
CHITRADURGA NEWS | 16 JANUARY 2026
ಚಳ್ಳಕೆರೆ: ಚಳ್ಳಕೆರೆ ತಾಲೂಕು ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.
ತಳಕು ಬಸ್ ನಿಲ್ದಾಣದಲ್ಲಿ ಜನವರಿ 09 ರಂದು ನಲಜರುಯ್ಯ ಅವರ ಅಂಗಡಿಗಳ ಬೀಗ ಮುರಿದು ಅಂಗಡಿಯಲ್ಲಿದ್ದ ವಿಮಲ್ ಗುಟ್ಕಾ, ಸೂಪರ್ ಹಾಗೂ ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 16 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಆರೋಪಿಯ ಪತ್ತೆಗೆ ಅಖಾಡಕ್ಕಿಳಿದ ಪೊಲೀಸರು, ಆರೋಪಿ ಪಂಡರಹಳ್ಳಿ ಬಾಲರಾಜ ಹೆಚ್ ಎಂಬುವವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಸದರಿ ಆರೋಪಿ 2025 ನವೆಂಬರ್ 15 ಮತ್ತು ಜ.09 ತಳುಕು ಸರಣಿ ಅಂಗಡಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿಯನ್ನು ದಸ್ತಗಿರಿ ಮಾಡಿ ಆತನಿಂದ ತಳಕು ಪೊಲೀಸ್ ಠಾಣೆಯ 02 ಪ್ರಕರಣಗಳಿಗೆ ಸಂಬಂಧಿಸಿದಂತೆ 13,000/- ನಗದು ಹಣ ಹಾಗೂ 6300/- ರೂ ಬೆಲೆ ಬಾಳುವ 50 ಪ್ಯಾಕೇಟ್ ಇರುವ ವಿಮಲ್ ಕಂಪನಿಯ ಗುಟ್ಕಾ ಬ್ಯಾಗ್, 02 ಸ್ಟಾನಾರ್, ಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 16 ಜನವರಿ | ಕರ್ನಾಟಕದ ಅಡಿಕೆ ಮಾರುಕಟ್ಟೆಯಲ್ಲಿಂದು..
ಚಳ್ಳಕೆರೆ ಸಿಪಿಐ ಹನುಮಂತಪ್ಪ ಎಂ ಶಿರೀಹಳ್ಳಿ ನೇತೃತ್ವದಲ್ಲಿ ಪಿ.ಎಸ್.ಐ ಶಿವಕುಮಾರ ಕೆ. ಎ.ಎಸ್.ಐ ಮಂಜಣ್ಣ ಹಾಗೂ ಸಿಬ್ಬಂದಿಗಳಾದ ನಿತಿನ್ ಕುಮಾರ್, ಜಾಕೀರ್ ಹುಸೇನ್, ಮಂಜುನಾಥ, ಧನಂಜಯ, ಜಗದೀಶ್, ವೀರೇಶ, ಮಾರೇಶ ಮತ್ತು ನಾರಾಯಣ ಅವರ ತಂಡ ಕಾರ್ಯಾಚರಣೆ ನಡೆಸಿತ್ತು.
ಸದರಿ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಢಾರು ಶ್ಲಾಘಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
