By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಬಾಮೈದನನ್ನೇ ಕೊಲೆ ಮಾಡಿದ್ದ ಅಕ್ಕ ಭಾವನಿಗೆ ಜೀವಾವಧಿ ಶಿಕ್ಷೆ
    2 hours ago
    ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 
    12 hours ago
    ರಘುರಾಮರೆಡ್ಡಿ
    ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
    13 hours ago
    ಮುರುಘಾ ಮಠ
    ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
    16 hours ago
    ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
    ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    12 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    7 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    5 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    20 minutes ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    1 hour ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    1 day ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    2 days ago
Reading: ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಸರಳ ಆಚರಣೆ; ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಸರಳ ಆಚರಣೆ; ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

News Desk Chitradurga News
Last updated: 29 December 2023 11:15
News Desk Chitradurga News
2 years ago
Share
SHARE

ಚಿತ್ರದುರ್ಗನ್ಯೂಸ್.ಕಾಂ

ಜಿಲ್ಲೆಯ ಭರಮಸಾಗರದಲ್ಲಿ ಮುಂದಿನ ಫೆಬ್ರುವರಿ ತಿಂಗಳಲ್ಲಿ ನಿಗದಿಯಾಗಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ತೀವ್ರ ಬರಗಾಲದ ಕಾರಣ ಸಿರಿಗೆರೆಯಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಭರಮಸಾಗರ ಏತ ನೀರಾವರಿ ಯೋಜನೆಯ ಭರಮಣ್ಣ ನಾಯಕ ಕೆರೆ ವೀಕ್ಷಣೆ ನಂತರ ಏರ್ಪಡಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ‘2024ರ ಫೆಬ್ರುವರಿ 16ರಿಂದ 24ರವರೆಗೆ ಭರಮ ಸಾಗರದಲ್ಲಿ ಉತ್ಸವ ನಡೆಸಲು ಈ ಹಿಂದೆ ನಿರ್ಧರಿಸಲಾಗಿತ್ತು. ಆದರೆ ಪ್ರಸಕ್ತ ವರ್ಷ ತೀವ್ರ ಬರಗಾಲ ಆವರಿಸಿದ್ದರಿಂದ ಸಿರಿಗೆರೆಯ ತರಳಬಾಳು ಮಠದಲ್ಲಿಯೇ ಉತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಗುತ್ತದೆ. ಭರಮಸಾಗರದಲ್ಲಿ 2025ರಲ್ಲಿ ಉತ್ಸವ ಆಚರಿಸಲಾಗುವುದು’ ಎಂದರು.

‘ರಾಜ್ಯ ಭೀಕರ ಬರ ಎದುರಿಸುತ್ತಿದೆ. ಜನರು ಸಂಕಷ್ಟದಲ್ಲಿದ್ದಾರೆ. ಜನರು ಕಷ್ಟದಲ್ಲಿರುವಾಗ ವಿಜೃಂಭಣೆಯ ಮಹೋತ್ಸವ ಮಾಡುವುದು ಸರಿಯಲ್ಲ’ ಎಂದು ತಿಳಿಸಿದರು.

‘ಭರಮಸಾಗರ ಏತ ನೀರಾವರಿ ಯೋಜನೆ ವಿನೂತನವಾದದ್ದು. ಇದರಲ್ಲಿ ಸಾಧ್ಯವಾದ ಎಲ್ಲಾ ವೈಜ್ಞಾನಿಕ ಚಿಂತನೆಗಳನ್ನು ಅಳವಡಿಸಲಾಗಿದೆ. ಕೆರೆ ಏರಿಯಲ್ಲಿ ಬಿರುಕು ಕಾಣಿಸಿಕೊಂಡಿಲ್ಲದೇ ಇದ್ದಲ್ಲಿ ಇಷ್ಟೊತ್ತಿಗೆ ಕೆರೆ ತುಂಬಿ ನೋಡುಗರ ಕಣ್ಮನ ಸೆಳೆಯುತ್ತಿತ್ತು’ ಎಂದರು.

‘ಕೆಲವರು ಯೋಜನೆಗೆ ತಮ್ಮ ಹೆಸರನ್ನು ಇಡಲು ಪ್ರಸ್ತಾಪ ಮಾಡುತ್ತಿದ್ದಾರೆ. ಭರಮಸಾಗರದ ಐತಿಹಾಸಿಕ ಕೆರೆಯನ್ನು 300 ವರ್ಷಗಳ ಹಿಂದೆ ನಿರ್ಮಿಸಿದವರು ಭರಮಣ್ಣನಾಯಕರು. ಅವರ ಹೆಸರೇ ಮುಂದುವರೆಯಬೇಕು’ ಎಂದು ತಿಳಿಸಿದರು.

‘ಯೋಜನೆಯ ತುರ್ತು ಕೆಲಸಗಳನ್ನು ನಿರ್ವಹಿಸಲು ಸರ್ಕಾರವನ್ನೇ ನಂಬಿಕೊಂಡು ಇರಬಾರದು. ಅದಕ್ಕಾಗಿ ಎಲ್ಲಾ ಕೆರೆಗಳ ಬಳಕೆದಾರರ ಸಂಘವನ್ನು ರಚನೆ ಮಾಡಬೇಕು. ಅವುಗಳ ನಿರ್ವಹಣೆಗಾಗಿ ಆಪತ್‌ ನಿಧಿ ಸಂಗ್ರಹಿಸಿಡಬೇಕು’ ಎಂದು ಹೇಳಿದರು.

ಧಾರವಾಡದ ಇಂಡಿಯನ್‌ ನೆಟ್‌ವರ್ಕ್‌ ಆಫ್‌ ಪಾರ್ಟಿಸಿಪೇಟರಿ ಇರಿಗೇಷನ್‌ ಮ್ಯಾನೇಜ್‌ಮೆಂಟ್‌ ಅಧ್ಯಕ್ಷ ರಾಜೇಂದ್ರ ಪೊದ್ದಾರ್‌ ಮಾತನಾಡಿ,‘ಹವಾಮಾನದಲ್ಲಿ ಉಂಟಾಗುತ್ತಿರುವ ವೈಪರೀತ್ಯದಿಂದ ಭೂಮಿ, ಜಲ ಮತ್ತು ಪಕ್ಷಿಸಂಕುಲಗ ಳಿಗೆ ಗಂಡಾಂತರ ಎದುರಾಗಿದೆ. ಮುಂದೆ ನೀರಿಗಾಗಿ ಪರಿತಪಿಸುವಂತಹ ದಿನಗಳು ಬರುತ್ತವೆ. ಹವಾಮಾನ ಏರುಪೇರಿನ ಕಾರಣದಿಂದ ನೀರಿನ ಕೊರತೆ ಉಂಟಾಗಲಿದೆ. ಶುದ್ಧ ನೀರಿನ ಲಭ್ಯತೆ ಪ್ರಮಾಣ ಕಡಿಮೆಯಾಗಲಿದೆ. ನೀರಿನ ಮಹತ್ವವನ್ನು ಅರಿತು ಪ್ರತಿ ಹನಿ ನೀರನ್ನೂ ರಕ್ಷಣೆ ಮಾಡಬೇಕು ಮತ್ತು ಮಿತವಾಗಿ ಬಳಸಬೇಕು’ ಎಂದು ಸಲಹೆ ನೀಡಿದರು.

‘56 ಕಿ.ಮೀ. ದೂರದ ಭರಮಸಾಗರ ಏತ ನೀರಾವರಿ ಯೋಜನೆಗೆ ₹600 ಕೋಟಿಯನ್ನು ಸರ್ಕಾರ ವೆಚ್ಚ ಮಾಡಿದೆ. ಇದು ಜನರ ತೆರಿಗೆಯ ಹಣ. ಅದನ್ನು ಅರಿತು ಜನರು ಅಪವ್ಯಯವಾಗದಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಜನರ ಹಣ ಅಪವ್ಯಯವಾದಂತೆ ಆಗುತ್ತದೆ’ ಎಂದರು.

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಮಾಜಿ ಸಚಿವ ಎಚ್.‌ ಆಂಜನೇಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.‌ ಚಂದ್ರಪ್ಪ, ಜಗಳೂರು ಶಾಸಕ ಬಿ. ದೇವೇಂದ್ರಪ್ಪ, ಜಿ.ಬಿ. ತೀರ್ಥಪ್ಪ, ಶಶಿ ಪಾಟೀಲ್‌ ಮಾತನಾಡಿದರು. ಕಾಂಗ್ರೆಸ್‌ ಮುಖಂಡ ತಿಪ್ಪೇಸ್ವಾಮಿ, ಡಿ.ವಿ. ಶರಣಪ್ಪ, ಎಚ್.ಬಿ. ಮಲ್ಲಪ್ಪ, ಮಾಜಿ ಶಾಸಕ ಎಚ್.ಪಿ. ರಾಜೇಶ್‌, ಮಂಜುನಾಥ್‌, ಮನೋಜ್‌ಕುಮಾರ್‌, ಸಿ.ಆರ್.‌ ನಾಗರಾಜ್‌, ಇತರರು ಭಾಗವಹಿಸಿದ್ದರು.

107 ಕೆರೆಗಳಿಗೆ ನೀರುಣಿಸಬೇಕಾದ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಯ ಪ್ರಗತಿ ಕುಂಠಿತವಾಗಿದೆ. ತರಳಬಾಳು ಶ್ರೀಗಳ ಮಾರ್ಗದರ್ಶನದಲ್ಲಿ ಸಭೆಗಳು ನಡೆದಿವೆ. ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ನೀರಾವರಿ ಯೋಜನೆಗಳನ್ನು ಸರ್ಕಾರ ಆದ್ಯತೆಯ ಮೇಲೆ ಪೂರೈಸಬೇಕು.
– ಜಿ.ಎಂ.ಸಿದ್ದೇಶ್ವರ, ಸಂಸದ, ದಾವಣಗೆರೆ

 

ರಾಜ್ಯದಲ್ಲಿಯೇ ಇದೊಂದು ವಿನೂತನ ಯೋಜನೆ. 56 ಕಿ.ಮೀ. ದೂರದ ರೈಸಿಂಗ್‌ ಮೇನ್‌ ಇರುವಂತಹ ಯೋಜನೆ ರಾಜ್ಯದಲ್ಲಿ ಬೇರೆ ಎಲ್ಲಿಯೂ ಇಲ್ಲ. ಈ ಯೋಜನೆಯನ್ನು ಕೇವಲ 2 ವರ್ಷಗಳಲ್ಲಿ ಪೂರ್ಣಗೊಳಿಸಲಾಗಿದೆ. ತರಳಬಾಳು ಶ್ರೀಗಳ ಇಚ್ಛಾಶಕ್ತಿ ಮತ್ತು ಅವರು ಹೆಜ್ಜೆಹೆಜ್ಜೆಗೂ ತೋರಿದ ಮಾರ್ಗದರ್ಶನದಿಂದ ಇದು ಸಾಧ್ಯವಾಗಿದೆ.
– ಮಲ್ಲಿಕಾರ್ಜುನ ಗುಂಗೆ, ಕರ್ನಾಟಕ ನೀರಾವರಿ ನಿಗಮದ ನಿವೃತ್ತ ಅಧ್ಯಕ್ಷ

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:droughtIrrigationRitualSimpleSirigereSwamijiTaralabaluಆಚರಣೆತರಳಬಾಳುನೀರಾವರಿಬರಸರಳಸಿರಿಗೆರೆಸ್ವಾಮೀಜಿ
Share This Article
Facebook Email Print
Previous Article ಜೈಲು ರಸ್ತೆ ಬಳಿ ಮನೆಯಲ್ಲಿ ಐದು ಜನರ ನಿಗೂಢ ಸಾವಿನ ಕುರಿತು ದೂರು ದಾಖಲು
Next Article ಐದು ಮೃತದೇಹಗಳಿರುವ ಮನೆಯ ಒಳಗಿನ ಚಿತ್ರಣ ಹೇಗಿದೆ ಗೊತ್ತಾ
Leave a Comment

Leave a Reply Cancel reply

Your email address will not be published. Required fields are marked *

Lip mask and lip balm
ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
Life Style
Accumulation of water around the heart
ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
Life Style
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
ಬಾಮೈದನನ್ನೇ ಕೊಲೆ ಮಾಡಿದ್ದ ಅಕ್ಕ ಭಾವನಿಗೆ ಜೀವಾವಧಿ ಶಿಕ್ಷೆ
ಮುಖ್ಯ ಸುದ್ದಿ
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up