ಮುಖ್ಯ ಸುದ್ದಿ
Lingayatha: ಕುಂಚಿಗ ವೀರಶೈವ ಸಮಾಜದಿಂದ ಪ್ರತಿಭಾ ಪುರಸ್ಕಾರ | ಮಾಜಿ ಶಾಸಕರಾದ ಪಿ.ರಮೇಶ್, ಎಂ.ಬಿ.ತಿಪ್ಪೇರುದ್ರಪ್ಪ ಭಾಗೀ

CHITRADURGA NEWS | 24 AUGUST 2024
ಚಿತ್ರದುರ್ಗ: ಕುಂಚಿಗ ವೀರಶೈವ ಲಿಂಗಾಯತ (Lingayatha) ಸಮಾಜ ಬಲಿಷ್ಟವಾಗಿ ಬೆಳೆಯಬೇಕಾದರೆ ದಾನಿಗಳು ಮುಂದೆ ಬರಬೇಕು ಎಂದು ಸಮಾಜದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಂ.ಬಿ.ತಿಪ್ಪೇರುದ್ರಪ್ಪ ಮನವಿ ಮಾಡಿದರು.
ನಗರದ ಶ್ರೀ ನೀಲಕಂಠೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನೂ ಓದಿ: ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಪೊಲೀಸ್ ಇಲಾಖೆಯಿಂದ ಮಹತ್ವದ ಸೂಚನೆ
ಕಳೆದ 12-13 ವರ್ಷಗಳಿಂದ ಕುಂಚಿಗ ವೀರಶೈವ ಲಿಂಗಾಯತ ಸಮಾಜ ಸಮಾಜಮುಖಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದೇವೆ. ನಮ್ಮ ಸಮಾಜದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸಿ ಸನ್ಮಾನಿಸುತ್ತಿದೆ. ಇದಕ್ಕೆ ಜನಾಂಗದ ಎಲ್ಲರೂ ಕೈಜೋಡಿಸುತ್ತ ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಸಮಾರಂಭ ಮಾಡಬೇಕಾಗಿರುವುದರಿಂದ ಉಳ್ಳವರು ಧಾರಳವಾಗಿ ಸಮಾಜಕ್ಕೆ ನೆರವು ನೀಡಬೇಕೆಂದು ತಿಳಿಸಿದರು.
ಕುಂಚಿಗ ವೀರಶೈವ ಲಿಂಗಾಯತ ಸಮಾಜ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಬಲವಾಗಬೇಕಾಗಿದೆ. ಮಕ್ಕಳನ್ನು ಕಡ್ಡಾಯವಾಗಿ ಶಿಕ್ಷಿತರನ್ನಾಗಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: ವಾರದೊಳಗೆ ಭೂ ಸ್ವಾಧೀನ ಪೂರ್ಣಗೊಳಿಸಿ | ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸೂಚನೆ
ಹೊಳಲ್ಕೆರೆ ಮಾಜಿ ಶಾಸಕ ಪಿ.ರಮೇಶ್ ಮಾತನಾಡಿ, ಪ್ರತಿಯೊಬ್ಬರು ತಮ್ಮ ತಮ್ಮ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ಸಮಾಜದ ಸಂಘಟನೆಗೆ ಹೆಚ್ಚಿನ ಒತ್ತು ಕೊಡಬೇಕು ಎಂದರು.
ನಮ್ಮ ಸಮಾಜಕ್ಕೆ ಸ್ವಾಮೀಜಿಗಳು ಯಾರು ಎನ್ನುವ ಗೊಂದಲವಿದೆ ಎಂದ ಪಿ.ರಮೇಶ್, ಕೀಳರಿಮೆ ಬಿಟ್ಟು ಸಮಾಜಕ್ಕೆ ಏನು ಮಾಡಿದ್ದೇವೆಂದು ಆತ್ಮಾವಲೋಕನ ಮಾಡಿಕೊಳ್ಳಿ ಎಂದರು.
ಆರ್ಥಿಕವಾಗಿ ಕುಂಚಿಗ ವೀರಶೈವ ಲಿಂಗಾಯತ ಸಮಾಜ ಬಲವಾಗಬೇಕಿದೆ. ಮುಂದಿನ ವರ್ಷದಿಂದ ಇಂತಹ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಬೇಕಾಗಿರುವುದರಿಂದ ದಾನಿಗಳು ದೊಡ್ಡ ಮನಸ್ಸು ಮಾಡಿ ಆರ್ಥಿಕ ನೆರವು ನೀಡಬೇಕು. ಇದರಿಂದ ಸಮಾಜಮುಖಿಯಾಗಿ ಬೆಳೆಯಲು ಸಹಕಾರಿಯಾಗಲಿದೆ ಎಂದರು.
ಇದನ್ನೂ ಓದಿ: ವಿವಿ ಸಾಗರಕ್ಕೆ 2195 ಕ್ಯೂಸೆಕ್ ನೀರು
ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪ ಮಾತನಾಡಿ, ಎಲ್ಲರೂ ಒಂದೆ ಎಂಬ ಭಾವನೆ ಮೂಡಬೇಕಾಗಿರುವುದರಿಂದ ಕುಂಚಿಗ ವೀರಶೈವ ಲಿಂಗಾಯತರು ಮೊದಲು ಸಂಘಟಿತರಾಗಬೇಕು. ಅದಕ್ಕಾಗಿ ಪರಸ್ಪರ ಸಹಕಾರ ಮುಖ್ಯ. ಜನಾಂಗದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಸನ್ಮಾನಿಸಿದರೆ ಇತರೆಯವರಿಗೆ ಪ್ರೇರಣೆ ನೀಡಿದಂತಾಗುತ್ತದೆ ಎಂದರು.

ಕುಂಚಿಗ ವೀರಶೈವ ಸಮಾಜದಿಂದ ಪ್ರತಿಭಾ ಪುರಸ್ಕಾರ
ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಡರ್ಮಾಲಜಿಸ್ಟ್ ಡಾ.ಯೋಗೇಂದ್ರ ಮಾತನಾಡಿ, ಸಮಾಜದಿಂದ ಸನ್ಮಾನ ಮಾಡಿರುವುದು ಇನ್ನು ಹೆಚ್ಚಿನ ಸೇವೆಗೆ ಸ್ಪೂರ್ತಿ ನೀಡಿದಂತಾಗಿದೆ. ಚಿತ್ರದುರ್ಗದಲ್ಲಿ ನವೆಂಬರ್ 8,9,10 ರಂದು ಚರ್ಮ ರೋಗ ವೈದ್ಯರ ಸಮ್ಮೇಳನ ನಡೆಸುವ ಕುರಿತು ಚಿಂತನೆಯಿದ್ದು, 500-600 ವೈದ್ಯರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಚರ್ಮ ರೋಗಕ್ಕೆ ತುತ್ತಾಗುತ್ತಿರುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಸಮಾಜದಿಂದ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಿ. ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಚನ್ನಗಿರಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ರಾಶಿ ಬೆಲೆ ಎಷ್ಟಿದೆ
ಕುಂಚಿಗ ವೀರಶೈವ ಲಿಂಗಾಯತ ಸಮಾಜದ ಕಾರ್ಯದರ್ಶಿ ಹೆಚ್.ಕುಬೇರಪ್ಪ ದಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ಹದಿಮೂರು ವರ್ಷಗಳಿಂದಲೂ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಹಮ್ಮಿಕೊಂಡು ಬರುತ್ತಿದ್ದೇವೆ. ಪ್ರತ್ಯೇಕ ಕಚೇರಿ ಕಟ್ಟಡವಿದೆ. ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ನೆರವು ನೀಡಿದರೆ ಇನ್ನು ದೊಡ್ಡ ಕಟ್ಟಡ ನಿರ್ಮಿಸೋಣ ಎಂದು ಹೇಳಿದರು.
ಕುಂಚಿಗ ವೀರಶೈವ ಲಿಂಗಾಯತ ಸಮಾಜದ ಸಹ ಕಾರ್ಯದರ್ಶಿ ನಿವೃತ್ತ ಡಿವೈಎಸ್ಪಿ ಎಸ್.ಪಿ.ಬಸವರಾಜ್, ಜಿ.ಕೃಷ್ಣಮೂರ್ತಿ, ಡಾ.ಅರವಿಂದ ಪಾಟೀಲ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್.ಬಿ.ರಾಜಶೇಖರಪ್ಪ ವೇದಿಕೆಯಲ್ಲಿದ್ದರು.
ಇದನ್ನೂ ಓದಿ: ಓಬೇನಹಳ್ಳಿ ಗೆಸಂಸದ ಗೋವಿಂದ ಕಾರಜೋಳಭೇಟಿ | ಗ್ರಾಮಕ್ಕೆ ವಿಶೇಷಪ್ಯಾ ಕೇಜ್ ಭರವಸೆ
ಸಮಾಜದ ನಿರ್ದೇಶಕರಾದ ಜಿ.ಆರ್.ರಾಜಪ್ಪ, ಪಿ.ಶಿವಪ್ರಕಾಶ, ಬಿ.ಟಿ.ವಿಶ್ವನಾಥ, ಲವಕುಮಾರ್, ಓಂಕಾರಪ್ಪ, ಯೋಗೇಂದ್ರಪ್ಪ, ಸ್ವಾಮಿ, ನಿವೃತ್ತ ಉಪನ್ಯಾಸಕ ಹರೀಶ್, ಸಿದ್ದಪ್ಪ ಎಂ.ತಿಪ್ಪೇರುದ್ರಪ್ಪ ಮತ್ತಿತರರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ.ಅರವಿಂದ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು.
