CHITRADURGA NEWS | 15 SEPTEMBER 2026
ಚಿತ್ರದುರ್ಗ: ನಗರದ ಆನೆಬಾಗಿಲು ಬಳಿಯ ಶ್ರೀ ಅಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿ ವತಿಯಿಂದ ಆಯೋಜಿಸಿರುವ 69ನೇ ವರ್ಷದ ಗಣಪತಿ ಪೂಜಾ ಮಹೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಅದ್ದೂರಿ ಚಾಲನೆ
ಸೆ.14ರಿಂದ 24ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗದ ಶಿಲ್ಪಿ ರಾಮಕೃಷ್ಣ ಪಾಂಡುರಂಗ ಅವರು ಶ್ರೀ ಪ್ರಸನ್ನ ಗಣಪತಿ ಮೂರ್ತಿಯನ್ನು ನಿರ್ಮಿಸಿದ್ದು, ರಾಜು ಜಿ.ಎಂ. ಅವರು ಆಕರ್ಷಕ ಪೆಂಡಾಲ್ ನಿರ್ಮಿಸಿದ್ದಾರೆ.
ಪ್ರತಿದಿನ ಗಣಪತಿಗೆ ನವಗ್ರಹ ಹೋಮ, ಸಹಸ್ರನಾಮ ಕುಂಕುಮಾರ್ಚನೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ. ಸೆ.23ರವರೆಗೆ ಪ್ರತಿದಿನ ಸಂಜೆ 6 ಗಂಟೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸೆ.23ರಂದು ನವಗ್ರಹ ಹೋಮ ಹಾಗೂ ಸಹಸ್ರ ಮೋದಕ ಗಣಹೋಮ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ. ಸೆ.24ರಂದು ಸಂಜೆ 6 ಗಂಟೆಯಿಂದ ಸರ್ವಾಲಂಕೃತ ವಿದ್ಯುತ್ ದೀಪದ ರಥದಲ್ಲಿ ಸಕಲ ದೇವಮರ್ಯಾದೆಗಳೊಂದಿಗೆ, ಶ್ರೀ ಶಾರದಾ ಬ್ರಾಸ್ ಬ್ಯಾಂಡ್ ವಾದ್ಯಗೋಷ್ಠಿಯೊಂದಿಗೆ ಪ್ರಸನ್ನ ಗಣಪತಿ ಉತ್ಸವ ನಡೆಯಲಿದೆ. ರಾತ್ರಿ 10.30ಕ್ಕೆ ಚಂದ್ರವಳ್ಳಿ ಕೆರೆಯಲ್ಲಿ ಗಣಪತಿ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ: ಗಣೇಶೋತ್ಸವದ ಅಂಗವಾಗಿ ರಕ್ತದಾನ ಶಿಬಿರ | 35 ಯುನಿಟ್ ರಕ್ತ ಸಂಗ್ರಹ
ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ಜೆ.ಗೋಪಾಲರಾವ್ ಜಾಧವ್, ಅಧ್ಯಕ್ಷ ಎಲ್.ಎನ್.ರಾಜಕುಮಾರ್, ಉಪಾಧ್ಯಕ್ಷರಾದ ಎ.ಎಸ್.ನಾರಾಯಣರಾವ್, ಕೆ.ವಿ.ಆನಂದ್, ಪ್ರಧಾನ ಕಾರ್ಯದರ್ಶಿ ಬಿ.ಎಂ.ನಾಗರಾಜ್ ಬೇದ್ರೆ, ಖಜಾಂಚಿ ಸಿ.ಶ್ಯಾಮ್ ಪ್ರಸಾದ್ ಸ್ಥಪತಿ, ಸಹ ಕಾರ್ಯದರ್ಶಿಗಳಾದ ಡಿ.ಆರ್.ಮಂಜುನಾಥ್, ಎನ್.ವಿ.ರಮೇಶ್ ಕುಮಾರ್, ಸಂಘಟನಾ ಕಾರ್ಯದರ್ಶಿ ಜೆ.ಎನ್.ಶಂಭು ಸೇರಿದಂತೆ ಪದಾಧಿಕಾರಿಗಳು ಹಾಗೂ ಉತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

