
ಚಿತ್ರದುರ್ಗ ನ್ಯೂಸ್.ಕಾಂ: ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ಕಾರೊಂದು ಶಿರಾ-ಹಿರಿಯೂರು ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಡಿವೈಡರ್‍ಗೆ ಡಿಕ್ಕಿಯಾದ ಘಟನೆ ಅ.23 ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ.
ಬೆಳಗಾವಿ ಜಿಲ್ಲೆಯ ತಲಕವಾಡಿ ನಿವಾಸಿ ಹರ್ಷಿತ್ ಕುಲಕರ್ಣಿ, ಹರ್ಷಿತ್ ತಂದೆ ಹಂಚಿತ್ ಪಟೇಲ್ ಹಾಗೂ ತಾಯಿ ವಿಜಯಲಕ್ಷ್ಮೀ ವಿಭೂತಿಮಠ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಮೂರು ಜನ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಕೆನ್ನೆಡಲು ಜನರಿಗೆ KSRTC ಬಸ್ ಮೇಲೆ ಕಡಲಿನಷ್ಟು ಪ್ರೀತಿ

23 ವರ್ಷದ ಹರ್ಷಿತ್ ಬೆಂಗಳೂರಿನಿಂದ ಬೆಳಗಾವಿಗೆ ಕಾರು ಚಲಾಯಿಸುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಾಯಿಯೊಂದು ಅಡ್ಡ ಬಂದಿದೆ. ವೇಗವಾಗಿದ್ದ ಕಾರು ನಾಯಿ ತಪ್ಪಿಸುವ ಭರದಲ್ಲಿ ಡಿವೈಡರ್‍ಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಹರ್ಷಿತ್ ಕುಲಕರ್ಣಿ ಹಾಗೂ ತಾಯಿ ವಿಜಯಲಕ್ಷ್ಮೀ ವಿಭೂತಿಮಠ್ ಅವರ ತಲೆಗೆ ಪೆಟ್ಟು ಬಿದ್ದಿದೆ. ಹಂಚಿತ್ ಪಟೇಲ್ ಬಲಗೈ ಗಾಯಗೊಂಡಿದ್ದು, ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ದಾವಣಗೆರೆ ನಂಜಪ್ಪ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿಸಲಾಗಿದೆ.
ಈ ಬಗ್ಗೆ ಹಿರಿಯೂರು ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಆಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
