CHITRADURGA NEWS | 16 MAY 2025
ಚಿತ್ರದುರ್ಗ: ಪದವಿ ಪೂರ್ವ ಹಂತದಲ್ಲಿಯೇ ಉಪನ್ಯಾಸಕರು ಉನ್ನತ ಶಿಕ್ಷಣದ ಕುರಿತು ವಿದ್ಯಾರ್ಥಿಗಳಿಗೆ ಸೂಕ್ತ ಪ್ರೇರಣೆ ಹಾಗೂ ಮಾರ್ಗದರ್ಶನ ನೀಡಿ ಅವರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್. ಪುಟ್ಟಸ್ವಾಮಿ ಹೇಳಿದರು.
Also Read: ಈ ಹಳ್ಳಿಯಲ್ಲಿನ ಜನರು ಚಿರತೆಗಳಿಗೆ ಹೆದರುವುದಿಲ್ಲವಂತೆ
ನಗರದ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿಯಲ್ಲಿ ಶನಿವಾರ ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರಿನ ಕಾಲೇಜು ಮಾಹಿತಿ ಸಹಯೋಗದಲ್ಲಿ ಜಿಲ್ಲೆಯ ಪಿಯು ಕಾಲೇಜು ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗಾಗಿ ಹಮ್ಮಿಕೊಂಡಿದ್ದ “ಉನ್ನತ ಶಿಕ್ಷಣ ಮಾಹಿತಿ ಕಾರ್ಯಾಗಾರ” ಉದ್ಘಾಟಿಸಿ ಅವರು ಮಾತನಾಡಿದರು.
ಪದವಿಪೂರ್ವ ಶಿಕ್ಷಣ ನಂತರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಮಾಹಿತಿ ಅತ್ಯಗತ್ಯ. ಈ ನಿಟ್ಟಿನಲ್ಲಿ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿದೆ. ಪಿಯು ನಂತರ ಯಾವ ಶಿಕ್ಷಣ ಪಡೆದರೆ ಅನುಕೂಲವಾಗಲಿದೆ ಎಂಬ ಮಾಹಿತಿ ಪದವಿ ಪೂರ್ವ ಹಂತದಲ್ಲಿಯೇ ನೀಡಬೇಕು. ಇದರಿಂದ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಉನ್ನತ ಶಿಕ್ಷಣ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ನೀಡುವ ಮಾಹಿತಿ, ಸಲಹೆ-ಸೂಚನೆಗಳನ್ನು ತಮ್ಮ ವಿದ್ಯಾರ್ಥಿಗಳಿಗೆ ತಲುಪಿಸುವ ಜವಾಬ್ದಾರಿ ಉಪನ್ಯಾಸಕರು ಮಾಡಬೇಕು ಎಂದು ತಿಳಿಸಿದರು.
Also Read: ಬೇಸಿಗೆಯಲ್ಲಿ ಗರ್ಭಿಣಿಯರು ಈ 5 ಪಾನೀಯಗಳನ್ನು ಕುಡಿಯುವುದು ಉತ್ತಮ
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಮಾತನಾಡಿ, ಪಿಯು ನಂತರ ಯಾವ ರೀತಿಯ ಕೋರ್ಸ್‍ಗಳನ್ನು ಆಯ್ಕೆ ಮಾಡಿಕೊಂಡರೆ ವಿದ್ಯಾರ್ಥಿಗಳ ಜೀವನಕ್ಕೆ ಅನುಕೂಲವಾಗಲಿದೆ ಎಂಬ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಿಂದ ತಿಳಿಸುವುದು ಅಗತ್ಯವಾಗಿದೆ.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಇದ್ದು, ಈ ವಿದ್ಯಾರ್ಥಿಗಳಿಗೆ ಮಾಹಿತಿಯ ಕೊರತೆ ಇದೆ. ಮಾಹಿತಿ ಕೊರತೆಯಿಂದ ಜೀವನದಲ್ಲಿ ಹಿನ್ನಡೆಯಾಗುವ ಸಾಧ್ಯತೆಯೂ ಇದೆ. ಹಾಗಾಗಿ ನಾವು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಮೂಲಕ ಅವರ ಸರ್ವಾಂರ್ಗೀಣ ಪ್ರಗತಿಗೆ ಶ್ರಮಿಸಬೇಕಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ನೆರವಿಗಾಗಿ ಬ್ಯಾಂಕ್‍ಗಳು ಸಹ ಶೈಕ್ಷಣಿಕ ಸಾಲಸೌಲಭ್ಯವನ್ನು ನೀಡುತ್ತವೆ.ಇದರ ಜೊತೆಗೆ ಸರ್ಕಾರವು ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ನಿರ್ಮಾಣಕ್ಕೆ ನಾವೆಲ್ಲರೂ ಪಾತ್ರರಾಗೋಣ ಎಂದು ಅಭಿಪ್ರಾಯಪಟ್ಟರು.
Also Read: ಉಗುರುಗಳು ಆಗಾಗ ತುಂಡಾಗುತ್ತಿದ್ದರೆ ಅದು ಈ 5 ರೋಗದ ಲಕ್ಷಣವಂತೆ
ಎಸ್‍ಆರ್‍ಎಸ್ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಟಿ.ಎಸ್.ರವಿ , ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕ ಆಯುಕ್ತ ಪಿ.ವೈ. ದೇವರಾಜ್ ಪ್ರಸಾದ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಸುಬ್ರಮಣ್ಯ, ನಾಜಿಯಾ, ಕಾಲೇಜು ಮಾಹಿತಿಯ ರಾಹುಲ್ ರೆಡ್ಡಿ, ಆರ್ಥಿಕ ಸಲಹೆಗಾರ ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
