CHITRADURGA NEWS | 15 JUNE 2024
ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ವಾರಾಂತ್ಯದಲ್ಲಿ ಗೋವಾಕ್ಕೆ ಪ್ರವಾಸ ತೆರಳುತ್ತಿದ್ದವರ ಪ್ರಾಣಪಕ್ಷಿ ನಡು ರಸ್ತೆಯಲ್ಲೇ ಹಾರಿದೆ.
ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ತಣಸಂದ್ರ ಮೂಲದ ಪ್ರಜ್ವಲ್ ರೆಡ್ಡಿ (30) ಹರ್ಷಿತ, (28), ಸೋಹನ್ (02) ಮೃತ ದುರ್ದೈವಿಗಳು. ಬೆಂಗಳೂರಿನಿಂದ ಗೋವಾಕ್ಕೆ ತೆರಳುವ ವೇಳೆ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ.
ಕಾರಿಲ್ಲಿದ್ದ ಮೂವರು ಮೃತಪಟ್ಟಿದ್ದು, ತೀವ್ರ ಗಾಯಗೊಂಡ ಶಿಲ್ಪ, ಸ್ವರ್ಣಜಾರ್ಜ್, ಮಧುಮಿತ, ವಿಜಯರೆಡ್ಡಿ, ಶಿಚಿ ಕೃಷ್ಣ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಫಾರ್ಚೂನರ್ ಕಾರು ಲಾರಿ ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ಮೂವರ ಸಾವು | ಐದು ಜನರಿಗೆ ಗಂಭೀರ ಗಾಯ
ಚಲಿಸುತ್ತಿದ್ದ ಲಾರಿಯ ಟೈಯರ್ ಬ್ಲಾಸ್ಟ್ ಆಗಿದ್ದರಿಂದ ಹಿಂದಿನಿಂದ ಲಾರಿಗೆ ಕಾರು ಡಿಕ್ಕಿಯಾಗಿರುವುದೇ ಘಟನೆ ಕಾರಣ ಎಂದು ತಿಳಿದು ಬಂದಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
