CHITRADURGA NEWS | 11 AUGUST 2026
ಚಿತ್ರದುರ್ಗ: ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಸಾರ್ವಜನಿಕರ ಪ್ರವೇಶವನ್ನು ಇದೇ ಆಗಸ್ಟ್ 12 ರಿಂದ 16 ರವರೆಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ.
ಇದನ್ನೂ ಓದಿ: ಆ.13ರಿಂದ ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
ಅಣೆಕಟ್ಟು ಸುರಕ್ಷತಾ ಕಾಯ್ದೆ-2021ರ (Dam Safety Act-2021) ಅನ್ವಯ ವಾಣಿ ವಿಲಾಸ ಹಾಗೂ ಗಾಯತ್ರಿ ಜಲಾಶಯಗಳ ಸಮಗ್ರ ಅಣೆಕಟ್ಟು ಸುರಕ್ಷತಾ ಮೌಲ್ಯಮಾಪನ ಕೈಗೊಳ್ಳಲು Independent Panel of Experts (IPoE) ತಜ್ಞರು ಆ.12 ರಿಂದ 16 ರವರೆಗೆ ಈ ಜಲಾಶಯಗಳಿಗೆ ಭೇಟಿ ನೀಡಿ ಅಣೆಕಟ್ಟುಗಳ ಸುರಕ್ಷತೆ ಕುರಿತು ಸಮಗ್ರ ಪರಿಶೀಲನೆ ನಡೆಸಲಿದ್ದಾರೆ.
Independent Panel of Experts (IPoE) ತಜ್ಞರಿಂದ ಅಣೆಕಟ್ಟುಗಳ ಸುರಕ್ಷತೆಯ ಕುರಿತು ಸಮಗ್ರ ಪರಿಶೀಲನೆ ನಡೆಯುವ ಹಿನ್ನಲೆಯಲ್ಲಿ ಹಾಗೂ ಕೆಲವು ತುರ್ತು ಅಣೆಕಟ್ಟು ಸುರಕ್ಷತಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವುದರಿಂದ ವಿ.ವಿ.ಸಾಗರ ಜಲಾಶಯ ಹಾಗೂ ಗಾಯತ್ರಿ ಜಲಾಶಯಗಳ ವೀಕ್ಷಣೆಗೆ ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

