CHITRADURGA NEWS | 15 March 2026
ಚಿತ್ರದುರ್ಗ: ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಕನ್ನಡ ಸಾಹಿತ್ಯ ವಿಮರ್ಶೆ ಕುರಿತು ವಿಶೇಷ ಉಪನ್ಯಾಸ
ಮೃತರೆಲ್ಲರೂ ಬೆಂಗಳೂರು ಮೂಲದ ರಿಸರ್ವ್ ಪೊಲೀಸ್ ಅಧಿಕಾರಿಗಳು. ಅಪಘಾತದಲ್ಲಿ ಮಡಿದವರನ್ನು RSI ಮಂಜುನಾಥ್ (32), RSI ಅಮರೇಶ್ ಹಾಗೂ RSI ಸಚ್ಚಿನ್ ಎಂದು ಗುರುತಿಸಲಾಗಿದೆ.
ಗಾಯಾಳುಗಳಾದ ಮಹಾಂತೇಶ್, ಈಶ್ವರ ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಐಮಂಗಲ ಠಾಣಾ ವ್ಯಾಪ್ತಿಯಲ್ಕಿ ಬೆಳಗಿನ ಜಾವ ಈ ಘಟನೆ ನಡೆದಿದೆ.
ಭೀಕರ ಅಪಘಾತದಲ್ಲಿ ಮೂರು ಜನ RSI ಗಳು ಮೃತಪಟ್ಟಿದ್ದು, ಓರ್ವ RSI ಮಹಾಂತೇಶ್ ಹಾಗೂ Civil PSI ಈಶ್ವರ್ ಗಾಯಗೊಂಡಿದ್ದಾರೆ.
ಇದನ್ನೂ ಓದಿ: NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
ಬೆಂಗಳೂರಿಂದ ಬಳ್ಳಾರಿಗೆ ಮದುವೆಗೆ ಹೋಗುವಾಗ ಘಟನೆ ನಡೆದಿದ್ದು, ಐದು ಜನ ಪೊಲೀಸರು ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಘಟನೆ ಸಂಬಂಧ ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು SP ರಂಜಿತಕುಮಾರ ಬಂಡಾರು ಮಾಹಿತಿ ನೀಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
