ಮುಖ್ಯ ಸುದ್ದಿ
ಚಳ್ಳಕೆರೆ ಗೇಟ್ ಬಳಿ ಬಸ್ ತಂಗುದಾಣ ನಿರ್ಮಾಣಕ್ಕೆ ಕ್ರಮ ವಹಿಸಿ | ಡಿಸಿ

CHITRADURGA NEWS | 18 APRIL 2025
ಚಿತ್ರದುರ್ಗ: ನಗರದ ಚಳ್ಳಕೆರೆ ಗೇಟ್ ಬಳಿಯ ಬಸ್ ತಂಗುದಾಣ ನಿರ್ಮಾಣಕ್ಕೆ ತಕ್ಷಣ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
Also Read: ತೂಕ ಇಳಿಸಿಕೊಳ್ಳಲು ನುಗ್ಗೆ ಚಹಾ ಅಥವಾ ಗ್ರೀನ್ ಟೀಯಲ್ಲಿ ಯಾವುದು ಉತ್ತಮ?
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಸ್ ತಂಗುದಾಣ ನಿರ್ಮಾಣಕ್ಕೆ ಎನ್‍ಒಸಿ ನೀಡಿ, ಆರು ತಿಂಗಳಾದರೂ ಕಾಮಗಾರಿ ಪ್ರಾರಂಭ ಮಾಡದಿದ್ದರೆ ಹೇಗೆ? ಎಂದು ಪ್ರಶ್ನಿಸಿದರು.
ಚಳ್ಳಕೆರೆ ಗೇಟ್ ಬಳಿ ಹೊಸ ಮಾದರಿಯಲ್ಲಿ ತಂಗುದಾಣ ನಿರ್ಮಿಸಲು ಶಾಸಕರು ಅನುದಾನ ಒದಗಿಸಿದ್ದು, ಕೆಆರ್‍ಐಡಿಎಲ್‍ನಿಂದ ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
Also Read: ಮದುವೆಯಲ್ಲಿ ಅಡೆತಡೆಗಳನ್ನು ಎದುರಿಸುತ್ತಿದ್ದರೆ, ಈ ವಾಸ್ತು ಸಲಹೆಗಳನ್ನು ಪಾಲಿಸಿ
ಕೂಡಲೇ ಕಾಮಗಾರಿ ಆರಂಭಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಚಳ್ಳಕೆರೆ ಗೇಟ್‍ನಲ್ಲಿ ಸಂಚಾರ ದಟ್ಟಣೆ ನಿಯಂತ್ರಣ ಮಾಡಬೇಕಿದೆ. ಚಳ್ಳಕೆರೆ ಗೇಟ್ ಬಳಿಯ ಅಂಡರ್‍ಪಾಸ್ ಕೆಳಗಡೆ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು, ನಿಲ್ಲಿಸುವವರ ವಿರುದ್ಧ ಕ್ರಮ ಜರುಗಿಸಬೇಕು ಹಾಗೂ ಸುಗಮ ಸಂಚಾರಕ್ಕೆ ಕ್ರಮ ವಹಿಸಬೇಕು.
ಈ ಭಾಗದ ನಾಲ್ಕು ಕಡೆಯೂ ಫುಟ್‍ಪಾತ್ ಅತಿಕ್ರಮಣ ತೆರವುಗೊಳಿಸಿ ವಾಹನಗಳ ಪಾರ್ಕಿಂಗ್‍ಗೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
