By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    4 hours ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    4 hours ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    4 hours ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    17 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    16 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    4 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    21 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    4 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    4 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ಗುರುಭವನ ನಿರ್ಮಾಣಕ್ಕೆ ರೂ.2 ಕೋಟಿ | ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಡಿ.ಸುಧಾಕರ್ ಭರವಸೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗುರುಭವನ ನಿರ್ಮಾಣಕ್ಕೆ ರೂ.2 ಕೋಟಿ | ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಡಿ.ಸುಧಾಕರ್ ಭರವಸೆ 

News Desk Chitradurga News
Last updated: 5 September 2025 19:22
News Desk Chitradurga News
1 year ago
Share
ಶಿಕ್ಷಕರ ದಿನಾಚರಣೆ
SHARE

CHITRADURGA NEWS | 05 SEPTEMBER 2025

ಚಿತ್ರದುರ್ಗ: ಜಿಲ್ಲಾ ಕೇಂದ್ರ ಚಿತ್ರದುರ್ಗ ನಗರದಲ್ಲಿ ಗುರುಭವನ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ನೀಡಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.

ಇದನ್ನೂ ಓದಿ: ಸಡಗರದ ಈದ್‍ಮಿಲಾದ್ ಹಬ್ಬ ಆಚರಣೆ | ಮುಸ್ಲಿಂ ಬಾಂಧವರಿಂದ ಮೆರವಣಿಗೆ

ನಗರದ ಕೆ.ಇ.ಬಿ ಸಮುದಾಯ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಶಿಕ್ಷಕರ ದಿನಾಚರಣೆ-ಡಾ.ಸರ್ವೆಪಲ್ಲಿ ರಾಧಾಕೃಷ್ಣನ್‍ರವರ ಜನ್ಮದಿನೋತ್ಸವ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾ ಶಾಖೆಯ ಮನವಿಗೆ ಸ್ಪಂದಿಸಿದ ಸಚಿವ ಡಿ.ಸುಧಾಕರ್, ಜಿಲ್ಲೆಯ ಎಲ್ಲ ಶಾಸಕರ ಸಹಕಾರದೊಂದಿಗೆ ಮುಂದಿನ ವರ್ಷದೊಳಗ ಅತ್ಯುತ್ತಮ ಗುರುಭವನ ನಿರ್ಮಾಣ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಒಂದು ದೇಶ ಅಭಿವೃದ್ಧಿಯಾಗಬೇಕಾದರೆ ಆ ದೇಶದ ಮಾನವ ಸಂಪನ್ಮೂಲ ಸಂಪದ್ಭರಿತವಾಗಿರಬೇಕು. ಈ ಸಂಪದ್ಭರಿತ ಮಾನವ ಸಂಪನ್ಮೂಲದ ನಿರ್ಮಾಣ ಶಿಕ್ಷಕರಿಂದ ಮಾತ್ರ ಸಾಧ್ಯ.

ಇದನ್ನೂ ಓದಿ: ಶಿಕ್ಷಕರ ದಿನಾಚರಣೆ ವಿಶೇಷ ಲೇಖನ | ಅರಿವೆಂಬ ರವಿಯು ಮೂಡಲು | ಗೀತಾ ಭರಮಸಾಗರ

ಸಮಾಜದಲ್ಲಿ ಇಂದಿಗೂ ಶಿಕ್ಷಕರಿಗೆ ಒಳ್ಳೆಯ ಗೌರವವಿದೆ. “ಗುರುವೇ ನಮಃ” ಎಂದು ನಮಿಸುವ ಸಮಾಜ ಗುರುಗಳಿಂದ ಶ್ರೇಷ್ಠವಾದದ್ದನ್ನು ಬಯಸುತ್ತದೆ ಎನ್ನುವುದನ್ನು ಅರಿಯಬೇಕಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿಯೂ ಶಿಕ್ಷಕರು ನಿರ್ಣಾಯಕ ಪಾತ್ರ ವಹಿಸುತ್ತಾರೆ ಮತ್ತು ಅವರ ಬದುಕು ಶಿಕ್ಷಕರಿಂದ ಮಾತ್ರ ಬೆಳಗಲು ಸಾಧ್ಯ ಎಂದು ಅರಿತು ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ಪ್ರಸ್ತುತ ಸಮಾಜದಲ್ಲಿ ಮೌಲ್ಯಗಳು ದಿನೇ ದಿನೇ ಕುಸಿಯುತ್ತಿರುವುದು ಆತಂಕದ ವಿಷಯವಾಗಿದೆ. ಶಿಕ್ಷಕರು ತಮ್ಮ ಪಾಠ ಬೋಧನೆ ಜೊತೆ ಜೊತೆಗೆ ವಿದ್ಯಾರ್ಥಿಗಳಿಗೆ ಮಾನವೀಯ ಹಾಗೂ ನೈತಿಕ ಮೌಲ್ಯಗಳನ್ನು ಮತ್ತು ವೈಚಾರಿಕ ಪ್ರಜ್ಞೆಯನ್ನು ಬೆಳೆಸಬೇಕಾಗಿರುವುದು ಸಮಾಜದ ಅತ್ಯಂತ ತುರ್ತು ಎಂದು ಭಾವಿಸಿ ಶಿಕ್ಷಕರು ಕೆಲಸ ಮಾಡಬೇಕಾಗಿದೆ. ವಿದ್ಯಾರ್ಥಿಯ ಬದುಕು ಶಿಕ್ಷಕರ ಮಾರ್ಗದರ್ಶನ ಆಧರಿಸಿರುತ್ತದೆ ಎನ್ನುವುದನ್ನು ಎಲ್ಲ ಶಿಕ್ಷಕರು ಮನಗಾಣಬೇಕು ಎಂದರು.

ಬದ್ಧತೆಯಿಂದ ಕಾರ್ಯನಿರ್ವಹಿಸಿ, ಉತ್ತಮ ಫಲಿತಾಂಶ ತನ್ನಿ: 

ಶಿಕ್ಷಕರ ಮೇಲೆ ಗುರುತರವಾದ ಜವಾಬ್ದಾರಿಯಿದ್ದು, ಬದ್ಧತೆಯಿಂದ ಕಾರ್ಯನಿರ್ವಹಿಸುವ ಮೂಲಕ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕೆ ಶ್ರಮಿಸಬೇಕು ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಈ ವರ್ಷದಲ್ಲಿ ಶೈಕ್ಷಣಿಕ ಚಟುವಟಿಕೆ, ಪೂರ್ವ ಪರೀಕ್ಷೆ, ಸಾಫಲ್ಯ ಪರೀಕ್ಷೆಗಳನ್ನು ಹೆಚ್ಚಾಗಿ ನಡೆಸುವ ಮೂಲಕ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಪರಿಹಾರ ಬೋಧನೆ ನೀಡುವ ವಿಶೇಷ ತರಗತಿಗಳನ್ನು ನಡೆಸಿ, ವಿದ್ಯಾರ್ಥಿಗಳ ಕಲಿಕಾ ಕೌಶಲ್ಯ ಹೆಚ್ಚಿಸುವ ಮೂಲಕ ಈ ಬಾರಿಯ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆಯು ರಾಜ್ಯದಲ್ಲಿಯೇ 10ನೇ ಸ್ಥಾನದೊಳಗೆ ಬರಲು ಎಲ್ಲ ಅಧಿಕಾರಿಗಳು ಮತ್ತು ಶಿಕ್ಷಕರು ಸಂಘಟಿತ ಶ್ರಮದ ಮೂಲಕ ಕಾರಣೀಭೂತರಾಗಲು ಪ್ರಯತ್ನ ಮಾಡಬೇಕು ಎಂದರು.

ಇದನ್ನೂ ಓದಿ: ಬೆಸ್ಕಾಂ ಇಂಜಿನಿಯರ್ ತಿಮ್ಮರಾಯಪ್ಪ ಲೋಕಾಯುಕ್ತ ಬಲೆಗೆ

ವಿಧಾನ ಪರಿಷತ್ ಶಾಸಕರಾದ ಕೆ.ಎಸ್.ನವೀನ್ ಮಾತನಾಡಿ, ಡಾ.ಸರ್ಪಪಲ್ಲಿ ರಾಧಾಕೃಷ್ಣನ್ ಅವರು ಭಾರತದ ಒಬ್ಬ ಅಗ್ರಗಣ್ಯ ಶಿಕ್ಷಕ, ತತ್ವಜ್ಞಾನಿ ಮತ್ತು ರಾಜನೀತಿ ತಜ್ಞರಾಗಿದ್ದರು ಹಾಗೂ ಭಾರತ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದವರು. ಶಿಕ್ಷಣದ ಬಗ್ಗೆ ಅವರ ಅಚಲ ಭಕ್ತಿಯಿಂದಾಗಿ, ಅವರ ಜನ್ಮ ದಿನವಾದ ಸೆಪ್ಟೆಂಬರ್ 05ಅನ್ನು ದೇಶಾದ್ಯಂತ ಶಿಕ್ಷಕರ ದಿನವಾಗಿ ಆಚರಿಸಲಾಗುತ್ತದೆ. 

ದೇಶ, ಸಮಾಜವನ್ನು ಕಟ್ಟುವ, ಸರಿದಾರಿಗೆ ತರುವ ಅತ್ಯಂತ ಪ್ರಮುಖ ಪಾತ್ರವನ್ನು ಶಿಕ್ಷಕರು ನಿರ್ವಹಿಸುತ್ತಿದ್ದಾರೆ. ನಿಷ್ಠೆ, ಶ್ರದ್ಧೆಯಿಂದ ನಿತ್ಯವೂ ಒತ್ತಡಗಳ ಮಧ್ಯೆ ಶಿಕ್ಷಕರು ತಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ ಅವರು, ಮಗುವನ್ನು ಜವಾಬ್ದಾರಿಯುತ ನಾಗರೀಕನನ್ನಾಗಿ ಮಾಡುವಲ್ಲಿ ಶಿಕ್ಷಕರ ಪಾತ್ರ ಬಹಳ ಅಮೂಲ್ಯವಾದುದು ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. 

ಇದೇ ಸಂದರ್ಭದಲ್ಲಿ 2025-26ನೇ ಸಾಲಿನ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಮತ್ತು ವಿಶೇಷ ಶಿಕ್ಷಕರ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ: ಹೊಳಲ್ಕೆರೆ ಪಟ್ಟಣಕ್ಕೆ ವಾಹನ ಪ್ರವೇಶ ನಿಷೇಧ | ಪರ್ಯಾಯ ಮಾರ್ಗ ಇಲ್ಲಿವೆ ನೋಡಿ..

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಡಯಟ್ ಪ್ರಾಂಶುಪಾಲ ನಾಸಿರುದ್ದೀನ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ, ರಾಜ್ಯ ಪರಿಷತ್ ಸದಸ್ಯ ಎಸ್.ರಾಜಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಬಿ.ಮಹಂತೇಶ್ ಸೇರಿದಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ನಿರ್ದೇಶಕರು ಹಾಗೂ ಶಿಕ್ಷಕರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsGuru BhavanMinister D. SudhakarTeachers' Day Celebrationಗುರುಭವನಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಿಕ್ಷಕರ ದಿನಾಚರಣೆಸಚಿವ ಡಿ.ಸುಧಾಕರ್‌
Share This Article
Facebook Email Print
Previous Article ಸಡಗರದ ಈದ್‍ಮಿಲಾದ್ ಹಬ್ಬ ಆಚರಣೆ | ಮುಸ್ಲಿಂ ಬಾಂಧವರಿಂದ ಮೆರವಣಿಗೆ
Next Article ಶರಣ ಸಂಸ್ಕೃತಿ ಉತ್ಸವದಲ್ಲಿ ಕೃಷಿಮೇಳ, ವಸ್ತು ಪ್ರದರ್ಶನ | ಮುರುಘಾಮಠದಲ್ಲಿ ಪೂರ್ವ ಸಿದ್ದತಾ ಸಭೆ
Leave a Comment

Leave a Reply Cancel reply

Your email address will not be published. Required fields are marked *

H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
ವಚನಾಭಿಷೇಕ ಕಾರ್ಯಕ್ರಮ
ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
ಮುಖ್ಯ ಸುದ್ದಿ
New office bearers elected for Chitradurga Taluk Contractors Association
ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up