
CHITRADURGA NEWS | 13 MAY 2026
ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಜಿಲ್ಲೆಯ ಸರ್ಕಾರಿ ನೌಕರರ ಮಕ್ಕಳ 2026 ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಮಾಲತೇಶ್ ಮುದ್ದಜ್ಜಿ ತಿಳಿಸಿದ್ದಾರೆ.
ಇದನ್ನೂ ಓದಿ: 93 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಅಹ್ವಾನ
2026ನೇ ಸಾಲಿನ SSLC ಮತ್ತು PUC ಪರೀಕ್ಷೆಗಳಲ್ಲಿ ಶೇ.90%ಕ್ಕಿಂತ ಹೆಚ್ಚಿನ ಅಂಕ ಪಡೆದ ಮಕ್ಕಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು https://powermedia.info ಲಿಂಕ್ ಮುಖಾಂತರ ಮೇ.25ರ ಒಳಗಾಗಿ ಸಲ್ಲಿಸಬೇಕು.
ವಿದ್ಯಾರ್ಥಿಯು 2026ರ ಎಸ್,ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. ನೌಕರರ ಸಂಘದ ಸದಸ್ಯತ್ವ ಹೊಂದಿರಬೇಕು. ಸಂಘದಿಂದ ನಿಗದಿಪಡಿಸಿರುವ ನಮೂನೆಯಲ್ಲಿ ಜಿಲ್ಲಾ, ತಾಲೂಕು ಅಥವಾ ಯೋಜನಾ ಶಾಖೆ ಅಧ್ಯಕ್ಷರಿಂದ ಸೇವಾ ದೃಢೀಕರಣ ಪತ್ರವನ್ನು ದೃಢೀಕರಿಸಿರಬೇಕು.
ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ. ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEANEWSYOUTUBE ಚಾನಲ್‍ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಸುಧಾಕರ್ ನೆನೆದು ಪಪ್ಪಿ ಭಾವುಕ ಪೋಸ್ಟ್ | ಈಗಲೇ ಪೋನ್ ಮಾಡಿ ಹೇ ಪಪ್ಪಿ ಎಂದು ಕರೆದಂತನ್ನಿಸುತ್ತಿದೆ…
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧ್ಯಕ್ಷರಾದ ಮಾಲತೇಶ ಮುದ್ದಜ್ಜಿ, ಜಿಲ್ಲಾ ಕಾರ್ಯದರ್ಶಿಗಳಾದ ಆರ್.ಶ್ರೀನಿವಾಸ 9964295532 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಮಾಲತೇಶ್ ಮುದ್ದಜ್ಜಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

