
ಚಿತ್ರದುರ್ಗನ್ಯೂಸ್.ಕಾಂ
ಹಳೆ ಪಿಂಚಣಿ ಯೋಜನೆ ಜಾರಿ ಹಾಗೂ ವರ್ಗಾವಣೆ ಸಮಸ್ಯೆ ಸೇರಿದಂತೆ ಸರ್ಕಾರಿ ಹಾಗೂ ಖಾಸಗಿ ಶಾಲಾ ಶಿಕ್ಷಕರ ನಡುವೆ ಇರುವ ವೇತನ ತಾರತಮ್ಯ ಹೋಗಲಾಡಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಅಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಭರವಸೆ ನೀಡಿದರು.

ಹೊಸದುರ್ಗ ಪಟ್ಟಣದ ವಿವಿಧ ಶಾಲಾ ಕಾಲೇಜುಗಳಿಗೆ ಗುರುವಾರ ಭೇಟಿ ನೀಡಿ ಮತಯಾಚನೆ ಮಾಡಿದ ಅವರು, ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ಹೆಚ್ಚಿನ ರೀತಿಯಲ್ಲಿ ಪ್ರಥಮ ಪ್ರಾಶಸ್ತ್ಯದ ಮತ ಹಾಕುವ ಮೂಲಕ ಗೆಲುವು ನೀಡಿ ಎಂದು ಮನವಿ ಮಾಡಿದರು.
ಈ ಕ್ಷೇತ್ರದಲ್ಲಿ ಸಮಸ್ಯೆಗಳು ಬಗೆಹರಿಯದೆ ಹಾಗೆ ಉಳಿದಿದೆ. ಕಳೆದ ಸರ್ಕಾರದ ಅವಧಿಯಲ್ಲಿ ನನ್ನ ಪತ್ನಿ ಪೂರ್ಣಿಮಾ ಅವರಿಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡು ಪ್ರಾಮಾಣಿಕ ಕೆಲಸ ಮಾಡಿದ್ದೇವೆ. ಪ್ರತಿ ಹಳ್ಳಿಯಲ್ಲಿಯೂ ಅಭಿವೃದ್ಧಿ ಮಾಡಿದ್ದೇವೆ. ನಮ್ಮ ನಡೆ, ನುಡಿ ನೀವೆಲ್ಲರೂ ನೋಡಿದ್ದೀರಾ. ನೀವು ಕೊಟ್ಟ ಅವಕಾಶವನ್ನು ನಿಮ್ಮ ಸೇವೆಗೆ ಮೀಸಲಿಡುತ್ತೇವೆ ಎಂದರು.
ರಾಜ್ಯದಲ್ಲಿ 102 ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಶೇ 78 ಕಾಲೇಜುಗಳಲ್ಲಿ ಹುದ್ದೆಗಳು ಖಾಲಿ ಉಳಿದಿವೆ. ಹಾಗೆಯೇ ಪಿಯು ಕಾಲೇಜುಗಳಲ್ಲಿ ಹುದ್ದೆಗಳ ಭರ್ತಿ ಆಗಿಲ್ಲ. ಅವುಗಳ ಭರ್ತಿಗೆ ಕ್ರಮ ಕೈಗೊಳ್ಳುವ ಜತೆಗೆ ಏಳನೇ ವೇತನ ಆಯೋಗದ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಹುದ್ದೆಗಳ ನೇಮಕಾತಿಗೆ ಅವಕಾಶ ನೀಡಿಲ್ಲ. ಅದನ್ನು ಸರಿಪಡಿಸುವುದರ ಜೊತೆಗೆ ಅತಿಥಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳು ಜೊತೆ ಈಗಾಗಲೇ ಚರ್ಚಿಸಿದ್ದು ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿಕೊಡುವುದಾಗಿತಿಳಿಸಿದ್ದಾರೆ ಎಂದರು.
ನಿವೃತ್ತ ಫಾರ್ಮಸಿಸ್ಟ್ ಎಂ.ಆರ್.ಸಿ.ಮೂರ್ತಿ, ಯುವಜನ ಸೇವಾ ಕ್ರೀಡಾಧಿಕಾರಿ ವಿ.ಮಹಾಂತೇಶ್, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಗುತ್ತಿಗಟ್ಟೆ ಪ್ರಕಾಶ್, ತಿಮ್ಮಣ್ಣ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಲಕ್ಷ್ಮಯ್ಯ, ಉಪನ್ಯಾಸಕರ ಸಂಘದ ಅಧ್ಯಕ್ಷ ಕಾಂತರಾಜ್, ಸುರೇಶ್, ಜಯಣ್ಣ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
