CHITRADURGA NEWS | 21 August 2026
ಚಿತ್ರದುರ್ಗ: ವರಮಹಾಲಕ್ಷ್ಮಿ ಹಬ್ಬದ ದಿನವೇ ರಸ್ತೆಯಲ್ಲಿ ಸಿಕ್ಕ ನಗದು ಹಣ, ಚಿನ್ನಾಭರಣ ಹಾಗೂ ಎಟಿಎಂ ಕಾರ್ಡ್ಗಳಿದ್ದ ಪರ್ಸ್ವೊಂದನ್ನು ಪೊಲೀಸರಿಗೆ ಒಪ್ಪಿಸುವ ಮೂಲಕ ಶಿಕ್ಷಕರೊಬ್ಬರು ಮಾನವೀಯತೆ ಮೆರೆದಿದ್ದಾರೆ.
ಇದನ್ನೂ ಓದಿ: ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಘಟನೆ ಇದಾಗಿದೆ. ಶಿಕ್ಷಕ ವಿಶ್ವನಾಥ್ ಅವರು ರಸ್ತೆಯಲ್ಲಿ ಪರ್ಸ್ವೊಂದು ಬಿದ್ದಿರುವುದನ್ನು ಗಮನಿಸಿದ್ದು, ಅದನ್ನು ಪರಿಶೀಲಿಸಿದಾಗ ನಗದು ಹಣ, ಚಿನ್ನಾಭರಣ ಹಾಗೂ ಎಟಿಎಂ ಕಾರ್ಡ್ಗಳು ಪತ್ತೆಯಾಗಿವೆ. ಕೂಡಲೇ ಅವರು ಪರ್ಸ್ನ್ನು ಚಳ್ಳಕೆರೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಪರ್ಸ್ ಕಳೆದುಕೊಂಡಿದ್ದವರು ನಗರದ ಜ್ಯೂವೆಲರಿ ಶಾಪ್ ಮಾಲೀಕರಾದ ಸುಮಾ ಎನ್ನಲಾಗಿದೆ. ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಅಂಗಡಿ ಮುಚ್ಚಿಕೊಂಡು ಲಕ್ಷ್ಮಿ ಪೂಜೆಗೆ ಮನೆಗೆ ತೆರಳುತ್ತಿದ್ದ ವೇಳೆ ಪರ್ಸ್ ಕಳೆದುಕೊಂಡಿದ್ದರು. ಪರ್ಸ್ನಲ್ಲಿ ನಗದು ಹಣ, ಚಿನ್ನಾಭರಣ ಹಾಗೂ ಎಟಿಎಂ ಕಾರ್ಡ್ಗಳಿದ್ದವು.
ವಿಷಯ ತಿಳಿದ ಬಳಿಕ ಚಳ್ಳಕೆರೆ ಪೊಲೀಸರು ಪರ್ಸ್ನಲ್ಲಿದ್ದ ವಸ್ತುಗಳನ್ನು ಪರಿಶೀಲಿಸಿ, ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಅವರ ಸಮ್ಮುಖದಲ್ಲಿ ವಾರಸುದಾರರಿಗೆ ಹಸ್ತಾಂತರಿಸಿದರು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಸ್ಥಳ ಬದಲಾವಣೆ | ಸೆ.14 ಗಣಪತಿ ಪ್ರತಿಷ್ಠಾಪನೆ, ಅಕ್ಟೋಬರ್ 3 ರಂದು ಶೋಭಾಯಾತ್ರೆ
ಪರ್ಸ್ನ್ನು ಪ್ರಾಮಾಣಿಕವಾಗಿ ಪೊಲೀಸರಿಗೆ ಒಪ್ಪಿಸಿದ ಶಿಕ್ಷಕ ವಿಶ್ವನಾಥ್ ಅವರ ಕಾರ್ಯಕ್ಕೆ ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಹಬ್ಬದ ದಿನ ತಮ್ಮ ಅಮೂಲ್ಯ ವಸ್ತುಗಳನ್ನು ಮರಳಿ ಪಡೆದ ಸುಮಾ ಅವರು ಕೂಡ ಶಿಕ್ಷಕರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

