By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    4 hours ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    4 hours ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    17 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    17 hours ago
    ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    5 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    3 hours ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    5 hours ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    1 day ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    1 day ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
Reading: ಉದ್ಯೋಗ ಮೇಳಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಿ | ಶಾಸಕ ಟಿ.ರಘುಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಉದ್ಯೋಗ ಮೇಳಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಿ | ಶಾಸಕ ಟಿ.ರಘುಮೂರ್ತಿ

News Desk Chitradurga News
Last updated: 1 February 2026 18:35
News Desk Chitradurga News
7 months ago
Share
ಜಿಲ್ಲಾ ಮಟ್ಟದ ಉದ್ಯೋಗ ಮೇಳ
ಜಿಲ್ಲಾ ಮಟ್ಟದ ಉದ್ಯೋಗ ಮೇಳ
SHARE

CHITRADURGA NEWS | 01 FEBRUARY 2026

ಚಿತ್ರದುರ್ಗ: ಶಿಖರ ಏರಬೇಕಾದರೆ ಮೊದಲ ಹೆಜ್ಜೆ ಅತ್ಯಗತ್ಯ. ಹಾಗೆಯೇ ಉದ್ಯೋಗದ ವಿಷಯದಲ್ಲೂ ಯುವಕರು ಹಿಂಜರಿಯದೆ ಮೊದಲು ಸಿಕ್ಕ ಅವಕಾಶವನ್ನು ಬಳಸಿಕೊಳ್ಳಬೇಕು. ಉದ್ಯೋಗ ಮೇಳಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಬೇಕು ಎಂದು ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.

ಇದನ್ನೂ ಓದಿ: ರೇಷ್ಮೆ ಬೆಳೆಗಾರರಿಗೆ ಕೃಷಿ ಪ್ರಶಸ್ತಿ | ಅರ್ಜಿ ಅಹ್ವಾನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.

ದೇಶ ಮತ್ತು ರಾಜ್ಯದಲ್ಲಿ ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಉದ್ಯೋಗ ಮೇಳಗಳನ್ನು ಹೆಚ್ಚು ಹೆಚ್ಚು ಆಯೋಜಿಸುವ ಮೂಲಕ ಯುವಶಕ್ತಿಗೆ ಆಸರೆಯಾಗುತ್ತಿದೆ. 

2023ರ ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ‘ಯುವನಿಧಿ’ ಯೋಜನೆಯನ್ನು ಜಾರಿಗೆ ತರಲಾಗಿದೆ ಪದವೀಧರರಿಗೆ 3,000 ರೂ. ಹಾಗೂ ಡಿಪ್ಲೊಮೊ ಮಾಡಿದವರಿಗೆ 1,500 ರೂ. ಭತ್ಯೆ ನೀಡಲಾಗುತ್ತಿದೆ. ಆದರೆ ಇದು ಕೇವಲ ತಾತ್ಕಾಲಿಕ ವ್ಯವಸ್ಥೆಯಷ್ಟೇ. ಯುವಕರು ಇದರ ಮೇಲೆಯೇ ಅವಲಂಬಿತರಾಗದೆ ಇಂತಹ ಉದ್ಯೋಗ ಮೇಳದ ಅವಕಾಶಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.

ಇದನ್ನೂ ಓದಿ: ಟ್ರಾನ್ಸ್‌ಫಾರ್ಮರ್‌ ರಿಪೇರಿಗೆ ಲಂಚ | ಬೆಸ್ಕಾಂ ಎಸ್‌ಓ ಲೋಕಾಯುಕ್ತ ಬಲೆಗೆ

ಮೇಳದಲ್ಲಿ ಉದ್ಯೋಗ ಸಿಕ್ಕ ಆರಂಭದಲ್ಲಿ ಸಂಬಳ ಕಡಿಮೆ ಇರಬಹುದು ಅಥವಾ ಸೌಲಭ್ಯಗಳು ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿರಬಹುದು. ಆದರೆ ಯುವಕರು ಹೊಂದಿಕೊಳ್ಳಬೇಕು. ಖಾಸಗಿ ಕಂಪನಿಗಳಲ್ಲಿ ಶಿಸ್ತು ಮತ್ತು ಪರಿಶ್ರಮ ಬಹಳ ಮುಖ್ಯ. ಅಲ್ಲಿ ಸರ್ಕಾರಿ ಕೆಲಸದಂತೆ ಸೋಮಾರಿತನಕ್ಕೆ ಅವಕಾಶವಿರುವುದಿಲ್ಲ ಎಂದು ಎಚ್ಚರಿಸಿದರು.  

ಪೋಷಕರು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಮೂಲಕ ತಮ್ಮ ಜವಾಬ್ದಾರಿ ನಿರ್ವಹಿಸುತ್ತಾರೆ. ಮುಂದಿನ ಹೊಣೆಗಾರಿಕೆ ಯುವಪೀಳಿಗೆಯದ್ದು, ನಿಮ್ಮ ಬದುಕನ್ನು ನೀವೇ ರೂಪಿಸಿಕೊಳ್ಳುವ ಸಮಯ ಬಂದಿದೆ ಎಂದು ಅಭ್ಯರ್ಥಿಗಳನ್ನು ಶಾಸಕ ಟಿ. ರಘುಮೂರ್ತಿ ಹುರಿದುಂಬಿಸಿದರು.

ಶಾಸಕನಾಗಿ 2015-16ರಲ್ಲಿ ಚಳ್ಳಕೆರೆ ನಗರದಲ್ಲಿ ನಾವು ನಡೆಸಿದ ಉದ್ಯೋಗ ಮೇಳದಲ್ಲಿ ಸುಮಾರು 150 ಕಂಪನಿಗಳು ಭಾಗವಹಿಸಿದ್ದವು ಮತ್ತು 13,000 ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದರು. ಸುಮಾರು 8,000 ದಿಂದ 9,000 ಜನರಿಗೆ ಉದ್ಯೋಗ ಲಭಿಸಿತ್ತು ಎಂದು ಶಾಸಕ ಟಿ. ರಘುಮೂರ್ತಿ ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಇದನ್ನೂ ಓದಿ: ಕೀಟನಾಶಕ ಬಳಕೆ ಕೊನೆಯ ಅಸ್ತ್ರವಾಗಲಿ | ಸಮಗ್ರ ಕೃಷಿ ಪದ್ಧತಿ ಆದ್ಯತೆಯಾಗಲಿ | ಕೃಷಿ ಇಲಾಖೆ ಜೆಡಿ ಮಂಜುನಾಥ

ಪ್ರಾಸ್ತಾವಿಕವಾಗಿ ಮಾತನಾಡಿದ ಜಿ.ಪಂ. ಸಿಇಓ ಡಾ.ಆಕಾಶ್ ಉದ್ಯೋಗ ಮೇಳದಲ್ಲಿ 6,200ಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಬೆಂಗಳೂರು, ತುಮಕೂರು, ಕೋಲಾರ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಚಿತ್ರದುರ್ಗ ಜಿಲ್ಲೆಯ ಒಟ್ಟು 86ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿವೆ. 

ಮೇಳ ಆರಂಭವಾದ ಕೆಲವೇ ಗಂಟೆಗಳಲ್ಲಿ ಅಂದರೆ ಮಧ್ಯಾಹ್ನದ ವೇಳೆಗೆಯೇ ಸುಮಾರು 575 ಅಭ್ಯರ್ಥಿಗಳ ಸಂದರ್ಶನ ಪೂರ್ಣಗೊಂಡಿದ್ದು, ಈ ಪೈಕಿ 145 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ವಿತರಿಸಲಾಗಿದೆ. ಇದರ ಹೊರತಾಗಿ ಇನ್ನೂ 180 ಅಭ್ಯರ್ಥಿಗಳನ್ನು ಮುಂದಿನ ಹಂತದ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ. ಮೇಳದಲ್ಲಿ 32 ಅಂಗವಿಕಲ ಅಭ್ಯರ್ಥಿಗಳು ಭಾಗವಹಿಸಿದ್ದು, ಅವರಲ್ಲಿ 6 ಜನರಿಗೆ ಉದ್ಯೋಗ ಖಚಿತವಾಗಿದೆ. 

ಮೇಳದಲ್ಲಿ ಎಸ್‍ಎಸ್‍ಎಲ್‍ಸಿಯಿಂದ ಸ್ನಾತಕೋತ್ತರ ಪದವಿಯವರೆಗೆ ಪ್ರತಿಯೊಬ್ಬರಿಗೂ ಅವರ ವಿದ್ಯಾರ್ಹತೆಗೆ ತಕ್ಕಂತೆ ಅವಕಾಶಗಳಿವೆ. ಕನಿಷ್ಠ 10 ಕಂಪನಿಗಳಲ್ಲಾದರೂ ಸಂದರ್ಶನ ಎದುರಿಸಲು ಪ್ರಯತ್ನಿಸಿ ಎಂದು ಅಭ್ಯರ್ಥಿಗಳಿಗೆ ತಿಳಿಸಿದರು.

ಇದನ್ನೂ ಓದಿ: ಅಡಿಕೆ ಧಾರಣೆ | 31 ಜನವರಿ | ರಾಜ್ಯದಲ್ಲಿ ಇಂದಿನ ಅಡಿಕೆ ರೇಟ್‌

ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ಯಾರ ಮನೆ ಬಾಗಿಲಿಗೂ ಉದ್ಯೋಗ ನೇರವಾಗಿ ಬರುವುದಿಲ್ಲ. ಸರ್ಕಾರವು ಇಂತಹ ಉದ್ಯೋಗ ಮೇಳಗಳನ್ನು ಆಯೋಜಿಸುವ ಮೂಲಕ ಯುವಜನತೆಗೆ ಅವರ ಪ್ರತಿಭೆಗೆ ತಕ್ಕ ಉದ್ಯೋಗವನ್ನು ಹುಡುಕಿಕೊಳ್ಳಲು ವೇದಿಕೆಯನ್ನು ಕಲ್ಪಿಸಿದೆ. ಕೇವಲ ಪದವಿ ಪಡೆದರೆ ಸಾಲದು, ಯುವಕರು ಕೌಶಲ್ಯ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ಅಭ್ಯರ್ಥಿಗಳಿಂದ ಉತ್ತಮ ಸ್ಪಂದನೆ

ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026ಕ್ಕೆ ಉತ್ತಮ ಸ್ಪಂದನೆ ದೊರೆಯಿತು. ಉದ್ಯೋಗ ಮೇಳದಲ್ಲಿ ಒಟ್ಟು 6,248 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 

ಈ ಪೈಕಿ ಸ್ನಾತಕೋತ್ತರ ಪದವಿ 580, ಎಂ.ಟೆಕ್. 16, ಇಂಜಿನಿಯರಿಂಗ್ 388, ಪದವಿ 2,939, ಐ.ಟಿ.ಐ 411, ಡಿಪ್ಲೊಮೊ 199, ನಸಿರ್ಂಗ್ 86, ಪಿಯುಸಿ 899 ಎಸ್.ಎಸ್.ಎಲ್.ಸಿ ಪೂರೈಹಿಸಿದ 730 ಅಭ್ಯರ್ಥಿಗಳು ಭಾಗವಹಿಸಿದ್ದಾರೆ. ನೊಂದಣಿಯಾದವರಲ್ಲಿ 3,110 ಪುರುಷ ಹಾಗೂ 3100 ಮಹಿಳಾ ಅಭ್ಯರ್ಥಿಗಳು ಇದ್ದಾರೆ. 1739 ಪರಿಶಿಷ್ಟ ಜಾತಿ, 1042 ಪರಿಶಿಷ್ಟ ಪಂಗಡ, 2326 ಹಿಂದುಳಿದ ವರ್ಗ, 129 ಅಲ್ಪ ಸಂಖ್ಯಾತ, 977 ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಭಾಗವಹಿಸಿದ್ದರು.

ಶಿಸ್ತು ಬದ್ದ ಆಯೋಜನೆ:

ಉದ್ಯೋಗ ಮೇಳ ಆಯೋಜನೆ ಶಿಸ್ತು ಬದ್ದವಾಗಿದ್ದು ಸ್ಥಳದಲ್ಲಿ ಅಭ್ಯರ್ಥಿಗಳು ವಿವರದ ಫಾರಂ ತುಂಬಿಸಿಕೊಳ್ಳಲು ಸುಮಾರು 10ಕ್ಕೂ ಹೆಚ್ಚಿನ ಕೌಂಟರ್‍ಗಳನ್ನು ತೆರಯಲಾಗಿತ್ತು. 25 ಕ್ಕೂ ಹೆಚ್ಚಿನ ಕೊಠಡಿಗಳಲ್ಲಿ ಉದ್ಯೋಗದಾತರು ಅಭ್ಯರ್ಥಿಗಳ ಸಂದರ್ಶನ ಪಡೆಯಲು ಸ್ಥಳಾವಕಾಶ ಕಲ್ಪಿಸಲಾಗಿತ್ತು. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 31 | ಹತ್ತಿ ರೇಟ್ ಎಷ್ಟಿದೆ?

ಪ್ರತಿ ಕೊಠಡಿಯ ಮುಂಭಾಗದಲ್ಲಿ ಕಂಪನಿಗಳ ಹೆಸರು, ಅಗತ್ಯ ಇರುವ ವಿದ್ಯಾರ್ಹತೆಯನ್ನು ಫಲಕಗಳಲ್ಲಿ ಹಾಕಲಾಗಿತ್ತು. ಅಭ್ಯರ್ಥಿಗಳಿಗೆ ಸಹಾಯಕ್ಕಾಗಿ ಜಿಲ್ಲೆಯ ಡಿಪ್ಲೊಮೊ, ಐಟಿಐ, ಜಿಟಿಟಿಸಿ ಕಾಲೇಜುಗಳ ಉಪನ್ಯಾಸಕರು ಹಾಗೂ ಸಿಬ್ಬಂದಿ ನೇಮಿಸಲಾಗಿತ್ತು. ಇವರು ಅಭ್ಯರ್ಥಿಗಳಿಗೆ ಸೂಕ್ತ ಕಂಪನಿಗಳು ಇರುವ ರೂಮ್‍ಗಳಿಗೆ ತೆರಳಿ ಸಂದರ್ಶನ ನೀಡಲು ಪ್ರೇರೇಪಿಸಿದರು. ಕಾಲೇಜಿನ ನೆಲಮಹಡಿಯಲ್ಲಿ ವಿಕಲಚೇತನ ಅಭ್ಯರ್ಥಿಗಳಿಗೂ ಉದ್ಯೋಗ ನೀಡಲು ಕೌಂಟರ್ ತೆರೆಯಲಾಗುತ್ತು.

86ಕ್ಕೂ ಅಧಿಕ ಕಂಪನಿಗಳು ಭಾಗಿ:

ಟೆಕ್, ಫಾರ್ಮಾ, ಹಾರ್ಡವೇರ್, ಬ್ಯಾಂಕಿಂಗ್, ಇನ್ಸೂರೆನಸ್, ಮಾರ್ಕೆಟಿಂಗ್ ಸೇರಿದಂತೆ 86 ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದವು. ಸೂಕ್ತ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಂಡವು. ಇದರೊಂದಿಗೆ 35 ವರ್ಷ ಮೇಲ್ಪಟ್ಟವರಿಗೂ ಕಂಪನಿಗಳು ಉದ್ಯೋಗ ಅವಕಾಶದ ಬಾಗಿಲು ತೆರೆದವು.

ಎಸ್‍ಬಿಐ ಲೈಫ್ ಇನ್ಶುರೆನ್ಸ್ ಕೆಲಸ ಗಿಟ್ಟಿಸಿದ ಅಭ್ಯರ್ಥಿ

ಕಳೆದ ವರ್ಷ ಇಲ್ಲಿಯೇ ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ ಉದ್ಯೋಗಾಕಾಂಕ್ಷಿಯಾಗಿ ಪಾಲ್ಗೊಂಡಿದ್ದ ಹೊಳಲ್ಕೆರೆಯ ಶರತ್ ಆಗ ಎಸ್‍ಬಿಐ ಲೈಫ್ ಇನ್ಶುರೆನ್ಸ್ ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದರು, ಶರತ್ ಈ ಬಾರಿಯ ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಲು ಸಂದರ್ಶಕರಾಗಿ ಪಾಲ್ಗೊಂಡಿದ್ದಾರೆ. ಸದ್ಯ ಅವರು ಮಾಸಿಕ ರೂ.80,000 ವೇತನದ ಪಡೆಯುತ್ತಿದ್ದಾರೆ. 

ಇದನ್ನೂ ಓದಿ: ನಿಮ್ಮ ಈ ಕೆಟ್ಟ ಅಭ್ಯಾಸಗಳು ಥೈರಾಯ್ಡ್‍ ಸಮಸ್ಯೆಗೆ ಕಾರಣವಾಗುತ್ತದೆ?

ಆರೋಗ್ಯ ವಿಮೆ ಮಿತ್ರರಾಗಿ ಕೆಲಸ ಮಾಡುತ್ತಿರುವ ಅವರ ಕುಟುಂಬದ ನಾಲ್ಕು ಸದಸ್ಯರಿಗೆ ತಲಾ ರೂ.5 ಲಕ್ಷದಂತೆ ಕಂಪನಿ ರೂ.20 ಲಕ್ಷ ಆರೋಗ್ಯ ವಿಮಾ ಸೌಲಭ್ಯವನ್ನು ನೀಡಿದೆ. 

2015-16ರಲ್ಲಿ ಚಳ್ಳಕೆರೆ ನಗರದಲ್ಲಿ ಶಾಸಕ ಟಿ.ರಘುಮೂರ್ತಿ ಅವರು ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಎಸ್‍ಬಿಐ ಲೈಫ್ ಇನ್ಶುರೆನ್ಸ್ ಕೆಲಸ ಪಡೆದು, ಸದ್ಯ ಹಿರಿಯ ವ್ಯವಹಾರ ವ್ಯವಸ್ಥಾಪಕ ಕೆಲಸ ನಿರ್ವಹಿಸುತ್ತಿರುವ ಯಶವಂತ ಕುಮಾರ್ ವೇದಿಕೆಯಲ್ಲಿ ಶಾಸಕರಿಗೆ ಧನ್ಯವಾದ ಸಲ್ಲಿಸಿದರು. 

ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿ ನೇಮಕಾತಿ ಪತ್ರ ವಿತರಣೆ ಮಾಡಲಾಯಿತು.

ಇದನ್ನೂ ಓದಿ: ಆಟೋ – ಬಸ್‌ ಡಿಕ್ಕಿ | ವಿದ್ಯಾರ್ಥಿಗಳಿಗೆ ಗಾಯ

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಜಿ.ಪಂ. ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಯೋಜನಾ ನಿರ್ದೇಶಕಿ ಜಯಲಕ್ಷ್ಮೀ, ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆ ಉಪನಿರ್ದೇಶಕ ಮಂಜುನಾಥ್, ಉದ್ಯೋಗಾಧಿಕಾರಿ ರವೀಂದ್ರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಣ್ಣಕ್ಕಿ ಮಾರುತಿ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsJob FairMLA T. Raghumurthyಉದ್ಯೋಗ ಮೇಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಾಸಕ ಟಿ.ರಘುಮೂರ್ತಿ
Share This Article
Facebook Email Print
Previous Article ಅರ್ಜಿ ಅಹ್ವಾನ ರೇಷ್ಮೆ ಬೆಳೆಗಾರರಿಗೆ ಕೃಷಿ ಪ್ರಶಸ್ತಿ | ಅರ್ಜಿ ಅಹ್ವಾನ
Next Article ಐತಿಹಾಸಿಕ ಚಿತ್ರದುರ್ಗ ನೋಡಲು ವಿಶೇಷ ಪ್ಯಾಕೇಜ್ ಐತಿಹಾಸಿಕ ಚಿತ್ರದುರ್ಗ ನೋಡಲು ವಿಶೇಷ ಪ್ಯಾಕೇಜ್ |ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮನವಿಗೆ ಫಲ 
Leave a Comment

Leave a Reply Cancel reply

Your email address will not be published. Required fields are marked *

Omkaalu (Carom seed snack)
ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
Life Style
ಭಾರತೀಯ ವಿಜ್ಞಾನ ಸಂಸ್ಥೆ
ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
ಮುಖ್ಯ ಸುದ್ದಿ
ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
ಮುಖ್ಯ ಸುದ್ದಿ
garlic with mustard oil
ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up