CHITRADURGA NEWS | 04 JUNE 2025
ಚಿತ್ರದುರ್ಗ: ಪೋಕ್ಸೋ, ಮಾನವ ಕಳ್ಳಸಾಗಣೆ, ದೌರ್ಜನ್ಯ ಪ್ರತಿಬಂಧಕ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಅನೈತಿಕ ವ್ಯವಹಾರ ಪ್ರತಿ ಬಂಧಕ ಕಾಯ್ದೆ ಸೇರಿದಂತೆ ಜಿಲ್ಲಾ ನ್ಯಾಯಾಲಯದಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಕ್ರಮ ವಹಿಸುವುದಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ್ ಹೇಳಿದರು.
ALSO READ: ಹೃದ್ರೋಗಿಗಳು ಮಾವಿನ ಹಣ್ನನ್ನು ತಿನ್ನುವುದು ಎಷ್ಟು ಒಳ್ಳೆಯದು?
ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ, ಜಿಲ್ಲಾ ಮಟ್ಟದ ಪೋಕ್ಸೋ ಹಾಗೂ ಮಾನವ ಕಳ್ಳಸಾಗಣೆ ವಿಶೇಷ ಕಾರ್ಯಪಡೆ ಸೇರಿದಂತೆ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 2023 ರಿಂದ 2025 ಮೇ 31 ರ ವರೆಗೆ ಒಟ್ಟು 343 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 05 ಪ್ರಕರಣಗಳು ಸುಳ್ಳು ಎಂದು ತಿಳಿದು ಬಂದಿದೆ. 13 ಪ್ರಕರಣಗಳನ್ನು ಬೇರಡೆಗೆ ವರ್ಗಾಯಿಸಿದ್ದು, 325 ಪ್ರಕರಣಗಳು ನ್ಯಾಯಾಲಯದ ಮುಂದಿವೆ. 39 ಪ್ರಕರಣಗಳು ತನಿಖಾ ಹಂತದಲ್ಲಿದ್ದು, 211 ಪ್ರಕರಣಗಳ ವಿಚಾರಣೆ ಚಾಲ್ತಿಯಲಿದೆ.
67 ಪ್ರಕರಣಗಳಲ್ಲಿ ಖುಲಾಸೆಗೊಳಿಸಲಾಗಿದೆ. 04 ಪ್ರಕಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ. ತಿಂಗಳಿಗೆ ಸರಾಸರಿ 5 ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿವೆ ಎಂದು ನ್ಯಾಯಾಧೀಶ ರೋಣ ವಾಸುದೇವ್ ತಿಳಿಸಿದರು.
ದೌರ್ಜನ್ಯ ಪ್ರತಿಬಂಧಕ ಕಾಯ್ದೆಯಡಿ 2021 ರಿಂದ ರಿಂದ 2025 ಮೇ 31 ರ ವರೆಗೆ ಒಟ್ಟು 245 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 13 ಪ್ರಕರಣಗಳು ಸುಳ್ಳು ಎಂದು ತಿಳಿದು ಬಂದಿದೆ. 8 ಪ್ರಕರಣಗಳನ್ನು ವರ್ಗಾಯಿಸಲಾಗಿದೆ. 14 ಪ್ರಕರಣಗಳು ತನಿಖಾ ಹಂತದಲ್ಲಿವೆ. 135 ಪ್ರಕರಣಗಳು ವಿಚಾರಣೆ ನಡೆಯುತ್ತಿದ್ದು, 56 ಪ್ರಕರಣಗಳನ್ನು ಖುಲಾಸೆಗೊಳಿಸಲಾಗಿದೆ. 02 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ.
ALSO READ: ಫಲವತ್ತತೆಯನ್ನು ಹೆಚ್ಚಿಸಲು ಸೂರ್ಯಕಾಂತಿ ಬೀಜಗಳು ಹೇಗೆ ಪ್ರಯೋಜನಕಾರಿ? ತಿಳಿಯಿರಿ
ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆಯಡಿ 2021 ರಿಂದ 2025 ಮೇ 31 ರ ವರೆಗೆ 16 ಪ್ರಕರಣಗಳು ದಾಖಲಾಗಿದ್ದು, 12 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ. 03 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. 01 ಪ್ರಕರಣಗ ಖುಲಾಸೆಗೊಳಿಸಲಾಗಿದೆ. ಬಾಲ ನ್ಯಾಯ ಕಾಯ್ದೆಯಡಿ 3, ಅನೈತಿಕ ವ್ಯವಹಾರ ಪ್ರತಿ ಬಂಧಕ ಕಾಯ್ದೆಯಡಿ 6, ಮಾನವ ಕಳ್ಳ ಸಾಗಾಣಿಕೆಯಡಿ 2 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ ಎಂದು ನ್ಯಾಯಾಧೀಶ ರೋಣ ವಾಸುದೇವ್ ಮಾಹಿತಿ ನೀಡಿದರು.
ಸಂಬAದ ಪಟ್ಟ ಇಲಾಖೆಗಳು ಬಾಲ್ಯವಿವಾಹ, ಪೋಕ್ಸೋ, ಬಾಲ ಕಾರ್ಮಿಕ, ದೌಜ್ಯನ್ಯ ಪ್ರತಿಬಂಧಕ, ಮಾನವ ಕಳ್ಳಸಾಗಣಿಕೆ ಕುರಿತು ಜಾಗೃತಿ ಕಾರ್ಯಕ್ರಗಳನ್ನು ಆಯೋಜಿಸಬೇಕು. ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚದಂತೆ ತಡೆಯಲು ಸಾಂಘಿಕ ಪ್ರಯತ್ನ ಅವಶ್ಯಕವಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜಿಲ್ಲಾ ನ್ಯಾಯಾಲಯ ಹಾಗೂ ಕಾನೂನು ಸೇವಾ ಪ್ರಾಧಿಕಾರ ಅಗತ್ಯ ಸಹಕಾರವನ್ನು ನೀಡಲಿದೆ ಎಂದು ನ್ಯಾಯಾಧೀಶ ರೋಣ ವಾಸುದೇವ್ ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಓ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಸಾಕ್ಷರತೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಪೌರಯುಕ್ತೆ ಎಂ.ರೇಣುಕಾ, ಮಕ್ಕಳ ರಕ್ಷಣಾಧಿಕಾರಿ ಸವಿತಾ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಶೀಲಾ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
