
CHITRADURGA NEWS | 20 APRIL 2024
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೊಳಲ್ಕೆರೆ ಕಣಿವೆ ಬಳಿ ನಡೆದಿದೆ.
ಬೆಂಗಳೂರು ಮೂಲದ ಮಂಜುನಾಥ್ ಮೃತ ಕಾರು ಚಾಲಕ. ಕಾರಿನಲ್ಲಿದ್ದ ಇನ್ನಿಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ನಸುಕಿನಲ್ಲಿ ಖಾಸಗಿ ಬಸ್ ಪಲ್ಟಿ | ಭೀಕರ ಅಪಘಾತ | ಸ್ಥಳದಲ್ಲೇ ಮೂವರ ದುರ್ಮರಣ
ಗಾಯಗೊಂಡಿರುವ ಸತೀಶ್ ಹಾಗೂ ಸುಚೇತ್ ಅವರನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಳಲ್ಕೆರೆ ಬಳಿಯಿರುವ ಕಣಿವೆ ಬಳಿ ಅಪಘಾತ ನಡೆದಿದ್ದು, ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ವಾರವಷ್ಟೇ ಇದೇ ಜಾಗದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದರು. ಈಗ ಮತ್ತೊಮ್ಮೆ ಅಪಘಾತ ನಡೆದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಎಚ್ಚರ ವಹಿಸಬೇಕಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
