
CHITRADURGA NEWS | 25 JULY 2024
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಬಿ.ಆನಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾ.ಪಂ. ಮೊದಲನೇ ಸಾಮಾನ್ಯ ಸಭೆ(GENERAL MEETING) ನಡೆಯಲಿದೆ.
ಇದನ್ನೂ ಓದಿ: BSP PRESS MEET; ಸಮಾಜವಾದಿ ಪಕ್ಷದಿಂದ ಜು.26 ರಂದು ಪ್ರತಿಭಟನೆ

ತಾಲ್ಲೂಕು ಮಟ್ಟದ ಅಧಿಕಾರಿಗಳು ಜುಲೈ-2024ರ ಅಂತ್ಯದ ವರೆಗಿನ ವರದಿಯೊಂದಿಗೆ ಕಡ್ಡಾಯವಾಗಿ ಖುದ್ದು ಸಭೆಗೆ ಹಾಜರಾಗಬೇಕು. ಇತರೆ ಅಧಿಕಾರಿಗಳು ಅಥವಾ ಸಿಬ್ಬಂದಿಯನ್ನು ನಿಯೋಜಿಸುವಂತಿಲ್ಲ. ಪ್ರಗತಿ ವರದಿಯ 15 ಪ್ರತಿಗಳನ್ನು ಜುಲೈ 25ರ ಒಳಗೆ ಕಚೇರಿಯ ವಿಷಯ ನಿರ್ವಾಹಕರಿಗೆ ಮುದ್ದಾಂ ಸಲ್ಲಿಸಬೇಕು.
ಸಭೆಯಲ್ಲಿ 2024-25ನೇ ಸಾಲಿನ ಜುಲೈ 2024ರ ಅಂತ್ಯಕ್ಕೆ ಇಲಾಖಾವಾರು ಪ್ರಗತಿ ಪರಿಶೀಲನೆ, 2024-25ನೇ ಸಾಲಿನ ಲಿಂಕ್ ಡಾಕ್ಯುಮೆಂಟ್ ವಾರ್ಷಿಕ ಕ್ರಿಯಾ ಯೋಜನೆ ಅನುಮೋದನೆ ಹಾಗೂ ಇತರೆ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ತಾ. ಪಂ. ಇಓ ಹನುಮಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
