CHITRADURGA NEWS | 5 JUNE 2026
ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಕುರಿಗಾಯಿಗಳು ಹಾಗೂ 14 ಕುರಿಗಳು ಮೃತಪಟ್ಟಿರುವ ಘಟನೆ ಬೆಳ್ಳಂ ಬೆಳಗ್ಗೆ ನಡೆದಿದೆ.

ಚಿತ್ರದುರ್ಗ ತಾಲೂಕಿನ ಜಾನುಕೊಂಡ ಬಳಿ ಶಿವಮೊಗ್ಗ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ:ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್
ಮೃತರನ್ನು ಚಳ್ಳಕೆರೆ ತಾಲೂಕು ನನ್ನಿವಾಳದ ಸಣ್ಣ ಬೋರಯ್ಯ ಹಾಗೂ ಕಿರಣ್ ಎಂದು ಗುರುತಿಸಲಾಗಿದೆ.
ಹೊಳಲ್ಕೆರೆ ಕಡೆಯಿಂದ ಚಿತ್ರದುರ್ಗದ ಕಡೆಗೆ ಕುರಿಗಳನ್ನು ಕರೆದುಕೊಂಡು ಬರುವಾಗ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ:ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
ಚಳ್ಳಕೆರೆ ಕಡೆಗೆ ಕುರಿ ಹೊಡೆದುಕೊಂಡು ಬರುತ್ತಿದ್ದಾಗ ಹಿಂಬದಿಯಿಂದ ವಾಹನ ಹರಿದು ಸ್ಥಳದಲ್ಲೇ ಇಬ್ಬರು ಕುರಿ ಮೇಯಿಸುವವರು ಮೃತಪಟ್ಟಿದ್ದಾರೆ. ಜೊತೆಗೆ 14 ಕುರಿಗಳು ಮೃತಪಟ್ಟಿವೆ.
ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪಿಎಸ್‌ಐ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
