CHITRADURGA NEWS | 24 JUNE 2025
ಹೊಸದುರ್ಗ: ಹಾಡು ಹಗಲೆ ಮನೆಗೆ ನುಗ್ಗಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಹೊಸದುರ್ಗ ತಾಲೂಕಿನ ಹುಣವಿನಡು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಕೊಲೆಯನ್ನು ಕಂಡ ಇಡೀ ಗ್ರಾಮ ಬೆಚ್ಚಿ ಬಿದ್ದಿದೆ.

ಇದನ್ನೂ ಓದಿ: ಚಿತ್ರದುರ್ಗದ ಮುಖ್ಯ ರಸ್ತೆಗೆ ನರೇಂದ್ರ ಮೋದಿ ಹೆಸರು ನಾಮಕರಣ
ಹುಣವಿನಡು ಗ್ರಾಮದ ರಾಜೇಂದ್ರ(30) ಕೊಲೆಯಾದ ಯುವಕ.
ಸ್ನಾನ ಮಾಡುತ್ತಿದ್ದ ಬಚ್ಚಲು ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾರೆ.
ಇದನ್ನೂ ಓದಿ: APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಹುಣವಿನಡು ಗ್ರಾಮದ ಹೆಲ್ತ್ ಕ್ವಾಟ್ರಸ್ನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಕಾರಿನಲ್ಲಿ ಬಂದಿದ್ದ ಮೂವರು ಈ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.
ಇದನ್ನೂ ಓದಿ: ಹೊಸದುರ್ಗದಲ್ಲಿ ಗಾರ್ಮೆಂಟ್ಸ್ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್ | ಜವಳಿ ಪಾರ್ಕ್ ಸ್ಥಳ ನಿಗಧಿ
ಸೋಕೋ ಟೀಂ ಹಾಗೂ ಶ್ವಾನದಳ, ಬೆರಳಚ್ಚು ತಜ್ಞರ ತಂಡ ಘಟನಾ ಸ್ಥಳಕ್ಕೆ ತೆರಳಿ ಸಾಕ್ಷ್ಯಾಧಾರ ಕಲೆಹಾಕುತ್ತಿದೆ. ಹೊಸದುರ್ಗ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
