ಮುಖ್ಯ ಸುದ್ದಿ
ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಿಸಿದ ಮಠಾಧೀಶರು
CHITRADURGA NEWS | 05 JUNE 2024
ಚಿತ್ರದುರ್ಗ: ನಗರದ ಹೊರವಲಯದಲ್ಲಿರುವ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ವಿವಿಧ ಮಠಾಧೀಶರು ಆಚರಿಸಿದರು.
ಇದನ್ನೂ ಓದಿ: ಚುನಾವಣೆ ಫಲಿತಾಂಶ ಘೋಷಣೆಯಲ್ಲಿ ದೇಶದಲ್ಲಿಯೇ ಚಿತ್ರದುರ್ಗ ಮೊದಲು
ಈ ವೇಳೆ ಕುಂಚಿಟಿಗ ಗುರುಪೀಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರು ಅಸ್ಷೃಶ್ಯರ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿ, ಶಿಕ್ಷಣವೇ ಎಲ್ಲರ ಅಭಿವೃದ್ಧಿಗೂ ಮೂಲ ಎಂದು ಭಾವಿಸಿ, ಶಿಕ್ಷಣಕ್ಕೆ ಹೆಚ್ಚು ಒತ್ತುಕೊಟ್ಟಿದ್ದರು.
ಮೈಸೂರು ವಿಶ್ವವಿದ್ಯಾನಿಲಯ ಪ್ರಾರಂಭಿಸಿದರು. ಬೆಂಗಳೂರಿನಲ್ಲಿ ಕೃಷಿ ವಿ.ವಿ ಸ್ಥಾಪಿಸಿದರು. ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭಕ್ಕೆ ಕಾರಣೀಭೂತರಾದರು. ಕಡ್ಡಾಯ ಪ್ರಾಥಮಿಕ ಶಿಕ್ಷಣ ಕಾಯಿದೆ ಜಾರಿ, ವಯಸ್ಕರಿಗಾಗಿ ವಯಸ್ಕರ ಶಾಲೆ.
ಪ್ರಜೆಗಳ ಸಮಸ್ಯೆಯನ್ನು ಆಲಿಸಲು ಪ್ರಜಾಪ್ರತಿನಿಧಿ ಸಭೆಯನ್ನು ಬಲಗೊಳಿಸಿ, ನ್ಯಾಯವಿಧಾಯಕ ಸಭೆಯನ್ನು ಸ್ಥಾಪಿಸಿದರು. ಸಾಮಾಜಿಕ ನ್ಯಾಯದ ಪರ ಮಹಾರಾಜರ ನಿಲುವು ಯಾವಾಗಲು ಹೆಚ್ಚಾಗಿತ್ತು. ಮೈಸೂರಿನಲ್ಲಿ ನಡೆದ ಮೀಸಲಾತಿ ಚಳುವಳಿ, ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹದ್ದು. ಮಿಲ್ಲರ್ ಆಯೋಗದ ಶಿಫಾರಸ್ಸಿನಂತೆ, ಬ್ರಾಹ್ಮಣೇತರರಿಗೆ ಶೇ 75% ಮೀಸಲಾತಿ ನೀಡಿ ಹೊಸ ಶಕೆಗೆ ಮುನ್ನುಡಿಯನ್ನಿಟ್ಟರು ನಾಲ್ವಡಿಯವರು.
ಇದನ್ನೂ ಓದಿ: ಚಿತ್ರದುರ್ಗಕ್ಕೆ ಮುಂಗಾರು ಮಳೆ ಸಂಭ್ರಮ | ತುಂಬಿ ಹರಿದ ಹಳ್ಳಕೊಳ್ಳ
ಮಡಿವಾಳ ಗುರುಪೀಠದ ಜಗದ್ಗುರು ಶ್ರೀ ಬಸವ ಮಾಚಿದೇವ ಸ್ವಾಮೀಜಿ ಮಾತನಾಡಿ, ಆಡು ಮುಟ್ಟದ ಸೊಪ್ಪಿಲ್ಲ್ಲ ಅನ್ನೋ ಮಾತು ಎಷ್ಟು ನಿಜವೋ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ನೀಡದ ಕ್ಷೇತ್ರವೇ ಇಲ್ಲ ಅನ್ನೋದು ಅಷ್ಟೇ ಸತ್ಯ. ಮೈಸೂರಿನ ಸುವರ್ಣ ಯುಗಕ್ಕೆ ಕಾರಣರಾದವರು ನಾಲ್ವಡಿ ಕೃಷ್ಣರಾಜ ಒಡೆಯರ್.
ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಸರ್ವಶ್ರೇಷ್ಟವಾದದ್ದು. ಅಂದು ರಾಜರು ಇಂದು ರಾಜಕಾರಣಿಗಳು ಜನರನ್ನು ಆಳುತ್ತಿದ್ದಾರೆ ಜನನಾಯಕ ಅಂದ್ರೆ ಒಡೆಯರ್ ರೀತಿಯಲ್ಲಿ ಇರಬೇಕು. ಜಗತ್ತಿಗೆ ತೋರಿಸಿಕೊಟ್ಟ ಇವರ ಕೊಡುಗೆಗಳು ಅಜರಾಮರ ಎಂದು ಹೇಳಿದರು.
ಇದನ್ನೂ ಓದಿ: ಸೋಲಿಗೆ ಅಂಜದೆ ಕ್ಷೇತ್ರದ ಜನರೊಂದಿಗೆ ಹೆಜ್ಜೆ ಹಾಕುವೆ | ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ
ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿ, ಕನ್ನಡ ನಾಡಿನ ಪ್ರಾತಃ ಸ್ಮರಣೀಯ ವ್ಯಕ್ತಿಗಳಲ್ಲಿ ಒಬ್ಬರು ಆಧುನಿಕ ಕನ್ನಡ ನಾಡಿನ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್. ಇಂದು ನಮ್ಮ ರಾಜ್ಯ ರಾಜಧಾನಿ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುತ್ತದೆ.
ವಿಶ್ವದಾದ್ಯಂತ ಬೆಂಗಳೂರು ಸಾಕಷ್ಟು ಪ್ರಸಿದ್ಧಿ ಪಡೆದಿದೆ. ದೇಶದ ಯುವಜನರು ಉದ್ಯೋಗಾವಕಾಶಗಳನ್ನು ಅರಸುವಾಗ ಅವರ ಮನಸ್ಸಿನಲ್ಲಿ ಮೂಡುವುದು ಮೊದಲಿಗೆ ಬೆಂಗಳೂರಿನ ಹೆಸರು. ಮಾಹಿತಿ ತಂತ್ರಜ್ಞಾನ, ಕೈಗಾರಿಕೆಗಳು, ಸ್ಟಾರ್ಟ್ ಅಪ್, ಶೈಕ್ಷಣಿಕ ವಲಯ ಹೀಗೆ ಬೆಂಗಳೂರು ಹತ್ತು ಹಲವು ಕ್ಷೇತ್ರಗಳಲ್ಲಿ ಇಂದು ವಿಶ್ವವ್ಯಾಪ್ತಿಯಾಗಿದೆ. ಈ ಎಲ್ಲವೂ ಮೈಸೂರಿನ ಪ್ರಸಿದ್ಧ ಮಹಾರಾಜರಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಹಾಕಿದ ಅಡಿಪಾಯದ ಮೇಲೆ ಎದ್ದು ನಿಂತಿರುವ ಭವ್ಯ ಸೌಧವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಟೋಲ್ ಶುಲ್ಕ ಕಡಿತಕ್ಕೆ ವಾರದ ಗಡುವು | ವಾಹನ ನಿಲ್ಲಿಸಿ ಪ್ರತಿಭಟನೆ ಎಚ್ಚರಿಕೆ
ಯಾದವ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಮಾತನಾಡಿ, ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನು ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು, ಸಾಮಾಜಿಕ ಕಾನೂನುಗಳ ಹರಿಕಾರ ಎಂದು ಕರೆದಿದ್ದಾರೆ.
ಗಾಂಧೀಜಿಯವರಿಂದಲೇ ರಾಜರ್ಷಿ ಎಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಂಸೆ ಪಡೆದಿದ್ದರು. ಒಡೆಯರ್ ಕೊಡುಗೆ ನೀಡದ ಕ್ಷೇತ್ರಗಳೇ ಇಲ್ಲ. ಕೃಷಿ, ಕೈಗಾರಿಕೆ, ನೀರಾವರಿ, ಜಲ ವಿದ್ಯುತ್, ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ವಲಯಗಳಲ್ಲಿ ಅಂದಿನ ಮೈಸೂರು ರಾಜ್ಯ ಮುಂಚೂಣಿಯಲ್ಲಿತ್ತು. ಇದರ ಹಿಂದೆ ಇವರ ಕೊಡುಗೆ ಅಪಾರವಾಗಿತ್ತು ಎಂದು ತಿಳಿಸಿದರು.
ಇದನ್ನೂ ಓದಿ: ಅನಿರೀಕ್ಷಿತ ಸೋಲಿಗೆ ಎದೆಗುಂದಬೇಡಿ | ಮಾಜಿ ಸಚಿವ ಎಚ್.ಆಂಜನೇಯ
ಜಯಂತಿಯಲ್ಲಿ ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಜಗದ್ಗುರು ವಚನಾನಂದ ಸ್ವಾಮೀಜಿ, ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಈಡಿಗ ಗುರುಪೀಠದ ಜಗದ್ಗುರು ಶ್ರೀ ರೇಣುಕಾನಂದ ಸ್ವಾಮೀಜಿ, ಮೇದಾರ ಗುರುಪೀಠದ ಶ್ರೀ ಇಮ್ಮಡಿ ಬಸವಪ್ರಭು ಕೇತೇಶ್ವರ ಸ್ವಾಮೀಜಿ, ಕುಂಬಾರ ಗುರುಪೀಠದ ಜಗದ್ಗುರು ಶ್ರೀ ಬಸವ ಗುಂಡಯ್ಯ ಸ್ವಾಮೀಜಿ, ಶಿವಮೊಗ್ಗದ ಬಸವ ಮರುಳಸಿದ್ಧ ಸ್ವಾಮೀಜಿ, ಶಿಕಾರಿಪುರ ಚನ್ನಬಸವ ಸ್ವಾಮೀಜಿ, ಹಾವೇರಿ ಬಸವ ಶಾಂತಲಿಂಗ ಸ್ವಾಮೀಜಿ, ಸಿರಗುಪ್ಪ ಬಸವ ಭೂಷಣ ಸ್ವಾಮೀಜಿ, ಕೊರಟಗೆರೆ ಮಹಾಲಿಂಗ ಸ್ವಾಮೀಜಿ, ನೆಲಮಂಗಲ ಡಾ.ರಮಾನಂದ ಸ್ವಾಮೀಜಿ, ತುಮಕೂರಿನ ತಿಪ್ಪೇರುದ್ರ ಸ್ವಾಮೀಜಿ, ಬೆಳಗಾವಿ ಜಯದೇವ ಸ್ವಾಮೀಜಿ ಇದ್ದರು.