By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಎಸ್.ಜೆ.ಎಂ. ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ
    ಎಸ್.ಜೆ.ಎಂ. ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ
    3 hours ago
    South-East Graduates' Constituency Election Meeting
    ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಿ | ಕೇಶವ ಪ್ರಸಾದ್
    12 hours ago
    Minister T. Raghumurthy launches the public service campaign
    ಜನರ ಮನೆ ಬಾಗಿಲಿಗೆ ಸರ್ಕಾರ | ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ | ಸಚಿವ ಟಿ.ರಘುಮೂರ್ತಿ
    12 hours ago
    NMC team visits medical college
    ವೈದ್ಯಕೀಯ ಕಾಲೇಜಿನಲ್ಲಿ PG ಸೀಟುಗಳ ಮಂಜೂರಾತಿಗೆ NMC ತಂಡದಿಂದ ಮೊದಲ ಹಂತದ ಪರಿವೀಕ್ಷಣೆ
    15 hours ago
    Veerashaiva Urban Credit Co-operative Society's 25th Anniversary (Silver Jubilee) and Annual General Meeting of All Members
    ವೀರಶೈವ ಅರ್ಬನ್ ಸೊಸೈಟಿ ವ್ಯಾಪ್ತಿ ಜಿಲ್ಲೆಯ ಐದು ತಾಲೂಕುಗಳಿಗೆ ವಿಸ್ತರಣೆ | ಪಟೇಲ್ ಶಿವಕುಮಾರ್
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 day ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    3 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 hours ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    11 hours ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    6 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    7 minutes ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    23 hours ago
    Eucalyptus oil
    ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
    1 day ago
    Iron deficiency in women
    ಮಹಿಳೆಯರು ಕಬ್ಬಿಣದ ಕೊರತೆಯನ್ನು ನೀಗಿಸಲು ಈ 5 ಆಹಾರಗಳನ್ನು ಸೇವಿಸಿ
    2 days ago
    The hands were swollen
    ನಿಮ್ಮ ಕೈಗಳು ಊದಿಕೊಂಡಿದ್ದರೆ ಅದು ಈ ಸಮಸ್ಯೆಗಳ ಸಂಕೇತವಾಗಿರಬಹುದಂತೆ
    2 days ago
Reading: ಎಸ್.ಜೆ.ಎಂ. ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಎಸ್.ಜೆ.ಎಂ. ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

News Desk Chitradurga News
Last updated: 6 September 2026 05:08
News Desk Chitradurga News
3 hours ago
Share
ಎಸ್.ಜೆ.ಎಂ. ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ
ಎಸ್.ಜೆ.ಎಂ. ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ
SHARE

CHITRADURGA NEWS | 06 SEPTEMBER 2026

ಚಿತ್ರದುರ್ಗ: ವಿದ್ಯಾದಾನ ಶ್ರೇಷ್ಠ ದಾನವಾಗಿದ್ದು, ಶಿಕ್ಷಕರು ನಿರಂತರವಾಗಿ ಕಲಿಯುತ್ತಾ ತಮ್ಮ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಹಂಚುವ ಮೂಲಕ ಸಮಾಜದ ಬೆಳವಣಿಗೆಗೆ ಕೊಡುಗೆ ನೀಡಬೇಕು ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ. ಕಳಸದ ಹೇಳಿದರು.

ಇದನ್ನೂ ಓದಿ: ವೈದ್ಯಕೀಯ ಕಾಲೇಜಿನಲ್ಲಿ PG ಸೀಟುಗಳ ಮಂಜೂರಾತಿಗೆ NMC ತಂಡದಿಂದ ಮೊದಲ ಹಂತದ ಪರಿವೀಕ್ಷಣೆ

ನಗರದ ಎಸ್.ಜೆ.ಎಂ. ಕ್ಯಾಂಪಸ್‌ನ ಬಿಚ್ಚುಗತ್ತಿ ಭರಮಣ್ಣನಾಯಕ ಸಭಾಂಗಣದಲ್ಲಿ ಶನಿವಾರ ಎಸ್.ಜೆ.ಎಂ. ವಿಶ್ವವಿದ್ಯಾಲಯ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಅನುಭವವು ಸ್ವಕಲಿಕೆಯಿಂದ ಬರಬೇಕು. ಎಸ್.ಜೆ.ಎಂ. ಸಂಸ್ಥೆಯು 70ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದು, ಹತ್ತಾರು ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸಾವಿರಾರು ಶಿಕ್ಷಕರು ಇಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜಕ್ಕೆ ಕೊಡುಗೆ ನೀಡಿದ ಪೂಜ್ಯರನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕು ಎಂದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಶ್ರೇಷ್ಠ ತತ್ವಜ್ಞಾನಿಯಾಗಿದ್ದು, ಅವರು ಸದಾ ನಮಗೆ ಶಿಕ್ಷಕರಾಗಿದ್ದಾರೆ. ನಳಂದ ವಿಶ್ವವಿದ್ಯಾಲಯಕ್ಕೆ ಹಿಂದೆ ಅನೇಕ ದೇಶಗಳಿಂದ ಶಿಕ್ಷಕರು ಆಗಮಿಸುತ್ತಿದ್ದರು. ಕಾಲಕ್ರಮೇಣ ಅದು ನಾಶವಾದರೂ ಇದೀಗ ಹೊಸ ವಿಶ್ವವಿದ್ಯಾಲಯವಾಗಿ ಬೆಳೆದಿದೆ. ಅದೇ ರೀತಿ ಎಸ್.ಜೆ.ಎಂ. ವಿಶ್ವವಿದ್ಯಾಲಯವೂ ಈ ವರ್ಷದಿಂದ ಆರಂಭವಾಗಿದ್ದು, ಇಲ್ಲಿ ಸ್ಪರ್ಧಾತ್ಮಕ ಚಟುವಟಿಕೆಗಳು ಹಾಗೂ ಸಂಶೋಧನೆಗಳಿಗೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಹೇಳಿದರು.

ಇದನ್ನೂ ಓದಿ: ಜನರ ಮನೆ ಬಾಗಿಲಿಗೆ ಸರ್ಕಾರ | ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ | ಸಚಿವ ಟಿ.ರಘುಮೂರ್ತಿ

ಆಡಳಿತ ಮಂಡಳಿ ಸದಸ್ಯ ಡಾ.ಪಿ.ಎಸ್. ಶಂಕರ್ ಮಾತನಾಡಿ, ಶಿಕ್ಷಕ ಸದಾ ವಿದ್ಯಾರ್ಥಿಯಾಗಿರಬೇಕು. ಪ್ರತಿದಿನ ಹೊಸ ಜ್ಞಾನವನ್ನು ಬೆಳೆಸಿಕೊಂಡು, ತಾನು ಕಲಿತದ್ದನ್ನು ವಿದ್ಯಾರ್ಥಿಗಳಿಗೆ ಕಲಿಸಬೇಕು. ವೃತ್ತಿಯನ್ನು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸುವುದು ಮುಖ್ಯ ಎಂದರು.

ಆಡಳಿತ ಮಂಡಳಿ ಸದಸ್ಯ ಎಸ್.ಎನ್. ಚಂದ್ರಶೇಖರ್ ಮಾತನಾಡಿ, ವಿದ್ಯೆಯಿಂದ ವಿನಯ, ವಿನಯದಿಂದ ಯೋಗ್ಯತೆ ಹಾಗೂ ಯೋಗ್ಯತೆಯಿಂದ ಸಂಪತ್ತು ಲಭಿಸುತ್ತದೆ. ಡಾ. ರಾಧಾಕೃಷ್ಣನ್ ಅವರ ಶೈಕ್ಷಣಿಕ ವೃತ್ತಿ ಎಲ್ಲರಿಗೂ ಮಾದರಿಯಾಗಿದೆ ಎಂದು ತಿಳಿಸಿದರು.

ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ. ಗುಡಸಿ ಮಾತನಾಡಿ, 1966ರಲ್ಲಿ ಎಸ್.ಜೆ.ಎಂ. ವಿದ್ಯಾಪೀಠ ಮಲ್ಲಿಕಾರ್ಜುನ ಜಗದ್ಗುರುಗಳಿಂದ ಆರಂಭಗೊಂಡು ಇಂದು ಎಲ್‌ಕೆಜಿಯಿಂದ ಪಿಎಚ್‌ಡಿ ವರೆಗೆ ವಿಸ್ತಾರಗೊಂಡಿದೆ. ಈ ವರ್ಷದಿಂದ ಎಸ್.ಜೆ.ಎಂ. ವಿಶ್ವವಿದ್ಯಾಲಯ ಆರಂಭವಾಗಿದ್ದು, ಸಂಸ್ಥೆಯ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು.

ಇದನ್ನೂ ಓದಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಿ | ಕೇಶವ ಪ್ರಸಾದ್

ಸಂಶೋಧನೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ವಿಶ್ವವಿದ್ಯಾಲಯದಿಂದ ವಿವಿಧ ಪ್ರಶಸ್ತಿ ಹಾಗೂ ಬಹುಮಾನಗಳನ್ನು ನೀಡಲಾಗುವುದು. ಉತ್ತಮ ವಿಜ್ಞಾನಿ ಪ್ರಶಸ್ತಿಗೆ ₹30 ಸಾವಿರ, ಉತ್ತಮ ಯುವ ವಿಜ್ಞಾನಿ ಪ್ರಶಸ್ತಿಗೆ ₹20 ಸಾವಿರ, ವಿಜ್ಞಾನಕ್ಕೆ ಸಂಬಂಧಿಸಿದ ಉತ್ತಮ ಲೇಖನಕ್ಕೆ ₹10 ಸಾವಿರ, ಉತ್ತಮ ಸಂಶೋಧನೆಗೆ ₹1 ಲಕ್ಷ ಹಾಗೂ ಪಿಜಿ ಸಂಶೋಧನೆಗೆ ₹25 ಸಾವಿರ ಬಹುಮಾನ ನೀಡಲಾಗುವುದು. ಮುಂದಿನ ದಿನಗಳಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿಯನ್ನೂ ನೀಡಲಾಗುವುದು ಎಂದು ಘೋಷಿಸಿದರು.

ಡಾ.ಮುಕುಂದ್ ಮಾತನಾಡಿ, ರಾಷ್ಟ್ರದ ಅಭಿವೃದ್ಧಿ ಕೇವಲ ಆರ್ಥಿಕತೆಯಿಂದ ಸಾಧ್ಯವಲ್ಲ; ಉತ್ತಮ ಶಿಕ್ಷಕರಿಂದಲೂ ಸಾಧ್ಯ. ವಿಶ್ವವಿದ್ಯಾಲಯಗಳು ಕೇವಲ ಪದವಿ ನೀಡುವ ಕೇಂದ್ರಗಳಾಗದೆ, ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು. ಶಿಕ್ಷಕರು ಸಂಶೋಧನಾ ಜ್ಞಾನ, ಕ್ರಿಯಾಶೀಲತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಲೇಖನಗಳನ್ನು ಪ್ರಕಟಿಸುವತ್ತ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ

ಕಾರ್ಯಕ್ರಮದಲ್ಲಿ ಎಲ್ಲಾ ಶಾಲಾ-ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ಭಾಗವಹಿಸಿದ್ದರು. ವರ್ಷಿಣಿ ಮತ್ತು ಆದಿಕೇಶವ ಪ್ರಾರ್ಥಿಸಿದರು. ಕುಲಸಚಿವ ಡಾ.ಗಣಾಚಾರಿ ಸ್ವಾಗತಿಸಿದರು. ಕುಲಸಚಿವೆ (ಪರೀಕ್ಷಾಂಗ) ಡಾ.ಹರಿಣಿ ವಂದಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsS.J.M. UniversityTeachers' Day Celebrationಎಸ್.ಜೆ.ಎಂ. ವಿಶ್ವವಿದ್ಯಾಲಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಿಕ್ಷಕರ ದಿನಾಚರಣೆ
Share This Article
Facebook Email Print
Previous Article Inauguration of Teachers' Day Celebrations ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
Next Article coconut oil to your hair ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
Leave a Comment

Leave a Reply Cancel reply

Your email address will not be published. Required fields are marked *

coconut oil to your hair
ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
Life Style
Inauguration of Teachers' Day Celebrations
ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
ಹೊಳಲ್ಕೆರೆ
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
Dina Bhavishya
Inauguration of the Public Service Movement meeting
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
ಹೊಳಲ್ಕೆರೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up