
ಚಿತ್ರದುರ್ಗ ನ್ಯೂಸ್.ಕಾಂ: ಆಸ್ಪತ್ರೆಯ ಬೆಡ್‍ನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ನಗರದ ಕೋಟೆ ಮುಂಭಾಗದಲ್ಲಿ ಪತ್ತೆಯಾಗಿರುವ ಘಟನೆ ಗುರುವಾರ ವರದಿಯಾಗಿದೆ.
ಹಿರಿಯೂರು ತಾಲೂಕಿನ ಬ್ಯಾರಮಡು ಗ್ರಾಮದ ನಿವಾಸಿ ಸುಧಾಕರ್(40) ಮೃತ ವ್ಯಕ್ತಿ.
ಇದನ್ನು ಓದಿ: KSRTC ಬಸ್-ಬೈಕ್ ನಡುವೆ ಭೀಕರ ಅಪಘಾತ
ಲಿವರ್(ಇನ್ಫೆಕ್ಷನ್) ಸಮಸ್ಯೆಯಿಂದ ಬಳಲುತ್ತಿದ್ದ ಸುಧಾಕರ್ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಗಿದ್ದ. ಆದರೆ, ರಾತ್ರಿ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಬೆಳಗ್ಗೆ ಗಮನಿಸಿದಾಗ ರೋಗಿ ಇದ್ದ ಬೆಡ್ ಖಾಲಿಯಿತ್ತು.
ಗುರುವಾರ ಮುಂಜಾನೆ ಕೋಟೆ ಮುಂಭಾಗದಲ್ಲಿ ಅನುಮಾನಸ್ಪದವಾಗಿ ಸುಧಾಕರ್ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಆರ್‍ಪಿಸಿ 174ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
