By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    45 minutes ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    46 minutes ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    13 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    13 hours ago
    ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    7 days ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    1 hour ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    48 minutes ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    24 hours ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    1 day ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
    Noni fruit
    ಕೂದಲು ಉದುರುವಿಕೆಗೆ ನೋನಿ ಹಣ್ಣು ಪ್ರಯೋಜನಕಾರಿಯೇ? ತಿಳಿಯಿರಿ
    2 days ago
Reading: ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ | ಶಾಸಕ ಟಿ.ರಘುಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ | ಶಾಸಕ ಟಿ.ರಘುಮೂರ್ತಿ

News Desk Chitradurga News
Last updated: 25 April 2026 08:27
News Desk Chitradurga News
4 months ago
Share
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
SHARE

CHITRADURGA NEWS | 25 APRIL 2026

ಚಿತ್ರದುರ್ಗ: ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಪ್ರದೇಶಗಳಲ್ಲಿ ಅಧಿಕಾರಿಗಳು ಕೂಡಲೇ ಸ್ಪಂದಿಸಿ, ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವಂತೆ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ರಘುಮೂರ್ತಿ ನಿರ್ದೇಶನ ನೀಡಿದರು.

ಇದನ್ನೂ ಓದಿ: 

ಬೇಸಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಜನ-ಜಾನುವಾರುಗಳ ಕುಡಿಯುವ ನೀರು, ಮೇವು ಪರಿಸ್ಥಿತಿ ಕುರಿತಂತೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಶುಕ್ರವಾರ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

 ಹಿರಿಯೂರು ತಾಲ್ಲೂಕಿನ ದಿಂಡಾವರ, ಕರಿಯಾಲ ಹಾಗೂ ಜೆ.ಜೆ.ಹಳ್ಳಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಪತ್ರಿಕಾ ವರದಿಗಳು ಪ್ರಕಟವಾಗಿವೆ. ಅಧಿಕಾರಗಳು ಕೂಡಲೇ ಎಚ್ಚೆತ್ತುಕೊಂಡು ಕಾರ್ಯನಿರ್ವಹಿಸಬೇಕು. ಜಲ ಜೀವನ್ ಮಿಷನ್ ಅಡಿ ಕಾಮಗಾರಿ ಪೂರ್ಣಗೊಂಡು ಕಾರ್ಯಾಚರಣೆ ಸಿದ್ದವಿರುವ ಹಳ್ಳಿಗಳಲ್ಲಿ, ಕೂಡಲೇ ಓವರ್ ಹೆಡ್ ಟ್ಯಾಂಕ್‌ಗಳನ್ನು ಭರ್ತಿ ಮಾಡಿ ನೀರು ಸರಬರಾಜಿಗೆ ಚಾಲನೆ ನೀಡಬೇಕು. 

ಗ್ರಾಮೀಣ ಭಾಗದಲ್ಲಿ ಸಾಕಷ್ಟು ಆರ್.ಓ.ಪ್ಲಾಂಟ್‌ಗಳು ಕಾರ್ಯನಿರ್ವಹಿಸದೇ ಶಿಥಿಲಗೊಂಡಿವೆ. ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಇಂಜಿಯುರ್‌ಗಳು ಹಾಗೂ ತಾಲ್ಲೂಕು ಪಂಚಾಯಿತಿ ಇಓಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಆರ್.ಓ.ಪ್ಲಾಂಟ್‌ಗಳ ದುರಸ್ಥಿ ಕ್ರಮ ವಹಿಸಬೇಕು. 

ಇದನ್ನೂ ಓದಿ: 

ಮುಂಬರುವ ದಿನಗಳಲ್ಲಿ ಮಳೆಯ ಕೊರೆತೆ ಎದುರಾಗುವ ಸಂಭವಿದೆ. ಪ್ರಾದೇಶಿಕ ಆಯುಕ್ತರ ಅನುಮತಿ ಪಡೆದು ವಾಣಿ ವಿಲಾಸ ಸಾಗರ ಜಲಾಶಯದಿಂದ ಚಳ್ಳಕೆರೆ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವಂತೆ ಶಾಸಕ ಟಿ.ರಘುಮೂರ್ತಿ ಹೇಳಿದರು.

ರಾಜ್ಯ ಆಹಾರ ಮತ್ತು ನಾಗರಿಕ ಸರಬಾಜು ನಿಗಮದ ಅಧ್ಯಕ್ಷ ಹಾಗೂ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿ, ಹೊಸದುರ್ಗ ತಾಲ್ಲೂಕಿನಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಇರುವ 4 ಗ್ರಾಮಗಳು ಹಾಗೂ ಸಮಸ್ಯೆ ತಲೆದೊರಬಹುದಾದ 9 ಗ್ರಾಮಗಳಲ್ಲಿ ಹೊಸ ಬೋರ್‌ವೆಲ್ ಅಥವಾ ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಬೇಕು. ಹೊಸದುರ್ಗ ಪಟ್ಟಣಕ್ಕೆ ನೀರಿನ ಸಮಸ್ಯೆ ಇಲ್ಲ. ಆದರೆ ವಿತರಣೆ ಜಾಲ ಹಾಗೂ ಅಧಿಕಾರಿಗಳ ಸಮನ್ವಯತೆ ಕೊರತೆಯಿಂದ ಕೃತಕ ಅಭಾವ ಉಂಟಾಗುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ತಾಕೀತು ಮಾಡಿದರು.

 ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ಚಿತ್ರದುರ್ಗ ನಗರಕ್ಕೆ ಸಮೀಪವಿರುವ ಮದಕರಿಪುರಕ್ಕೆ ನಗರದ ಕುಡಿಯುವ ನೀರಿನ ಸಂಪರ್ಕ ಜಾಲದಿಂದ ನೀರು ಒದಗಿಸಬೇಕು. ನಗರದಲ್ಲಿ ಒಟ್ಟು 19 ಆರ್.ಓ.ಪ್ಲಾಂಟ್‌ಗಳಿದ್ದು, ಇದರಲ್ಲಿ 3 ಮಾತ್ರ ಕಾರ್ಯನಿರ್ವಹಿಸುತ್ತಿದ್ದು, 16 ಸ್ಥಗಿತವಾಗಿವೆ. ನಗರಸಭೆ ಅಧಿಕಾರಿಗಳು ಒಂದು ವಾರದಲ್ಲಿ ಈ ಆರ್.ಓ. ಪ್ಲಾಂಟ್‌ಗಳನ್ನು ನಿರ್ಮಿಸಿ, ನಿರ್ವಹಣೆ ಮಾಡುವ ಮಾದರಿಯಲ್ಲಿ ಖಾಸಗಿಯವರಿಗೆ ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: 

ಕೆ.ಎಂ.ಇ.ಆರ್.ಸಿ ಅಥವಾ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಡಿ ಜಿಲ್ಲೆಯ ಎಲ್ಲಾ ಆರ್.ಓ. ಪ್ಲಾಂಟ್‌ಗಳನ್ನು ನಿರ್ಮಿಸಿ-ನಿರ್ವಹಣೆ ಮಾಡುವ ಆಧಾರದಲ್ಲಿ 5 ವರ್ಷಗಳ ಅವಧಿ ಗುತ್ತಿಗೆ ನೀಡಲು ಯೋಜನೆ ರೂಪಿಸುವಂತೆ ಸಭೆಯಲ್ಲಿ ಶಾಸಕರು ಒಕ್ಕೊರಲಿನಿಂದ ಅಧಿಕಾರಿಗಳಿಗೆ ಒತ್ತಾಯಿಸಿದರು.

ವಿಪತ್ತು ನಿರ್ವಹಣಾ ಕೋಶ ತೆರೆಯಲು ತಾಕೀತು:

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಎಲ್ಲಾ ತಾಲ್ಲೂಕು ಪಂಚಾಯತ್ ಮತ್ತು ತಹಶೀಲ್ದಾರ್ ಕಚೇರಿಗಳಲ್ಲಿ ವಿಪತ್ತು ನಿರ್ವಹಣಾ ಕೋಶ ತೆರೆಯಬೇಕು. ದಿನದ 24 ಗಂಟೆಯೂ ಈ ಕೇಂದ್ರಗಳು ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಲು ಮೀಸಲಾದ ಹೆಲ್ಪ್ಲೈನ್ ಸಂಖ್ಯೆಗಳನ್ನು ಮಾಧ್ಯಮಗಳ ಮೂಲಕ ಪ್ರಕಟಿಸಬೇಕು. ಜಿಲ್ಲಾ ಪಂಚಾಯಿತಿಗೆ ‘ಗ್ರಾಮ ಫೋನ್’ ಮೂಲಕ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಿ ಸಮಸ್ಯೆ ಬಗೆಹರಿಸಬೇಕು ಎಂದು ತಾಕೀತು ಮಾಡಿದರು.

ನೀರಿನ ಸಮಸ್ಯೆ ಉಂಟಾದ ಮೇಲೆ ಕ್ರಮ ಕೈಗೊಳ್ಳುವ ಬದಲು, ಮೊದಲೇ ಯೋಜನೆ ರೂಪಿಸಿ ಸಿದ್ಧರಾಗಿರಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡುವುದು ನಮ್ಮ ಮೊದಲ ಆದ್ಯತೆಯಾಗಬೇಕು. ಜಿಲ್ಲೆಯಲ್ಲಿ ಸದ್ಯ 15 ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೊರಿದೆ. ಮುಂಬರುವ ದಿನಗಳಲ್ಲಿ ಸುಮಾರು 69 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದು. 

ಇದನ್ನೂ ಓದಿ: 

ಅಧಿಕಾರಿಗಳು ಸಮಸ್ಯಾತ್ಮಕ ಗ್ರಾಮಗಳ ಸುತ್ತಮುತ್ತಲಿರುವ ಖಾಸಗಿ ಬೋರ್‌ವೆಲ್‌ಗಳನ್ನು ತಕ್ಷಣವೇ ಗುರುತಿಸಿ ಪಟ್ಟಿ ಮಾಡಿಕೊಳ್ಳಬೇಕು. ಸರ್ಕಾರದ ನಿಯಮದಂತೆ ನಿಗದಿಪಡಿಸಿದ ದರ ನೀಡಿ ಖಾಸಗಿ ಬೋರ್‌ವೆಲ್ ಮಾಲೀಕರಿಂದ ನೀರು ಪಡೆದುಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಬೇಕು. ಖಾಸಗಿ ಬೋರೆವೆಲ್‌ಗಳು ಇರದಿದ್ದ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪೂರ್ವಾನುಮತಿ ಪಡೆದು ಹೊಸ ಬೋರ್‌ವೆಲ್ ಕೊರೆಸಲು ಕ್ರಮ ಕೈಗೊಳ್ಳಬೇಕು. 

ಹಳೆಯ ಪಂಪ್ ಮೋಟರ್‌ಗಳನ್ನು ದುರಸ್ಥಿ ಕ್ರಮ ವಹಿಸಬೇಕು. ಈಗಾಗಲೇ ನೀರು ಬತ್ತಿರುವ ಬೋರ್‌ವೆಲ್‌ಗಳ ಮೋಟಾರುಗಳನ್ನು ತೆಗೆದು ಹೊಸದಾಗಿ ಕೊರೆದ ಬೋರ್‌ವೆಲ್‌ಗಳಲ್ಲಿ ಅಳವಡಿಸಲು ಕ್ರಮ ವಹಿಸಬೇಕು. ವಿಪತ್ತು ಪರಿಹಾರ ನಿಧಿಯಿಂದ 100 ರಿಂದ 300 ಮೀಟರ್‌ಗಳವರೆಗೆ ಪೈಪ್‌ಲೈನ್ ವಿಸ್ತರಣೆ ಅನುದಾನ ಒದಗಿಸಲಾಗುವುದು. 

ಜಾಗತಿಕ ಎಲ್ ನಿನೋ ಪರಿಣಾಮವಾಗಿ ಬಾರಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ಶೇ. 30 ರಿಂದ 40 ರಷ್ಟು ಕಡಿಮೆಯಾಗುವ ಮುನ್ಸೂಚನೆಯಿದೆ. ಮುನ್ನೆಚ್ಚರಿಕೆಯಾಗಿ ಜಾನುವಾರುಗಳಿಗೆ ಅಗತ್ಯ ಇರುವ ಮೇವು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಇದನ್ನೂ ಓದಿ: 

ಪ್ರಸ್ತುತ ಜಿಲ್ಲೆಯಲ್ಲಿ 44 ವಾರಗಳಿಗೆ ಆಗುವಷ್ಟು ಮೇವು ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಕೊರತೆಯಾಗದಂತೆ ಕ್ರಮ ವಹಿಸುವುದಾಗಿ ಪಶುಪಾಲನ ಮತ್ತು ಪಶುವೈದ್ಯಕೀಯ ಇಲಾಖೆ ಉಪನಿರ್ದೇಶಕ ಕುಮಾರ್ ಸಭೆಯಲ್ಲಿ ಮಾಹಿತಿ ನೀಡಿದರು.

ಆರ್.ಓ.ಪ್ಲಾಂಟ್‌ಗಳ ನಿರ್ವಹಣೆ ಆದ್ಯತೆ:

ಜಿಲ್ಲೆಯಲ್ಲಿ ಒಟ್ಟು 273 ಆರ್.ಓ ಪ್ಲಾಂಟ್‌ಗಳಿದ್ದು, ಅವುಗಳಲ್ಲಿ 68 ಘಟಕಗಳು ದುರಸ್ಥಿಗೆ ಬಂದಿವೆ. ಇವುಗಳನ್ನು ಶೀಘ್ರವಾಗಿ ಸರಿಪಡಿಸಲು 46 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಈಗಾಗಲೇ 100 ಕ್ಕೂ ಹೆಚ್ಚು ಫಿಲ್ಟರ್‌ಗಳನ್ನು ಸರಿಪಡಿಸಲಾಗಿದೆ ಎಂದು ಜಿ.ಪಂ.ಸಿಇಓ ಡಾ.ಆಕಾಶ್ ಸಭೆಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ 23 ಗ್ರಾಮ ಪಂಚಾಯತ್‌ಗಳ 54 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬAದಿದ್ದು, ಈಗಾಗಲೇ ಸಮಸ್ಯಾತ್ಮಕ ಗ್ರಾಮಗಳಲ್ಲಿ 54 ಹೊಸ ಬೋರೆವೆಲ್ ಕೊರೆಯಿಸಲಾಗಿದೆ. ಟ್ಯಾಂಕರ್‌ಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದೆ. 

ಇದನ್ನೂ ಓದಿ: 

2023 ರಲ್ಲಿ 82 ಗ್ರಾಮ ಪಂಚಾಯತ್‌ಗಳ 233 ಗ್ರಾಮಗಳಲ್ಲಿ ನೀರಿನ ತೊಂದರೆಯಾಗಿತ್ತು. ಅಂದು 870 ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗಿತ್ತು. 2024 ರಲ್ಲಿ ಬರಗಾಲದ ತೀವ್ರತೆಯಿಂದಾಗಿ ದಾಖಲೆಯ 7,000 ಟ್ಯಾಂಕರ್‌ಗಳನ್ನು ಬಳಸಲಾಗಿತ್ತು. 2025 ರಲ್ಲಿ ಮಳೆ ಉತ್ತಮವಾಗಿದ್ದರಿಂದ ಕೇವಲ 883 ಟ್ಯಾಂಕರ್‌ಗಳ ನೀರು ಸರಬರಾಜು ಮಾಡಲಾಗಿತ್ತು. ಈ ಬಾರಿ ಟ್ಯಾಂಕರ್ ಬದಲು ಹೊಸ ಕೊಳವೆ ಬಾವಿ ಹಾಗೂ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ನೀಡಲು ಒತ್ತು ನೀಡಲಾಗಿದೆ ಎಂದು ತಿಳಿಸಿದರು.

158 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ:

ಜಿಲ್ಲೆಯಲ್ಲಿ ಏಪ್ರಿಲ್‌ನಲ್ಲಿ ಸುರಿದ ಬಿರುಗಾಳಿ ಮತ್ತು ಆಲಿಕಲ್ಲು ಮಳೆಯಿಂದಾಗಿ ಒಟ್ಟು 158 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಇದರಲ್ಲಿ ಹಿರಿಯೂರು ತಾಲೂಕು ಅತಿ ಹೆಚ್ಚು ಹಾನಿಯನ್ನು ಸಂಭವಿಸಿದ್ದು 102.25 ಹೆಕ್ಟೇರ್ ಪ್ರದೇಶದ ಬೆಳೆಗಳು ನಾಶವಾಗಿವೆ. ಚಳ್ಳಕೆರೆ ತಾಲೂಕಿನಲ್ಲಿ 44.80 ಹೆಕ್ಟೇರ್ , ಹೊಸದುರ್ಗ ಮತ್ತು ಹೊಳಲ್ಕೆರೆ ತಾಲೂಕುಗಳಲ್ಲಿ ಒಟ್ಟಾಗಿ 11.00 ಹೆಕ್ಟೇರ್, ಮೊಳಕಾಲ್ಮೂರು ತಾಲೂಕಿನಲ್ಲಿ 0.80 ಹೆಕ್ಟೇರ್ ಪ್ರದೇಶದಲ್ಲಿ ಹಾನಿ ಕಂಡುಬಂದಿದೆ.

ಹಾನಿಗೊಳಗಾದ ತೋಟಗಾರಿಕೆ ಬೆಳೆಗಳ ಪೈಕಿ ದಾಳಿಂಬೆ 77 ಹೆಕ್ಟೇರ್, ಬಾಳೆ 22 ಹೆಕ್ಟೇರ್, ಪಪ್ಪಾಯಿ 16 ಹೆಕ್ಟೇರ್, ಮಾವು 13 ಹೆಕ್ಟೇರ್ ಹಾನಿಯಾಗಿದೆ. ಜಿಲ್ಲೆಯಾದ್ಯಂತ ಕಂದಾಯ ಮತ್ತು ತೋಟಗಾರಿಕೆ ಇಲಾಖೆಗಳಿಂದ ಜಂಟಿ ಸಮೀಕ್ಷೆ ಕೈಗೊಳ್ಳಲಾಗಿದ್ದು ಅಂದಾಜು 32,58,150 ರೂ. ಗಳ ಪರಿಹಾರದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪರಿಹಾರದ ಹಣವು ಸರ್ಕಾರದ ಪರಿಹಾರ ತಂತ್ರಾAಶದ ಮೂಲಕ ರೈತರ ಖಾತೆಗೆ ನೇರವಾಗಿ ಜಮೆಯಾಗಲಿದೆ. ಯಾವುದೇ ಸಮೀಕ್ಷೆಗಳು ಬಾಕಿ ಇರುವುದಿಲ್ಲ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಸಭೆಯಲ್ಲಿ ಮಾಹಿತಿ ನೀಡಿದರು.

ಇದನ್ನೂ ಓದಿ: 

ಸಭೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಬಿಸಿಲಾಘಾತದ ಕುರಿತು ಚರ್ಚಿಸಲಾಯಿತು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಮರನಾಥ್ ಜೈನ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಸೇರಿದಂತೆ ತಹಶೀಲ್ದಾರರು, ತಾ.ಪಂ.ಇಓಗಳು, ವಿವಿಧ ನಗರಸಭೆಗಳ ಪೌರಾಯುಕ್ತು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDrinking WaterMLA T. Raghumurthyproblemಕುಡಿಯುವ ನೀರುಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಾಸಕ ಟಿ.ರಘುಮೂರ್ತಿಸಮಸ್ಯೆ
Share This Article
Facebook Email Print
Previous Article Thigh itching problem ಬೇಸಿಗೆಯಲ್ಲಿ ತೊಡೆಯ ತುರಿಕೆ ಸಮಸ್ಯೆ ನಿಮ್ಮ ಕಾಡುತ್ತಿದೆಯೇ? ಹಾಗಾದ್ರೆ ಈ ಸಲಹೆ ಅನುಸರಿಸಿ
Next Article Orange juice ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
Leave a Comment

Leave a Reply Cancel reply

Your email address will not be published. Required fields are marked *

ಭಾರತೀಯ ವಿಜ್ಞಾನ ಸಂಸ್ಥೆ
ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
ಮುಖ್ಯ ಸುದ್ದಿ
ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
ಮುಖ್ಯ ಸುದ್ದಿ
garlic with mustard oil
ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
Life Style
today bhavishya
ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up