CHITRADURGA NEWS | 08 JUNE 2026
ಚಿತ್ರದುರ್ಗ: ನಗರದ ಭೀಮಸಮುದ್ರ ರಸ್ತೆಯ ಧವಳಗಿರಿ ಬಡಾವಣೆಯ ಎರಡನೇ ಹಂತದಲ್ಲಿರುವ ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದಲ್ಲಿ ಶುಕ್ರವಾರ ಮತ್ತು ಶನಿವಾರ 13ನೇ ವಾರ್ಷಿಕೋತ್ಸವ ಸಮಾರಂಭ ಅದ್ಧೂರಿಯಾಗಿ ನೆರವೇರಿತು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯನ್ನು ತಂಬಾಕು ಮುಕ್ತವಾಗಿಸಲು ಕೈಜೋಡಿಸಿ | ADC ಬಿ.ಟಿ.ಕುಮಾರಸ್ವಾಮಿ
ಶುಕ್ರವಾರ ಮುಂಜಾನೆಯಿಂದ ಸ್ವಸ್ತಿ ಪುಣ್ಯಾಹವಾಚನ, ಆಚಾರ್ಯದಿ ಋತ್ವಿಗ್ವರಣ, ಪಂಚಗವ್ಯ ಹವನ, ಮಹಾನ್ಯಾಸ ಪೂರ್ವಕ ಲಘು ರುದ್ರಾಭಿಷೇಕ, ಮಹಾಭಿಷೇಕ ಪೂಜಾದಿಗಳನ್ನು ನೆರವೇರಿಸಲಾಯಿತು.
ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗಿಸಲಾಯಿತು. ಸಂಜೆ ಹಂಸಗಾನ ಕಲಾ ಬಳಗದ ಕೆ.ಗಂಗಾಧರ್ ತಂಡದಿಂದ ಜರುಗಿದ ಸುಗಮ ಸಂಗೀತ ಕಾರ್ಯಕ್ರಮ ಪ್ರೇಕ್ಷಕರಿಗೆ ಮುದ ನೀಡಿತು.
ಶನಿವಾರ ಪಂಚಾಮೃತ ಸಹಿತ ರುದ್ರಾಭಿಷೇಕ ಹಾಗೂ ನವಗ್ರಹ ಪುರಸ್ಸರ ಅಷ್ಟದ್ರವ್ಯ ಮಹಾಗಣಪತಿ ಹೋಮ, ಪೂರ್ಣಾಹುತಿ ಸೇರಿದಂತೆ ಇತರೆ ಪೂಜಾ ವಿ ವಿಧಾನಗಳು ಜರುಗಿದವು. ಮಧ್ಯಾಹ್ನ ಅಷ್ಟಾವಧಾನ ಮಹಾಮಂಗಳಾರತಿ ನೆರವೇರಿತು.
ಇದನ್ನೂ ಓದಿ: ಮಳೆ ವರದಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ, ಇಲ್ಲಿದೆ ಮಾಹಿತಿ
ವಾರ್ಷಿಕೋತ್ಸವ ಪ್ರಯುಕ್ತ ಸ್ವಾಮಿಯ ಮೂರ್ತಿಗೆ ಮನಮೋಹಕವಾಗಿ ಅಲಂಕಾರ ಮಾಡಲಾಗಿತ್ತು. ಗುಲಾಬಿ, ಸೇವಂತಿಗೆ, ಸುಗಂಧರಾಜ, ಪತ್ರೆ, ಚೆಂಡು ಸೇರಿದಂತೆ ಬಗೆ ಬಗೆಯ ಪುಷ್ಪಗಳಿಂದ ಪೋಣಿಸಿದ ಮಾಲೆಗಳಿಂದ ನಯನ ಮನೋಹರವಾಗಿ ಸಿಂಗರಿಸಲಾಗಿತ್ತು.
ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಬಿಜೆಪಿ ಮುಖಂಡ ಜಿ.ಎಸ್.ಅನಿತ್‌ಕುಮಾರ್, ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಕಾರ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಮುಖಂಡರಾದ ಸಂಪತ್‌ಕುಮಾರ್, ಮೈಲಾರಪ್ಪ, ಮಾಧುರಿ ಗಿರೀಶ್, ನಿಶಾನಿ ಜಯಣ್ಣ, ಎಚ್.ಎನ್.ಲೋಕೇಶ್, ಅಪರ ಜಿಲ್ಲಾಕಾರಿ ಬಿ.ಟಿ.ಕುಮಾರಸ್ವಾಮಿ, ಜಿಪಂ ಸಿಎಓ ಓಂಕಾರಪ್ಪ ಸೇರಿದಂತೆ ಇತರೆ ಗಣ್ಯರು ಭೇಟಿ ನೀಡಿ ದೇವರ ದರ್ಶನ ಪಡೆದರು.
ಇದನ್ನೂ ಓದಿ: ಎಚ್.ಆಂಜನೇಯಗೆ MLC ನೀಡುವಂತೆ ಜಿಪಂ ಮಾಜಿ ಸದಸ್ಯ ನರಸಿಂಹರಾಜು ಆಗ್ರಹ
ಶನಿವಾರ ಮಧ್ಯಾಹ್ನ ಆಯೋಜಿಸಿದ್ದ ಅನ್ನ ಸಂತರ್ಪಣೆಯಲ್ಲಿ ಧವಳಗಿರಿ ಬಡಾವಣೆ ಸೇರಿದಂತೆ ನಗರದ ನಾನಾ ಬಡಾವಣೆಗಳ ಸಾವಿರಾರು ಮಂದಿ ಪ್ರಸಾದ ಸ್ವೀಕರಿಸಿದರು. ಸಂಜೆ ಧವಳಗಿರಿ ಬಡಾವಣೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
