By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
    ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಮನವಿ
    4 hours ago
    ನಾಗರೀಕ ನೋಂದಣಿ ಪದ್ಧತಿಯ ಮೂರನೇ ತ್ರೈಮಾಸಿಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
    ಜನನ–ಮರಣ ನೋಂದಣಿಯಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಿ | ಜಿಲ್ಲಾಧಿಕಾರಿ ಎಸ್. ರಮ್ಯಾ
    4 hours ago
    ಸುದ್ದಿಗೋಷ್ಠಿಯಲ್ಲಿ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಮಾತನಾಡಿದರು
    ಕನ್ನಡ ಶಾಲೆಗಳ ಉಳಿವಿಗೆ ಎಲ್ಲರೂ ಕೈಜೋಡಿಸಿ | ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ
    4 hours ago
    ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಸಮನ್ವಯ ಸಮಿತಿ ಸಭೆ
    ಒಣಗುತ್ತಿರುವ ಬೆಳೆಗಳ ಕಟಾವು ಪ್ರಯೋಗ ತ್ವರಿತವಾಗಿ ಪೂರ್ಣಗೊಳಿಸಿ | ಡಿಸಿ ರಮ್ಯಾ
    4 hours ago
    ಖಾಸ ಬೇಡರ ಪಡೆ
    ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಚಿತ್ರದುರ್ಗದ ಖಾಸ ಬೇಡರ ಪಡೆ ಕಲಾತಂಡ ಭಾಗಿ
    4 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    19 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 18 | ಅನಿರೀಕ್ಷಿತ ಧನಲಾಭ, ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    4 hours ago
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    19 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Face Clean Up vs Facial
    ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
    3 hours ago
    his stone can be used to treat skin infections
    ಈ ಕಲ್ಲನ್ನು ಬಳಸಿ ಚರ್ಮದ ಸೋಂಕನ್ನು ನಿವಾರಿಸಬಹುದಂತೆ
    4 hours ago
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    1 day ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    1 day ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    2 days ago
Reading: HPV ಲಸಿಕೆ ಅಭಿಯಾನ ಯಶಸ್ಸಿಗೊಳಿಸಲು ಶಿಕ್ಷಕರು ಮತ್ತು ಪೋಷಕರು ಕೈಜೋಡಿಸಿ | DDPI ಎಂ.ಆರ್.ಮಂಜುನಾಥ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

HPV ಲಸಿಕೆ ಅಭಿಯಾನ ಯಶಸ್ಸಿಗೊಳಿಸಲು ಶಿಕ್ಷಕರು ಮತ್ತು ಪೋಷಕರು ಕೈಜೋಡಿಸಿ | DDPI ಎಂ.ಆರ್.ಮಂಜುನಾಥ

News Desk Chitradurga News
Last updated: 16 May 2026 18:56
News Desk Chitradurga News
5 months ago
Share
ಹೆಚ್‍ಪಿವಿ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆ
ಹೆಚ್‍ಪಿವಿ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆ
SHARE

CHITRADURG NEWS | 16 MAY 2026

ಚಿತ್ರದುರ್ಗ: ಹೆಣ್ಣು ಮಕ್ಕಳ ಆರೋಗ್ಯ ರಕ್ಷಣೆಗಾಗಿ ಸರ್ಕಾರ ಜಾರಿಗೆ ತಂದಿರುವ ಹೆಚ್‍ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಶಿಕ್ಷಕರು ಮತ್ತು ಪೋಷಕರು ಸಕ್ರಿಯವಾಗಿ ಕೈಜೋಡಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ಹೇಳಿದರು.

ಇದನ್ನೂ ಓದಿ: ನಾಳೆ ನಿವೃತ್ತ IPS ಅಧಿಕಾರಿ ಕೆ.ವಿ.ಗಗನ್ ದೀಪ್ ಅವರಿಗೆ ಗೌರವ ಸಮರ್ಪಣೆ

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಪ್ರೌಢಾಶಾಲೆಗಳ ಮುಖ್ಯ ಶಿಕ್ಷಕರಿಗಾಗಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಹೆಚ್‍ಪಿವಿ ಲಸಿಕಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ 8ನೇ ತರಗತಿಯಲ್ಲಿ 11,103 ಹಾಗೂ 9ನೇ ತರಗತಿಯಲ್ಲಿ 12,462 ಹೆಣ್ಣುಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ 8 ಮತ್ತು 9ನೇ ತರಗತಿಯ ಒಟ್ಟು 23,565 ವಿದ್ಯಾರ್ಥಿನಿಯರಿಗೆ ಈ ಲಸಿಕೆ ನೀಡಲು ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಸರ್ಕಾರಿ, ಅನುದಾನಿತ, ಅನುದಾನರಹಿತ, ನವೋದಯ ಹಾಗೂ ಸಿಬಿಎಸ್‍ಇ, ಐಸಿಎಸ್‍ಇ ಶಾಲೆಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಓದುತ್ತಿರುವ ಹೆಣ್ಣುಮಕ್ಕಳಿಗೆ ಈ ಲಸಿಕೆ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು.

ಹೆಚ್‍ಪಿವಿ ಲಸಿಕೆಯ ಮಹತ್ವದ ಕುರಿತು ಪೋಷಕರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಇದೇ ಮೇ 25 ರಿಂದ 30 ರವರೆಗೆ ಒಂದು ವಾರದ ಅವಧಿಯಲ್ಲಿ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಪೋಷಕರ ಮತ್ತು ಶಿಕ್ಷಕರ ವಿಶೇಷ ಸಭೆಯನ್ನು ಕರೆಯಬೇಕು ಎಂದು ಸೂಚಿಸಿದ ಅವರು, ಸಭೆಯಲ್ಲಿ ಲಸಿಕೆಯಿಂದಾಗುವ ಪ್ರಯೋಜನಗಳು ಮತ್ತು ಅದರ ಮಹತ್ವವನ್ನು ಪೋಷಕರಿಗೆ ಮನವರಿಕೆ ಮಾಡಿಕೊಟ್ಟು, ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ಪ್ರೇರೇಪಿಸಬೇಕು ಎಂದರು.

ಇದನ್ನೂ ಓದಿ: ಡಿ.ಸುಧಾಕರ್ ಆಸೆಯಂತೆ ಚಿತ್ರದುರ್ಗಕ್ಕೆ ಭದ್ರಾ ನೀರು | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) 

 ಭವಿಷ್ಯದಲ್ಲಿ ಹೆಣ್ಣುಮಕ್ಕಳಿಗೆ ಬರಬಹುದಾದ ರೋಗರುಜಿನಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಅತ್ಯಂತ ಕಾಳಜಿಯಿಂದ ಈ ಉಚಿತ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಜಿಲ್ಲೆಯ ಯಾವುದೇ ಒಬ್ಬ ಅರ್ಹ ಹೆಣ್ಣುಮಗು ಕೂಡ ಈ ಲಸಿಕೆಯಿಂದ ವಂಚಿತರಾಗಬಾರದು, ಎಲ್ಲರೂ ಸ್ವಯಂಪ್ರೇರಿತರಾಗಿ ಇದರಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ನೂರರಷ್ಟು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ ಮಾತನಾಡಿ, ಪೋಲಿಯೋ ಮತ್ತು ಸ್ಮಾಲ್‍ಪಾಕ್ಸ್‍ನಂತಹ ಮಾರಕ ಕಾಯಿಲೆಗಳನ್ನು ದೇಶದಿಂದ ನಿರ್ಮೂಲನೆ ಮಾಡಲು ಲಸಿಕಾ ಅಭಿಯಾನಗಳು ಹೇಗೆ ಯಶಸ್ವಿಯಾದವೋ, ಅದೇ ರೀತಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಹೆಚ್.ಪಿ.ವಿ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದರು.

ಕೋವಿಡ್ ನಂತರದ ದಿನಗಳಲ್ಲಿ ಸಾರ್ವಜನಿಕರಲ್ಲಿ ಲಸಿಕೆಗಳ ಬಗ್ಗೆ ಜಾಗೃತಿ ಮತ್ತು ತಿಳುವಳಿಕೆ ಹೆಚ್ಚಾಗಿದ್ದರೂ, ಹೆಚ್.ಪಿ.ವಿ ಲಸಿಕೆಯ ಬಗ್ಗೆ ಇನ್ನೂ ಹೆಚ್ಚಿನ ಪ್ರಚಾರದ ಅಗತ್ಯವಿದೆ. ಸಮಾಜದಲ್ಲಿ ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್‍ನಿಂದ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಹಾಗೂ ಅವರ ಪೋಷಕರಿಗೆ ಲಸಿಕೆಯ ಮಹತ್ವ ಮನವರಿಕೆ ಮಾಡಿಕೊಟ್ಟು ಅವರನ್ನು ಪ್ರೇರೇಪಿಸುವ ಕೆಲಸವನ್ನು ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಮಾಡಬೇಕು ಎಂದರು.

ಇದನ್ನೂ ಓದಿ: ಅಂಬೇಡ್ಕರ್ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಅಹ್ವಾನ 

ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರಸ್ತುತ ವಿವಿಧ ಕಾಯಿಲೆಗಳ ತಡೆಗಾಗಿ 12 ಪ್ರಮುಖ ಲಸಿಕೆಗಳನ್ನು ನೀಡಲಾಗುತ್ತಿದ್ದು, ಅದಕ್ಕೆ ಈಗ ಹೆಚ್.ಪಿ.ವಿ ಲಸಿಕೆಯೂ ಸೇರ್ಪಡೆಯಾಗಿದೆ. ಈ ಲಸಿಕಾ ಅಭಿಯಾನವನ್ನು ಜಿಲ್ಲೆಯಲ್ಲಿ ಸಂಪೂರ್ಣ ಯಶಸ್ವಿಗೊಳಿಸಲು ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಒಟ್ಟಾಗಿ ಶ್ರಮಿಸಬೇಕಿದೆ ಎಂದು ತಿಳಿಸಿದ ಅವರು, ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಗರ್ಭಕಂಠದ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ತಡೆಗಟ್ಟಲು ಹೆಚ್.ಪಿ.ವಿ ಲಸಿಕೆ ಅತ್ಯಂತ ಯಶಸ್ವಿಯಾಗಿದ್ದು, ಶೇ.90 ರಷ್ಟು ಲಸಿಕಾಕರಣದ ಗುರಿ ತಲುಪುವ ಮೂಲಕ ಈ ಕಾಯಿಲೆಯನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದಾಗಿದೆ ಎಂದು ತಿಳಿಸಿದರು.

ಜಾಗತಿಕ ಮಟ್ಟದಲ್ಲಿ ಗರ್ಭಕಂಠದ ಕ್ಯಾನ್ಸರ್ ಮಹಿಳೆಯರನ್ನು ಕಾಡುವ ನಾಲ್ಕನೇ ಅತ್ಯಂತ ಸಾಮಾನ್ಯ ಕ್ಯಾನ್ಸರ್ ಆಗಿದೆ. ಪ್ರತಿವರ್ಷ ವಿಶ್ವದಾದ್ಯಂತ ಸುಮಾರು 6.5 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗುತ್ತಿದ್ದು, 3 ಲಕ್ಷಕ್ಕೂ ಅಧಿಕ ಮಹಿಳೆಯರು ಇದರಿಂದ ಮೃತಪಡುತ್ತಿದ್ದಾರೆ. ಭಾರತದಲ್ಲಿಯೂ ಪ್ರತಿ 1 ಲಕ್ಷ ಮಹಿಳೆಯರಲ್ಲಿ ಸರಾಸರಿ 11 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಸಾವಿನ ಪ್ರಮಾಣವೂ ಹೆಚ್ಚಾಗಿದೆ. ಕಾಯಿಲೆ ಪತ್ತೆಯಾದವರಲ್ಲಿ ಶೇ.50 ರಷ್ಟು ಜನ ಸಾವನ್ನಪ್ಪುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣಗಳ ವದಂತಿ ನಂಬಬೇಡಿ: 

ಹೆಚ್‍ಪಿವಿ ಲಸಿಕೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ನಕಾರಾತ್ಮಕ ವಿಡಿಯೋ ಹಾಗೂ ಸುಳ್ಳು ವದಂತಿಗಳನ್ನು ಸಾರ್ವಜನಿಕರು ಮತ್ತು ಶಿಕ್ಷಕರು ನಂಬಬಾರದು ಎಂದು ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ ತಿಳಿಸಿದರು.

ಇದನ್ನೂ ಓದಿ: ಕೈಮಗ್ಗ ನೇಕಾರರಿಗೆ ರಾಜ್ಯಮಟ್ಟದ ಪ್ರಶಸ್ತಿ | ಅರ್ಜಿ ಸಲ್ಲಿಸಲು ಮೇ.30 ಕೊನೆದಿನ 

ಶಿಕ್ಷಕರು ಈ ಲಸಿಕೆಯ ಮಹತ್ವ ಅರಿತು, ಪೋಷಕರಲ್ಲಿ ಹಾಗೂ ವಿದ್ಯಾರ್ಥಿನಿಯರಲ್ಲಿ ಜಾಗೃತಿ ಮೂಡಿಸುವ ಮೂಲಕ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಹೆಚ್‍ಪಿವಿ ಲಸಿಕಾ ಅಭಿಯಾನದ ಪೋಸ್ಟರ್‍ಗಳನ್ನು ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಡಿವೈಪಿಸಿ ಹನುಮಂತಪ್ಪ, ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಭಾಗ್ಯಜ್ಯೋತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಗೋವಿಂದರೆಡ್ಡಿ, ಗೌರಮ್ಮ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಮುಖ್ಯ ಶಿಕ್ಷಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಯ ಪ್ರಾಂಶುಪಾಲರು, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಹಿರಿಯ ಮೇಲ್ವಿಚಾರಕರು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆರೋಗ್ಯ ನಿರೀಕ್ಷಕರು, ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಎನ್‍ಎಸ್‍ಎಸ್ ಹಾಗೂ ನೆಹರು ಯುವ ಕೇಂದ್ರದ ಸಂಯೋಜಕರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CampaignChitradurgaChitradurga newsHPV vaccineHPV ಲಸಿಕೆಅಭಿಯಾನಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ನಿವೃತ್ತ IPS ಅಧಿಕಾರಿ ಕೆ.ವಿ.ಗಗನ್ ದೀಪ್ ನಾಳೆ ನಿವೃತ್ತ IPS ಅಧಿಕಾರಿ ಕೆ.ವಿ.ಗಗನ್ ದೀಪ್ ಅವರಿಗೆ ಗೌರವ ಸಮರ್ಪಣೆ
Next Article arecanut price list ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
Leave a Comment

Leave a Reply Cancel reply

Your email address will not be published. Required fields are marked *

Face Clean Up vs Facial
ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
Life Style
ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಮನವಿ
ಮುಖ್ಯ ಸುದ್ದಿ
ನಾಗರೀಕ ನೋಂದಣಿ ಪದ್ಧತಿಯ ಮೂರನೇ ತ್ರೈಮಾಸಿಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
ಜನನ–ಮರಣ ನೋಂದಣಿಯಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಿ | ಜಿಲ್ಲಾಧಿಕಾರಿ ಎಸ್. ರಮ್ಯಾ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಮಾತನಾಡಿದರು
ಕನ್ನಡ ಶಾಲೆಗಳ ಉಳಿವಿಗೆ ಎಲ್ಲರೂ ಕೈಜೋಡಿಸಿ | ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up