CHITRADURGA NEWS | 11 JANUARY 2026
ಚಿತ್ರದುರ್ಗ: ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ಬಸ್‌ಗೆ ಕಂಟೇನರ್ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ನಾಲ್ವರು ಸಜೀವದಹನವಾದ ಸುದ್ದಿ ಮಾಸುವ ಮುನ್ನವೇ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
ಹಿರಿಯೂರು ತಾಲೂಕಿನ ಹಿಂಡಸ್‌ಕಟ್ಟೆ ಬಳಿ ಈಚರ್ ಲಾರಿ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ದುರ್ಮರಣ ಹೊಂದಿರುವ ಘನಘೋರ ಘಟನೆ ಶನಿವಾರ ರಾತ್ರಿ ಘಟಿಸಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 10 ಜನವರಿ |ತೀರ್ಥಹಳ್ಳಿ, ಹೊನ್ನಾಳಿ ಮಾರುಕಟ್ಟೆ ರೇಟ್
ಹಿರಿಯೂರು ತಾಲೂಕು ನಂಜಯ್ಯನ ಕೊಟ್ಟಿಗೆ ಮೂಲದ ವಿಶಾಲ್(24) ಯಶವಂತ್(22), ನಂಜುಂಡಿ(22) ಹಾಗೂ ರಾಹುಲ್(19) ಮೃತ ಯುವಕರು.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಈ ನಾಲ್ವರು ಯುವಕರು ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ: ಹಿರಿಯೂರು ಬಸ್ ಅಗ್ನಿ ದುರಂತ | ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಂಪೂರ್ಣ ಮಾಹಿತಿ
ಹಿರಿಯೂರಿನಿಂದ ಹುಳಿಯಾರು ಕಡೆಗೆ ಹೊರಟಿದ್ದ ಈಚರ್ ಲಾರಿ ಹಾಗೂ ಹುಳಿಯಾರು ಕಡೆಯಿಂದ ಹಿರಿಯೂರಿಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
