
ಚಿತ್ರದುರ್ಗ ನ್ಯೂಸ್.ಕಾಂ:
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಸ್ಥಳದಲ್ಲೇ ಒಬ್ಬರು ಮೃತಪಟ್ಟು ಹಲವರು ಗಂಭೀರ ಗಾಯಗೊಂಡಿರುವ ಘಟನೆ ಹೊಳಲ್ಕೆರೆ-ಹೊಸದುರ್ಗ ಮಾರ್ಗ ಮಧ್ಯೆ ನಡೆದಿದೆ. ಮೃತ ವ್ಯಕ್ತಿಯನ್ನು 40 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ.
ಹೊಸದುರ್ಗ ತಾಲೂಕಿನ ಸೀಗೆಹಟ್ಟಿಯಿಂದ ದಾವಣಗೆರೆಗೆ ಮದುವೆ ದಿಬ್ಬಣ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪ ಪಲ್ಟಿಯಾಗಿದೆ.


ಹೊಳಲ್ಕೆರೆ ತಾಲೂಕಿನ ಉಗಣೆಕಟ್ಟೆ-ಆವನಹಟ್ಟಿ ಬಳಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ವಿದ್ಯುತ್ ಸಂಪರ್ಕ ಇಲ್ಲದ ಕಾರಣಕ್ಕೆ ಭಾರೀ ಅನಾಹುತವೊಂದು ತಪ್ಪಿದೆ.
ಇದನ್ನೂ ಓದಿ: ಮೈಚಾಂಗ್ ಎಫೆಕ್ಟ್ ಮೈ ಚಳಿ ಬಿಟ್ಟು ಸುರಿದ ಮಳೆ
ಬಸ್ಸಿನ ಕೆಳಗೆ ಹಲವರು ಸಿಲುಕಿದ್ದು ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯ ಮಾಡಿ ಹೊಳಲ್ಕೆರೆ ಆಸ್ಪತ್ರೆಗೆ ದಾಖಲಿಸುತ್ತಿದ್ದಾರೆ. ಇದರಲ್ಲಿ ಮೂರು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಬಸ್ಸಿನ ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ತಂತಿಗಳು ರಸ್ತೆಯಲ್ಲಿ ಹರಿದಾಡಿವೆ. ಸುಮಾರು 20 ಜನರನ್ನು ಹೊಳಲ್ಕೆರೆ ಹಾಗೂ ಚಿತ್ರದುರ್ಗ ಆಸ್ಪತ್ರೆಗೆ ರವಾನಿಸಲಾಗಿದೆ.
ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅನಾಹುತ ನಡೆದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
