CHITRADURGA NEWS | 15 JULY 2024
ಮೊಳಕಾಲ್ಮೂರು: ನಿದ್ರೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಮಧ್ಯದ ಡಿವೈಡರ್‍ಗೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಳ್ಳಕೆರೆ ಮೊಳಕಾಲ್ಮೂರು ನಡುವಿನ ತಳುಕಿನ ಬಳಿ ರಾಷ್ಟ್ರೀಯ ಹೆದ್ದಾರಿ(Highway)ಯಲ್ಲಿ ನಸುಕಿನಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಕಳ್ಳತನವಾಗಿದ್ದ ಮುರುಘಾ ಶರಣರ ಬೆಳ್ಳಿ ವಿಗ್ರಹ ದಿಢೀರ್ ಪ್ರತ್ಯಕ್ಷ | ಮುರುಘಾ ಮಠಕ್ಕೆ ಶ್ವಾನ ದಳ ದೌಡು
ಅಪಘಾತದಲ್ಲಿ ಬಳ್ಳಾರಿ ಮೂಲದ 52 ವರ್ಷದ ಗೋಪಿನಾಥ್ ಹಾಗೂ 47 ವರ್ಷದ ಲಲಿತಮ್ಮ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಸಂಬಂಧಿಕರ ಉಪನಯನ ಕಾರ್ಯಕ್ರಮ ಮುಗಿಸಿಕೊಂಡು ಬಳ್ಳಾರಿಗೆ ವಾಪಾಸು ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಇದನ್ನೂ ಓದಿ: ಕಾರು ಬೈಕ್ ನಡುವೆ ಡಿಕ್ಕಿ | ಇಬ್ಬರು ಸ್ಥಳದಲ್ಲೇ ಸಾವು
ಈ ಘಟನೆಯಲ್ಲಿ ಶ್ರೇಯಾ, ಶ್ರೀನಿವಾಸ್ ಹಾಗೂ ಕಾರು ಚಾಲಕ ಸುರೇಶ್ ಗಂಭಿರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ತಳುಕು ಪಿಎಸ್‍ಐ ಲೋಕೇಶ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
