
CHITRADURGA NEWS | 21 NOVEMBER 2024
ಚಿತ್ರದುರ್ಗ: ತರಳಬಾಳು ಬೃಹನ್ಮಠದಿಂದ ನಡೆಸುವ ಐತಿಹಾಸಿಕ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಈ ವರ್ಷ ಭರಮಸಾಗರದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.
ಫೆಬ್ರವರಿ 4 ರಿಂದ 12 ರವರೆಗೆ ವಿಜೃಂಭಣೆಯಿಂದ ತರಳಬಾಳು ಹುಣ್ಣಿಮೆ ಮಹೋತ್ಸವ ಆಚರಿಸಲಿದ್ದು, ಈ ಸಂಬಂಧ ಚರ್ಚಿಸಲು ನವೆಂಬರ್ 24 ರಂದು ಸಂಜೆ 4 ಗಂಟೆಗೆ ಸಿರಿಗೆರೆಯ ಗುರುಶಾಂತೇಶ್ವರ ದಾಸೋಹ ಭವನದಲ್ಲಿ ಭಕ್ತರ ಸಮಾಲೋಚನಾ ಸಭೆ ಕರೆಯಲಾಗಿದೆ ಎಂದು ಮಠದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಡಿಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಹೆಚ್ಚಳ
ಸಮಾಲೋಚನಾ ಸಭೆಯ ಸಾನ್ನಿಧ್ಯವನ್ನು ತರಳಬಾಳು ಜಗದ್ಗುರು ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಹಿಸಿಕೊಳ್ಳಲಿದ್ದಾರೆ.
ಮಠದ ಭಕ್ತರು, ಅಭಿಮಾನಿಗಳು, ಸಮಾಲೋಚನಾ ಸಭೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
