ಕ್ರೈಂ ಸುದ್ದಿ
ಬೈಕ್, ಬೊಲೆರೋ ನಡುವೆ ಭೀಕರ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
CHITRADURGA NEWS | 16 FEBRUARY 2025
ಹೊಸದುರ್ಗ: ಬೈಕ್ ಹಾಗೂ ಬೊಲೆರೋ ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಧಾರುಣ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಹೊಸದುರ್ಗ ತಾಲೂಕು ಹಾಗಲಕೆರೆ ಹ್ಯಾಂಡ್‍ಪೋಸ್ಟ್ ಬಳಿ ಬೊಲೆರೋ ಪಿಕಪ್ ಬೈಕ್‍ಗೆ ಡಿಕ್ಕಿಯಾಗಿದೆ.
ಇದನ್ನೂ ಓದಿ: ಚಿತ್ರಹಳ್ಳಿ ಪೊಲೀಸರ ಕಾರ್ಯಾಚರಣೆ | ಐವರ ಬಂಧನ | 5 ಲಕ್ಷ ರೂ. ಮೌಲ್ಯದ ಶ್ರೀಗಂಧ ವಶ
ಭೀಕರ ಅಪಘಾತದಲ್ಲಿ ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕು ಬಿಟ್ಟೇನಹಳ್ಳಿ ವಡ್ಡರಹಟ್ಟಿ ಗ್ರಾಮದ ಶಿವಣ್ಣ(53) ಹಾಗೂ ನಾಗರಾಜ್(45) ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಶ್ರೀರಾಂಪುರ ಠಾಣೆ ಪೊಲೀಸ್ ಇನ್ಸ್‍ಪೆಕ್ಟರ್ ಮಧು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.