ಟೈರ್ ಬ್ಲಾಸ್ಟ್ | ಡಿವೈಡರ್ಗೆ ಡಿಕ್ಕಿಯಾದ ಇನ್ನೋವಾ | ಮೂರು ಜನ ಸಾವು 

CHITRADURGA NEWS | 01 MAY 2025

ಚಿತ್ರದುರ್ಗ: ರಾಷ್ಟ್ರಿಯ ಹೆದ್ದಾರಿಯಲ್ಲಿ‌ಚಲಿಸುತ್ತಿದ್ದ ಇನ್ನೋವಾ ಕಾರಿನ ಟೈಯರ್ ಬ್ಲಾಸ್ಟ್ ಆಗಿ ಡಿವೈಡರ್ ಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.

ಈ‌ ಅಪಘಾತದಲ್ಲಿ ಸ್ಥಳದಲ್ಲೇ ಮೂರು‌ ಜನ ಮೃತಪಟ್ಟಿದ್ದು, 6 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಹೊಸದುರ್ಗದ R.P.PU ಕಾಲೇಜ್ ಅಮೋಘ ಸಾಧನೆ | ಶೇ.98 ರಷ್ಟು ಫಲಿತಾಂಶ ದಾಖಲು

ಚಿತ್ರದುರ್ಗ ಹೊರವಲಯದ ಸೀಬಾರದ ಗೋಶಾಲೆ ಬಳಿ ಘಟನೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ತಮಿಳುನಾಡು ಮೂಲದ ಅರ್ಜುನ್ (28) , ಸರವಣ್ (30) , ಶ್ರೀಧರ್ (30) ಎಂದು ಗುರುತಿಸಲಾಗಿದೆ.

ಮೃತ ಅರ್ಜುನ್ ತಮಿಳುನಾಡು ಮೂಲದ ಪೊಲೀಸ್ ಪೇದೆಯಾಗಿದ್ದು, ಮೃತರೆಲ್ಲರೂ

ತಮಿಳುನಾಡಿನ ಕೃಷ್ಣಗಿರಿ ಮೂಲದವರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮುರುಘಾ ಮಠದಿಂದ ಸತ್ಯ ಶುದ್ಧ ಕಾಯಕ ಪತ್ರಿಕೆ ಲೋಕಾರ್ಪಣೆ

ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮಿಳುನಾಡಿನ ಕೃಷ್ಣಗಿರಿಯಿಂದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ.

ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version