
CHITRADURGA NEWS | 04 OCTOBER 2025
ಚಿತ್ರದುರ್ಗ: ಸಾರ್ವಜನಿಕರು ನಮ್ಮ ಕ್ಲಿನಿಕ್ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.
ಇದನ್ನೂ ಓದಿ: ಕಾರು ಅಪಘಾತ | ಮಗು ಸೇರಿ ಮೂವರು ಸಾವು
ನಗರದ ಕವಾಡಿಗರಹಟ್ಟಿ ನಮ್ಮ ಕ್ಲಿನಿಕ್‍ನಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದಡಿ ಸ್ತ್ರೀ ಶಕ್ತಿ ಸಂಘದ ಸದಸ್ಯರು ಮತ್ತು ಸಾರ್ವಜನಿಕರಿಗೆ ಆಯೋಜಿಸಿದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆರೋಗ್ಯ ಸೇವೆ ನೀಡಲು ಸರ್ಕಾರ ನಮ್ಮ ಕ್ಲಿನಿಕ್‍ಗಳನ್ನು ಪ್ರಾರಂಭಿಸಿರುವುದು ಸಂತಸದ ವಿಷಯ. ಉಚಿತ ಗುಣಮಟ್ಟದ ಪ್ರಾಥಮಿಕ ಆರೋಗ್ಯ ಸೇವೆಗಳು, ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸೆ, ಗರ್ಭಿಣಿಯರು ಮತ್ತು ಶಿಶುಗಳ ಆರೋಗ್ಯ, ಲಸಿಕೆಗಳು ಮತ್ತು ಪ್ರಾಥಮಿಕ ಚಿಕಿತ್ಸಾ ಸೌಲಭ್ಯ ದೊರೆಯಲಿವೆ ಎಂದು ಹೇಳಿದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ, ನಗರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಬಡವರು, ದುರ್ಬಲ ವರ್ಗದವರು ತಕ್ಷಣ ಸಣ್ಣಪುಟ್ಟ ಕಾಯಿಲೆಗಳಿಗೆ ಜಿಲ್ಲಾ ಆಸ್ಪತ್ರೆಗೆ ತೆರಳುವುದು ಕಷ್ಟಕರ.
ಇದನ್ನೂ ಓದಿ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಕಲಾಪ್ರತಿಭೋತ್ಸವ | ಅರ್ಜಿ ಆಹ್ವಾನ
ಪ್ರಯುಕ್ತ ನಮ್ಮ ಕ್ಲಿನಿಕ್‍ನಲ್ಲಿ ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ರಕ್ತದೊತ್ತಡ, ಸಣ್ಣಪುಟ್ಟ ಗಾಯಗಳಿಗೆ ಚಿಕಿತ್ಸೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಜಾಗೃತಿ ಶಿಕ್ಷಣ, ಜೀವನ ಶೈಲಿ ಬದಲಾವಣೆ ಮಾಡಿಕೊಂಡು ಅಸಾಂಕ್ರಾಮಿಕ ರೋಗಗಳಿಗೆ ಕಡಿವಾಣ ಹಾಕಲು ಮತ್ತು ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ನಮ್ಮ ಕ್ಲಿನಿಕ್‍ಗಳು ತುಂಬಾ ಸಹಕಾರಿಯಾಗಿವೆ ಎಂದರು.
ಈ ಸಂದರ್ಭದಲ್ಲಿ ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ.ರಕ್ಷಿತಾ, ಶುಶ್ರುಧಿಕಾರಿ ದಿವ್ಯ. ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಪ್ರವೀಣ್ ಕುಮಾರ್, ನಿತಿನ್, ಆಶಾ ಕಾರ್ಯಕರ್ತೆಯರಾದ ವಿಜಯಲಕ್ಷ್ಮಿ, ಆಶಾ, ಯಶೋಧ ಮತ್ತು ಇತರ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕ ತಾಯಂದಿರು ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
