CHITRADURGA NEWS | 20 September 2026
ಚಿತ್ರದುರ್ಗ: ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆದ 2026-27ನೇ ಸಾಲಿನ ಚಿತ್ರದುರ್ಗ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಸಿರಿಗೆರೆಯ ಮೈಸೂರು ಬಸವಯ್ಯ ವಸತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಬೀದಿ ನಾಯಿಗಳಿಗೆ ಉಚಿತ ಆಹಾರ ಒದಗಿಸಲು ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಗುಂಪು ಆಟಗಳ ವಿಭಾಗದಲ್ಲಿ ಬಾಲಕರ ಹಾಗೂ ಬಾಲಕಿಯರ ವಾಲಿಬಾಲ್ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿವೆ. ಬಾಲಕಿಯರ ಖೋ-ಖೋ ತಂಡ ದ್ವಿತೀಯ ಸ್ಥಾನ ಪಡೆದು ಆರು ವಿದ್ಯಾರ್ಥಿಗಳು ಹಾಗೂ ಬಾಲಕರ ವಿಭಾಗದಿಂದ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಯೋಗದಲ್ಲಿ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಥ್ಲೆಟಿಕ್ಸ್‌ನ ವೈಯಕ್ತಿಕ ವಿಭಾಗದಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬಾಲಕಿಯರ ವಿಭಾಗದ 100 ಮೀಟರ್ ಹರ್ಡಲ್ಸ್‌ನಲ್ಲಿ ಸಿಂಧೂ ಪ್ರಥಮ ಸ್ಥಾನ ಪಡೆದರೆ, ಹಡಪದ ಪಲ್ಲವಿ 1500 ಮೀಟರ್ ಹಾಗೂ 3000 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಂಕಿತ ಕೆ.ಆರ್. 100 ಮೀಟರ್ ಹರ್ಡಲ್ಸ್‌ನಲ್ಲಿ ಹಾಗೂ ಸಿಂಧೂ 800 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಉದ್ದ ಜಿಗಿತದಲ್ಲಿ ಕಾವೇರಿ ತೃತೀಯ ಸ್ಥಾನ ಪಡೆದಿದ್ದಾರೆ.
ಬಾಲಕರ ವಿಭಾಗದ 4×400 ಮೀಟರ್ ರಿಲೇಯಲ್ಲಿ ಲಿಖಿತ್ ಕುಮಾರ್, ಪವನ್ ಕುಮಾರ್, ಪ್ರದೀಪ್ ಹಾಗೂ ಮನು ಯಾದವ್ ಅವರ ತಂಡ ಪ್ರಥಮ ಸ್ಥಾನ ಪಡೆದಿದೆ. 4×100 ಮೀಟರ್ ರಿಲೇಯಲ್ಲಿ ಲಿಖಿತ್ ಕುಮಾರ್, ಚಿರಂಜೀವಿ, ಪವನ್ ಕುಮಾರ್ ಹಾಗೂ ಮನು ಯಾದವ್ ಅವರ ತಂಡ ದ್ವಿತೀಯ ಸ್ಥಾನ ಗಳಿಸಿದೆ. 200 ಮೀಟರ್ ಓಟದಲ್ಲಿ ಲಿಖಿತ್ ಕುಮಾರ್ ತೃತೀಯ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ: ವಿ.ವಿ.ಸಾಗರದಿಂದ ವೇದಾವತಿಗೆ 0.25 ಟಿಎಂಸಿ ನೀರು | ಮುನ್ನೆಚ್ಚರಿಕೆ ಸೂಚನೆ
ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲ ಎ.ಬಿ. ಮಂಜುನಾಥ್, ದೈಹಿಕ ಶಿಕ್ಷಣ ಉಪನ್ಯಾಸಕ ಜಗದೀಶ್ ಎನ್. ಹಾಗೂ ಕಾಲೇಜಿನ ಉಪನ್ಯಾಸಕ ವೃಂದ ಅಭಿನಂದಿಸಿ, ಜಿಲ್ಲಾ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

