By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    9 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    21 hours ago
    ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
    ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
    21 hours ago
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    22 hours ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    10 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    7 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    9 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    10 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    1 day ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    1 day ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    2 days ago
Reading: ಡಿಸೆಂಬರ್ 07 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ | 12,813 ಅಭ್ಯರ್ಥಿಗಳ ನೊಂದಣಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಡಿಸೆಂಬರ್ 07 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ | 12,813 ಅಭ್ಯರ್ಥಿಗಳ ನೊಂದಣಿ

News Desk Chitradurga News
Last updated: 4 December 2025 18:29
News Desk Chitradurga News
9 months ago
Share
Additional District Collector Kumaraswamy spoke at the pre-exam preparation meeting.
ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಮಾತನಾಡಿದರು.
SHARE

CHITRADURGA NEWS | 04 DECEMBER 2025

ಚಿತ್ರದುರ್ಗ: ಶಾಲಾ ಶಿಕ್ಷಣ ಇಲಾಖೆಯ ಕೇಂದ್ರಿಕೃತ ದಾಖಲಾತಿ ಘಟಕದಿಂದ ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಬರುವ ಡಿ.7 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025 (ಟಿಇಟಿ) ನಡೆಸಲಾಗುತ್ತಿದ್ದು, ಪತ್ರಿಕೆ-1 ಹಾಗೂ ಪತ್ರಿಕೆ-2 ಸೇರಿ ಒಟ್ಟು 12,813 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷಾ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.

ಇದನ್ನೂ ಓದಿ: ಮುರುಘಾ ಮಠದಲ್ಲಿ ಮಾದಾರ ಚೆನ್ನಯ್ಯ ಜಯಂತಿ | ಜಾತಿ ಮೂಲಕ ವ್ಯಕ್ತಿತ್ವ ಗುರುತಿಸುವುದು ಸಲ್ಲ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಈ ಕುರಿತು ಜರುಗಿದ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಟಿ.ಇ.ಟಿ. ಪರೀಕ್ಷೆಗೆ ಸಂಬಂಧಿಸಿದಂತೆ ಡಿ. 07 ರಂದು ಪತ್ರಿಕೆ-1ರ ಪರೀಕ್ಷೆ ಬೆಳಿಗ್ಗೆ 9:30 ರಿಂದ 12 ಗಂಟೆವರೆಗೆ ಹಾಗೂ ಪತ್ರಿಕೆ-2ರ ಪರೀಕ್ಷೆ ಮಧ್ಯಾಹ್ನ 2 ರಿಂದ 4:30 ಗಂಟೆಯವರೆಗೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುಂಜಾನೆ 7 ರಿಂದ 9 ಗಂಟೆಯವರೆಗೆ, ಮಧ್ಯಾಹ್ನ 12:15 ರಿಂದ 1:30 ಗಂಟೆಯವರೆಗೆ ಅಭ್ಯರ್ಥಿಗಳ ಸಮಗ್ರ ತಪಾಸಣೆ ಕಾರ್ಯ ಹಾಗೂ ಪ್ರವೇಶ ಪತ್ರದ ಮುಖ ಚಹರೆಯನ್ನು ತಾಳೆನೋಡಿ ಪರೀಕ್ಷಾ ಕೇಂದ್ರದ ಆವರಣದೊಳಗೆ ಪ್ರವೇಶ ನೀಡಲಾಗುವುದು. 

ಇದಕ್ಕೆ ಕೇಂದ್ರೀಕೃತ ದಾಖಲಾತಿ ಘಟಕದಿಂದ ಸಿಬ್ಬಂದಿಯನ್ನು ನೇಮಿಸಲಾಗುವುದು. ಒಂದು ವೇಳೆ ತಪಾಸಣಾ ಸಿಬ್ಬಂದಿ ಸಮಯಕ್ಕೆ ಬಾರದೆ ಹೋದರೆ, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ತಮ್ಮ ಸಿಬ್ಬಂದಿ ನಿಯೋಜಿಸಿ, ತಪಾಸಣೆ ಕೈಗೊಂಡು ಅಭ್ಯರ್ಥಿಗಳಿಗೆ ಪ್ರವೇಶ ಅವಕಾಶ ನೀಡಬೇಕು. 

ಇದನ್ನೂ ಓದಿ: ಹಿರಿಯೂರು ನಗರಕ್ಕೆ 100 ಕೋಟಿ | ಒಳಚರಂಡಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ

ಈ ಹಿಂದೆ ಕೆ.ಪಿ.ಎಸ್.ಸಿ ಪರೀಕ್ಷೆ ವೇಳೆ ಕೆಲ ಕೇಂದ್ರಗಳಲ್ಲಿ ತಪಾಸಣೆಗೆ ಒಳಗಾಗಲು ನಿಂತ ಅಭ್ಯರ್ಥಿಗಳ ಉದ್ದದ ಸಾಲು, ರಸ್ತೆಯವರೆಗೂ ವ್ಯಾಪಿಸಿತ್ತು. ಈ ರೀತಿಯ ಗೊಂದಲಗಳಿಗೆ ಪರೀಕ್ಷಾ ಕೇಂದ್ರ ಮುಖ್ಯಸ್ಥರು ಅವಕಾಶ ನೀಡಬಾರದು. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಸಹ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸಬೇಕು. ಈ ಕುರಿತು ಪ್ರವೇಶ ಪತ್ರದಲ್ಲಿ ಸೂಚನೆ ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಬಿಗಿ ಪೊಲೀಸ್ ಬಂದೋಬಸ್ತ್‍ಗೆ ನಿರ್ದೇಶನ:

ಪತ್ರಿಕೆ-1ರ ಪರೀಕ್ಷೆ ನಗರದ 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 2,623 ಅಭ್ಯರ್ಥಿಗಳು ಹಾಜರಾಗಲಿದ್ದಾರೆ. ಪತ್ರಿಕೆ-2 ಪರೀಕ್ಷೆ ನಗರದ 35 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 10,190 ಅಭ್ಯರ್ಥಿಗಳು ಹಾಜರಾಗಲಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಇಬ್ಬರಂತೆ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. 

ಇದರೊಂದಿಗೆ ಜಿಲ್ಲಾ ಖಜಾನೆಯಿಂದ ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಓ.ಎಂ.ಆರ್ ಶೀಟ್ ಕೊಂಡೊಯ್ಯುವ ಹಾಗೂ ಮರಳಿ ತರುವ ಮಾರ್ಗಾಧಿಕಾರಿಗಳ ತಂಡಗಳಿಗೂ ಸಶಸ್ತ್ರ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಭದ್ರತೆ ನೀಡಬೇಕು. ತ್ರಿ ಸದಸ್ಯ ಸಮಿತಿ ಅಧಿಕಾರಿಗಳು ಹಾಗೂ ಖಜಾನೆ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಮಾರ್ಗಾಧಿಕಾರಿಗಳಿಗೆ ಪ್ರಶ್ನೆ ಪತ್ರಿಕೆ ಮತ್ತು ಓ.ಎಂ.ಆರ್. ಬಂಡಲ್‍ಗಳನ್ನು ನೀಡಬೇಕು. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 04 | ಹತ್ತಿ ರೇಟ್ ಎಷ್ಟಿದೆ?

ಪರೀಕ್ಷೆ ತರುವಾಯ ಮಾರ್ಗಾಧಿಕಾರಿಗಳು ಉತ್ತರ ಪತ್ರಿಕೆಗಳ ಬಂಡಲ್‍ಗಳನ್ನು ಪೊಲೀಸರ ರಕ್ಷಣೆಯಲ್ಲಿ ಖಜಾನೆಗೆ ತಂದು ಸುರಕ್ಷಿತವಾಗಿ ಇಡಬೇಕು. ಡಿ. 08 ಸೋಮವಾರ ಈ ಉತ್ತರ ಪತ್ರಿಕೆಗಳನ್ನು ಬೆಂಗಳೂರಿನ ಕೇಂದ್ರಿಕೃತ ದಾಖಲಾತಿ ಘಟಕಕ್ಕೆ ನೋಡಲ್ ಅಧಿಕಾರಿಗಳು ಕೊಂಡೊಯ್ಯುವರು. ಈ ಸಮಯದಲ್ಲಿಯೂ ಸಹ ಪೊಲೀಸ್ ಬೆಂಗಾವಲು ಪಡೆಯನ್ನು ನಿಯೋಜಿಸಬೇಕು. ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಪರೀಕ್ಷೆ ಬರೆಯುವ ಕೇಂದ್ರಗಳಿಗೆ ಹಾಗೂ ಕಾಂಪೌಡ್ ಇರದ ಕೇಂದ್ರಗಳಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ನಿರ್ದೇಶನ ನೀಡಿದರು.

ನಿಷೇಧಾಜ್ಞೆ ಜಾರಿ:

ಪರೀಕ್ಷೆ ಪಾವಿತ್ರ್ಯತೆ ಕಾಪಾಡುವ ಹಾಗೂ ಸುರಕ್ಷತೆಯ ದೃಷ್ಠಿಯಿಂದ ನಗರದ 35 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಪ್ರಕಾರ ನಿಷೇಧಾಜ್ಞೆ ಹೊರಡಿಸಲಾಗುವುದು. ಈ ಪ್ರದೇಶಗಳಲ್ಲಿ ಯಾವುದೇ ಜೆರಾಕ್ಸ್ ಹಾಗೂ ಕಂಪ್ಯೂಟರ್ ಸೆಂಟರ್‍ಗಳನ್ನು ತೆರೆಯುವಂತಿಲ್ಲ. 

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಯಾವುದೇ ರೀತಿಯ ಎಲೆಕ್ಟ್ರಾನಿಕ್ ಯಂತ್ರೋಪಕರಣಗಳು ಹಾಗೂ ಮೊಬೈಲ್‍ಗಳನ್ನು ಪರೀಕ್ಷಾ ಕೇಂದ್ರಗಳಿಗೆ ತರುವಂತಿಲ್ಲ. ಅಭ್ಯರ್ಥಿಗಳು ಪ್ರವೇಶ ಪತ್ರಿಕೆಯಲ್ಲಿ ನೀಡಿರುವ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪ್ರಥಮ ಚಿಕಿತ್ಸಾ ಉಪಕರಣ ಹಾಗೂ ಔಷಧಗಳೊಂದಿಗೆ ಆರೋಗ್ಯ ಸಹಾಯಕರನ್ನು ನೇಮಿಸಬೇಕು. ಪರೀಕ್ಷಾ ಅವಧಿಯಲ್ಲಿ ವಿದ್ಯುತ್ ಅಡಚಣೆ ಉಂಟಾಗದಂತೆ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸಂಬಂದಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಪರೀಕ್ಷಾ ಕಾರ್ಯಕ್ಕೆ ಗೈರು: ಕಠಿಣ ಕ್ರಮದ ಎಚ್ಚರಿಕೆ

ಪರೀಕ್ಷಾ ಕೊಠಡಿ ಮೇಲ್ವಿಚಾರಕರನ್ನಾಗಿ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಮಾತ್ರ ನೇಮಿಸುವಂತೆ ಪರೀಕ್ಷಾ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇದನ್ನು ಗಮನದಲ್ಲಿ ಇರಿಸಿಕೊಳ್ಳಬೇಕು. ಒಂದು ವೇಳೆ ಪರೀಕ್ಷಾ ಕಾರ್ಯಕ್ಕೆ ನೇಮಿಸಿದ ಶಿಕ್ಷಕರು ಅಥವಾ ಉಪನ್ಯಾಸಕರು ಗೈರು ಹಾಜರಾದರೆ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಸಿದರು.

ಇದನ್ನೂ ಓದಿ: ಸಿಎಂ ಹುದ್ದೆ ಬದಲಾದರೆ ಡಾ.ಪರಮೇಶ್ವರ್ ಅವರಿಗೆ ಆದ್ಯತೆ ಕೊಡಿ

ಕೆಲ ಖಾಸಗಿ ಶಾಲಾ ಕಾಲೇಜುಗಳಲ್ಲಿ ಅನುದಾನಿತ ಶಿಕ್ಷಕರು ಲಭ್ಯವಿಲ್ಲದಿದ್ದರೆ, ಸ್ಥಳೀಯ ಸರ್ಕಾರಿ ಶಾಲೆಗಳ ಶಿಕ್ಷಕರನ್ನು ಕೊಠಡಿ ಮೇಲ್ವಿಚಾರಕರನ್ನಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೇಮಿಸಬೇಕು. ರೈಲ್ವೇ ಗೇಟ್ ದಾಟಿ ನಗರದ ಹೊರ ವಲಯದಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಮುಂಚಿತವಾಗಿ ಪ್ರಶ್ನೆ ಪತ್ರಿಕೆ ಓಎಂಆರ್ ಬಂಡಲ್ ರವಾನಿಸಲು ಮಾರ್ಗಾಧಿಕಾರಿಗಳು ಕ್ರಮ ವಹಿಸಬೇಕು. ಪರೀಕ್ಷಾ ಅಕ್ರಮಗಳಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಪ್ರತ್ಯೇಕ ಕಾಯ್ದೆ ರೂಪಿಸಿದೆ. ಪರೀಕ್ಷೆ ಕಾರ್ಯಕ್ಕೆ ನಿಯೋಜನೆಗೊಂಡ ಎಲ್ಲಾ ಸಿಬ್ಬಂದಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.  

ಪರೀಕ್ಷೆ ವೆಬ್ ಕಾಸ್ಟಿಂಗ್:

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ-2025 ವೆಬ್ ಕಾಸ್ಟಿಂಗ್ ಮಾಡಲು ಸಿದ್ದತೆಗಳನ್ನು ನಡೆಸಲಾಗಿದೆ. ಈ ಸಂಬಂದ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಂದ ಅಗತ್ಯ ತಾಂತ್ರಿಕ ವಿವರಗಳನ್ನು ಪಡೆಯಲಾಗಿದೆ. ಸಿ.ಸಿ. ಟಿ.ವಿ ಕ್ಯಾಮರಾ ಸೌಲಭ್ಯ ಇರುವ ಕೊಠಡಿಗಳನ್ನು ಪರೀಕ್ಷೆ ಆಯ್ದುಕೊಳ್ಳಲಾಗಿದೆ. 

ಒಂದು ವೇಳೆ ಕೊಠಡಿಗಳಲ್ಲಿ ಸಿ.ಸಿ. ಟಿ.ವಿ ಇರದಿದ್ದರೆ ತಾತ್ಕಾಲಿಕವಾಗಿ ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕಾರ್ಯಕ್ಕೆ ಮಾರ್ಗಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ ಸಭೆಯಲ್ಲಿ ಮಾಹಿತಿ ನೀಡಿದರು.  

ಇದನ್ನೂ ಓದಿ: ಡಿಸಿ ವೃತ್ತದಲ್ಲಿ ಸಾವಿರಾರು ವಿದ್ಯಾರ್ಥಿಗಳು ಜಮಾವಣೆ | ನಶಾಮುಕ್ತ ಭಾರತ ಅಭಿಯಾನಕ್ಕೆ ಕರೆ

ಸಭೆಯಲ್ಲಿ ಡಯಟ್ ಉಪನಿರ್ದೇಶಕ ಎಂ.ನಾಸಿರುದ್ದೀನ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ನೋಡಲ್ ಅಧಿಕಾರಿ ಮಹಮದ್ ಇನಾಯತ್ ಉಲ್ಲಾ, ಜಿಲ್ಲಾ ಖಜನಾಧಿಕಾರಿ ಅಶೋಕ್.ಹೆಚ್.ಟಿ ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಬೆಸ್ಕಾಂ, ಪೊಲೀಸ್, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsTeacher Eligibility TestTETಚಿತ್ರದುರ್ಗಚಿತ್ರದುರ್ಗ ನ್ಯೂಸ್ಟೆಟ್ಶಿಕ್ಷಕರ ಅರ್ಹತಾ ಪರೀಕ್ಷೆ
Share This Article
Facebook Email Print
Previous Article ಮುರುಘಾ ಮಠದಲ್ಲಿ ಮಾದಾರ ಚೆನ್ನಯ್ಯ ಜಯಂತಿ | ಜಾತಿ ಮೂಲಕ ವ್ಯಕ್ತಿತ್ವ ಗುರುತಿಸುವುದು ಸಲ್ಲ
Next Article Registration of crop insurance ಹಿರಿಯೂರು ತಾಲೂಕಿನಲ್ಲಿ ಬೆಳೆ ವಿಮೆ ನೋಂದಣಿ ಪ್ರಾರಂಭ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Women's breasts
ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
Life Style
ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up