
CHITRADURGA NEWS | 25 DECEMBER 2025
ಚಿತ್ರದುರ್ಗ: ಜಿಲ್ಲೆಯಲ್ಲಿ ಭಾರೀ ಅವಘಡ ಸಂಭವಿಸಿದೆ. ಹಿರಿಯೂರು ತಾಲೂಕಿನ ಗೊರ್ಲತ್ತು ಬಳಿ ಖಾಸಗಿ ಬಸ್ಸಿಗೆ ಬೆಂಕಿ ತಗುಲಿದ್ದು, 11ಕ್ಕಿಂತ ಹೆಚ್ಚು ಜನ ಸಜೀವ ದಹನವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಖಾಸಗಿ ಸಂಸ್ಥೆಗೆ ಸೇರಿದ ಬಸ್ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದು, ಮಧ್ಯರಾತ್ರಿ 2.30 ರ ವೇಳೆಗೆ ಟ್ರಕ್‌ಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಚೇತರಿಕೆ
ಬಹುತೇಕ ಎಲ್ಲರೂ ನಿದ್ರೆಗೆ ಜಾರಿದ್ದ ವೇಳೆಯಲ್ಲೇ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರು ನಿದ್ರೆಯಿಂದ ಏಳುವಷ್ಟರಲ್ಲಿ ಬೆಂಕಿಯ ಕೆನ್ನಾಲಿಗೆ ಚಾಚಿಕೊಂಡಿದೆ.
ಸೀ ಬರ್ಡ್ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿದೆ ಎನ್ನುವ ಮಾಹಿತಿ ಇದ್ದು, ಹತ್ತು ಜನ ಪ್ರಯಾಣಿಕರು ಬೆಂಕಿ ಹೊತ್ತಿಕೊಂಡಾಗ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಸ್ಸಿನಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಇದೆ.

ಇದನ್ನೂ ಓದಿ: ಸಾರಿಗೆ ರಹದಾರಿ ಕುರಿತು ಚರ್ಚಿಸಲು RTO ಸಭೆ
ಮಧ್ಯ ರಾತ್ರಿ ಈ ಮಾಹಿತಿ ಸಿಕ್ಕಿದ ತಕ್ಷಣ ಪೊಲೀಸರು ಹೈ ಅಲರ್ಟ್ ಘೋಷಣೆ ಮಾಡಿಕೊಂಡಿದ್ದು, ಎಲ್ಲ ಪೊಲೀಸರಿಗೂ ಹೈ ಅಲರ್ಟ್ ಘೋಷಣೆ ಮಾಡಿಕೊಂಡಿದ್ದು, ಈಗಾಗಲೇ ಪೊಲೀಸರು ಘಟನಾ ಸ್ಥಳ ಹಾಗೂ ಆಸ್ಪತ್ರೆಗಳ ಶವಾಗಾರದ ಬಳಿ ನಿಯೋಜನೆಯಾಗಿದ್ದಾರೆ.
ಕ್ರಿಸ್‌ಮಸ್ ಹಬ್ಬದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಇದ್ದ ಕಾರಣಕ್ಕೆ ಊರುಗಳಿಗೆ ಹಾಗೂ ಪ್ರವಾಸಕ್ಕೆ ತೆರಳುತ್ತಿದ್ದವರು ಹೆಚ್ಚು ಜನ ಬಸ್ಸಿನಲ್ಲಿ ಸಂಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 24 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಬಸ್ ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗುತ್ತಲೇ ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ಸಂಪೂರ್ಣ ಜಾಮ್ ಆಗಿದೆ. ಭಾರೀ ಸಂಚಾರ ದಟ್ಟಣೆ ಉಂಟಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸುತ್ತಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
