ಚಿತ್ರದುರ್ಗ ನ್ಯೂಸ್.ಕಾಂ: ಹೊಸದುರ್ಗ ತಾಲೂಕಿನ ಸರ್ಕಾರಿ ಶಾಲೆಯೊಂದರ ಬಸ್ ಪಲ್ಟಿಯಾಗಿದ್ದು, ಸುಮಾರು 15 ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಹೊಸದುರ್ಗ ತಾಲೂಕಿನ ಚನ್ನಸಮುದ್ರ ಹಾಗೂ ಮಲ್ಲಪ್ಪನಹಳ್ಳಿ ಗ್ರಾಮಗಳ ನಡುವೆ ಬರುವ ರಸ್ತೆಯಲ್ಲಿ ಈ ಬಸ್ ಪಲ್ಟಿಯಾಗಿದೆ.

ಹೊಸದುರ್ಗ ತಾಲೂಕು ಮಲ್ಲಪ್ಪನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಸ್ ಮಂಗಳವಾರ ಬೆಳಗ್ಗೆ ಶಾಲೆಗೆ ಮಕ್ಕಳನ್ನು ಕರೆದೊಯ್ಯುವಾಗ ಪಲ್ಟಿಯಾಗಿದೆ.
ಇದನ್ನೂ ಓದಿ: ಹೊಸ ವರ್ಷದ ದಿನವೇ ಕೋಟೆ ರಸ್ತೆಯಲ್ಲಿ ಸರಣಿ ಅಪಘಾತ

ರಸ್ತೆಯಲ್ಲಿ ಪೈಪ್‍ಲೈನ್ ಕಾಮಗಾರಿಗಾಗಿ ಗುಂಡಿ ತೆಗೆದು ಸರಿಯಾಗಿ ಮುಚ್ಚಿರಲಿಲ್ಲ. ಈ ಗುಂಡಿಯನ್ನು ತಪ್ಪಿಸಲು ಹೋದ ಪರಿಣಾಮ ಬಸ್ ಪಕ್ಕದ ಬೇಲಿಗೆ ಉರುಳಿದೆ ಎನ್ನಲಾಗಿದೆ.
ಬಸ್ಸಿನಲ್ಲಿ ಸುಮಾರು 15-20 ಮಕ್ಕಳಿದ್ದರು. ಕೆಲವರಿಗೆ ಸಣ್ಣ ಪುಟ್ಟ ತರಚಿದ ಗಾಯಗಳಾಗಿವೆ. ಅದೃಷ್ಟವಶಾತ್ ಮಕ್ಕಳು ಪ್ರಾಣಾಪಯಾದಿಂದ ಪಾರಾಗಿದ್ದಾರೆ.
ಗಾಯಗೊಂಡ ಮಕ್ಕಳನ್ನು ಹೊಸದುರ್ಗ ತಾಲೂಕು ಮಲ್ಲಪ್ಪನಹಳ್ಳಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.
ಶಾಲಾ ಬಸ್ ನಿಧಾನಗತಿಯಲ್ಲಿದ್ದಿದ್ದಾಗ ಪಕ್ಕದ ಕಳ್ಳಿ ಸಾಲಿನ ಬೇಲಿಗೆ ಬಿದ್ದಿದೆ. ಈ ಕಾರಣಕ್ಕೆ ಹೆಚ್ಚಿನ ತೊಂದರೆಯಾಗಿಲ್ಲ ಎಂದು ಸ್ಥಳಕ್ಕೆ ಭೇಟಿ ನೀಡಿದವರು ಮಾಹಿತಿ ನೀಡಿದ್ದಾರೆ.
ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
