CHITRADURGA NEWS | 23 April 2025
ಚಿತ್ರದುರ್ಗ: ಕಾಶ್ಮೀರದ ಪಹಲ್‌ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ.

ಆದ್ದರಿಂದ ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು (Tour Operators & Travel Agents) ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಈ ಕೆಳಕಂಡ Helpline (ಸಹಾಯವಾಣಿ) ಗೆ ನೀಡಬೇಕೆಂದು ಕೋರಿದೆ.
ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಈ ಕೆಳಕಂಡ Helpline (ಸಹಾಯವಾಣಿಗೆ) ನೀಡಬೇಕೆಂದು ಕೋರಿದೆ.
Also Read: ತೂಕ ಇಳಿಸಿಕೊಳ್ಳಲು ಲೆಮನ್ ಗ್ರಾಸ್ ಪ್ರಯೋಜನಕಾರಿಯೇ?
ವಿವರವನ್ನು ನೀಡಲು ಹಾಗೂ ಸಂಪರ್ಕಿಸಬೇಕಾದ ಸಹಾಯವಾಣಿ ಸಂಖ್ಯೆ: 080-43344334, 080-43344335, 080-43344336, 080-43344342 ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
