲಿದ್ದು, ಸಾವಯವ ಕೃಷಿ, ಬಹುಬೆಳೆ ಪದ್ಧತಿ, ಮಾರುಕಟ್ಟೆ, ಸಹಕಾರ ವ್ಯವಸ್ಥೆ ಬಗ್ಗೆ ಚರ್ಚೆ ನಡೆಯಲಿದೆ.
ಸಂಜೆಯ ಲಯ ಲಾವಣ್ಯ ಕಾರ್ಯಕ್ರಮ ನಡೆಯಲಿದ್ದು, ವಿದ್ವಾನ್ ಆನೂರು ಅನಂತಕೃಷ್ಣ ಶರ್ಮ ಅವರ ತಾಳವಾದ್ಯ ಕಚೇರಿ ಇದೆ.
ಇದನ್ನೂ ಓದಿ: ರೈತರಿಗೆ ಬೆಸ್ಕಾಂ ಮನವಿ | ವಿದ್ಯುತ್ ಸಮಸ್ಯೆ ಇದ್ದರೆ ವಾಟ್ಸಪ್ ಮಾಡಿ
ನ.16ರಂದು ಬೆಳಿಗ್ಗೆ ರಂಗೋಲಿ ಸ್ಪರ್ಧೆ, ಮಧ್ಯಾಹ್ನ ಪಂಚಗವ್ಯ ಚಿಕಿತ್ಸಾ ಶಿಬಿರ. ಸಂಜೆ ಶ್ರೀಕೃಷ್ಣ ಪಾರಿಜಾತ ಸೂತ್ರ ಸಲಾಕೆ ಗೊಂಬೆಯಾಟ ನಡೆಯಲಿದೆ. ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಉಚಿತ ಅವಕಾಶವನ್ನು ಕಲ್ಪಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸ್ವದೇಶಿ ಮೇಳದ ಸಹಾ ಸಂಯೋಜಕ ಸಿದ್ಧಾರ್ಥ ಗುಡಾರ್ಪಿ, ಸಂಘಟಕ ರವೀಂದ್ರ, ಸಹ ಸಂಘಟಕ ಕೆ.ಟಿ.ಕುಮಾರಸ್ವಾಮಿ, ಸಂಚಾಲಕರಾದ ಸೌಭಾಗ್ಯ ಬಸವರಾಜನ್, ಸಹ ಸಂಚಾಲಕರಾದ ಹನುಮಂತೇಗೌಡ, ಸುರೇಶ್ ಸಿದ್ದಾಪುರ, ಸಂಪತ್ ಕುಮಾರ್ ನವೀನ್ ಚಾಲುಕ್ಯ, ವೆಂಕಟೇಶ್ ಯಾದವ್, ದಗ್ಗೆ ಶಿವಪ್ರಕಾಶ್, ಬಾಳೆಕಾಯಿ ಚಂದ್ರಹಾಸ್ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
