Connect with us

    ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ | ಒಟ್ಟು ಮತದಾರರೆಷ್ಟು | ಯಾರ ಸಂಖ್ಯೆ ಹೆಚ್ಚು ಮಹಿಳೆಯರೋ – ಪುರುಷರೋ | ಈ ವರದಿ ಓದಿ

    ಅಂತಿಮ ಪಟ್ಟಿಯನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಪ್ರಕಟಿಸಿದ್ದಾರೆ.

    ಮುಖ್ಯ ಸುದ್ದಿ

    ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ | ಒಟ್ಟು ಮತದಾರರೆಷ್ಟು | ಯಾರ ಸಂಖ್ಯೆ ಹೆಚ್ಚು ಮಹಿಳೆಯರೋ – ಪುರುಷರೋ | ಈ ವರದಿ ಓದಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 22 JANUARY 2024

    ಚಿತ್ರದುರ್ಗ: ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಮತದಾರರ ಅಂತಿಮ ಪಟ್ಟಿಯನ್ನು ಸೋಮವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಪ್ರಕಟಿಸಿದ್ದಾರೆ.

    ಇದನ್ನೂ ಓದಿ: ಅಯೋಧ್ಯೆ ಭವ್ಯ ಮಂದಿರದಲ್ಲಿ ಬಾಲರಾಮ ವಿರಾಜಮಾನ

    ಜಿಲ್ಲೆಯಲ್ಲಿ 14,18,211 ಮತದಾರರು:

    ಜಿಲ್ಲೆಯಲ್ಲಿ ಒಟ್ಟು 1661 ಮತಗಟ್ಟೆಗಳಿದ್ದು, ಕರಡು ಮತದಾರರ ಪಟ್ಟಿಯಲ್ಲಿ 14,01,830 ಮತದಾರರು ಇದ್ದರು. ಮತದಾರರ ಅಂತಿಮ ಪಟ್ಟಿ ಪ್ರಕಟ ಅನ್ವಯ 7,04,896 ಪುರುಷ ಮತದಾರರು, 7,13,228 ಮಹಿಳಾ ಮತದಾರರು ಹಾಗೂ 87 ಇತರೆ ಮತದಾರರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 14,18,211 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದರು.

    ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ 1,25,058 ಪುರುಷರು, 1,24,181 ಮಹಿಳೆಯರು ಹಾಗೂ 13 ಇತರೆ ಸೇರಿದಂತೆ ಒಟ್ಟು 2,49,252 ಮತದಾರರರಿದ್ದಾರೆ.

    ಇದನ್ನೂ ಓದಿ: ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ಎದುರಿನಲ್ಲಿ ಕರುನಾಡಿನ ಶ್ರೀಗಳು

    ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ 1,10,448 ಪುರುಷರು, 1,12,106 ಮಹಿಳೆಯರು ಹಾಗೂ 6 ಇತರೆ ಸೇರಿದಂತೆ ಒಟ್ಟು 2,22,560 ಮತದಾರರಿದ್ದಾರೆ.

    ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 1,29,809 ಪುರುಷರು, 1,34,398 ಮಹಿಳೆಯರು ಹಾಗೂ 41 ಇತರೆ ಸೇರಿ ಒಟ್ಟು 2,64,248 ಮತದಾರರಿದ್ದಾರೆ.

    ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ 1,21,502 ಪುರುಷರು, 1,24,210 ಮಹಿಳೆಯರು ಹಾಗೂ 16 ಇತರೆ ಮತದಾರರು ಸೇರಿದಂತೆ ಒಟ್ಟು 2,45,728 ಮತದಾರರು ಇದ್ದಾರೆ.

    ಇದನ್ನೂ ಓದಿ: ಭವಿಷ್ಯ ನುಡಿಯುವ ಗಂಗೆ ಹೊಂಡ

    ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 99,860 ಪುರುಷರು, 99,596 ಹಾಗೂ 1 ಇತರೆ ಮತದಾರರು ಸೇರಿದಂತೆ ಒಟ್ಟು 1,99,457 ಮತದಾರರು ಇದ್ದಾರೆ.

    ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ 1,18,219 ಪುರುಷರು, 1,18,737 ಮಹಿಳೆಯರು ಹಾಗೂ 10 ಇತರೆ ಸೇರಿದಂತೆ ಒಟ್ಟು 2,36,966 ಮತದಾರರು ಇದ್ದಾರೆ.

    ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1418211 ಮತದಾರರು ಇದ್ದಾರೆ.

    2023ರ ಅಕ್ಟೋಬರ್ ಹಾಗೂ ನವೆಂಬರ್ ಮಾಹೆಯಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 11,260 ಪುರುಷರು ಹಾಗೂ 14,761 ಮಹಿಳೆಯರು ಹಾಗೂ 8 ಮಂದಿ ಇತರರು ಸೇರಿದಂತೆ ಒಟ್ಟು 26,029 ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

    ಮರಣ ಹೊಂದಿದ 9648 ಮತದಾರರನ್ನು ಗುರುತಿಸಿ ಅವರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದರು.

    35,683 ಯುವ ಮತದಾರರು:

    ಮತದಾರರ ಅಂತಿಮ ಪಟ್ಟಿಯಲ್ಲಿ 18-19 ವರ್ಷ ವಯೋಮಿತಿಯ ಯುವ ಮತದಾರರು ಜಿಲ್ಲೆಯಲ್ಲಿ 35,683 ಮಂದಿ ಇದ್ದಾರೆ.

    ಕರಡು ಮತದಾರರ ಪಟ್ಟಿಯಲ್ಲಿ 23,659 ಮತದಾರರು ಇದ್ದರು. ಕಳೆದ ಎರಡು-ಮೂರು ತಿಂಗಳಿಂದ ಬಿಎಲ್‍ಒಗಳು ಮನೆ ಮನೆ ಭೇಟಿ, ಕಾಲೇಜುಗಳಲ್ಲಿಯೂ ಸಹ ಯುವ ಮತದಾರರನ್ನು ಸೇರ್ಪಡೆ ಮಾಡಿದ್ದಾರೆ.

    ಇದನ್ನೂ ಓದಿ: ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

    ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ನೊಂದಣಿ ಕಾರ್ಯ ಮಾಡಿರುವುದಕ್ಕೆ ಭಾರತ ಚುನಾವಣಾ ಆಯೋಗವು ಸಹ ಶ್ಲಾಘನೆ ಮಾಡಿದೆ ಜಿಲ್ಲಾಧಿಕಾರಿಗಳು ತಿಳಿಸಿದರು.

    ಮತದಾರರ ಪಟ್ಟಿಯ ಬಗ್ಗೆ ಯಾವುದೇ ಸಂದೇಹಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ಸಂಪರ್ಕ ಕೇಂದ್ರದ ಸಹಾಯವಾಣಿ ಸಂಖ್ಯೆ 08194-222176 ಅಥವಾ ಟೋಲ್ ಫ್ರೀ ಸಂಖ್ಯೆ 1950 ಗೆ ಕರೆ ಮಾಡಬಹುದು ಎಂದು ತಿಳಿಸಿದರು.

    ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಅರ್ಹ ಮತದಾರರು ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಲ್ಲದವರು ಹಾಗೂ ಹೆಸರು ಕೈಬಿಟ್ಟುಹೋಗಿರುವವರು ಹಾಗೂ ಮತದಾರರ ಪಟ್ಟಿಯಲ್ಲಿ ಮಾಹಿತಿಯನ್ನು ತಿದ್ದುಪಡಿ ಮಾಡಿಸಬೇಕಾದಲ್ಲಿ ಮತ್ತು ಅದೇ ವಿಧಾನಸಭಾ ಕ್ಷೇತ್ರದ ಬೇರೆ ಬೇರೆ ಮತಗಟ್ಟೆಗೆ ವರ್ಗಾಯಿಸಬೇಕಾಗಿದ್ದಲ್ಲಿ ನಿಗಧಿಪಡಿಸಿರುವ ನಮೂನೆಗಳಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ತಮ್ಮ ವ್ಯಾಪ್ತಿಯ ಮತದಾನ ಕೇಂದ್ರದಲ್ಲಿ, ತಾಲ್ಲೂಕು ಕಚೇರಿಯಲ್ಲಿ, ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ನೀಡಿ ಸ್ವೀಕೃತಿ ಪಡೆಯಬಹುದಾಗಿದೆ. ಹಾಗೂ www.ceokarnataka.kar.nic.in &https://chitradurga.nic.in ವೆಬ್‍ಸೈಟ್‍ನಲ್ಲಿಯೂ ಸಹ ಪರಿಶೀಲಿಸಿಕೊಂಡು ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು VHA App (Voter help Line) ನಲ್ಲಿಯೂ ಆನ್‍ಲೈನ್ ಮೂಲಕ ಸಲ್ಲಿಸಹುದಾಗಿದೆ ಎಂದರು.

    ಸಭೆಯಲ್ಲಿ ಪ್ರಭಾರ ಉಪವಿಭಾಗಾಧಿಕಾರಿ ವಿವೇಕ್, ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಕಾರ್ಯದರ್ಶಿ ಸಿ.ಜೆ.ನಾಸಿರುದ್ದೀನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಹೊನ್ನಾಳ್, ಸಿಪಿಐಎಂ ಡಿಒಸಿ ಸಿ.ಕೆ.ಗೌಸ್‍ಪೀರ್ ಸೇರಿದಂತೆ ಚುನಾವಣಾ ತಹಶೀಲ್ದಾರ್ ಎಂ.ಸಂತೋಷ್ ಕುಮಾರ್ ಹಾಗೂ ಚುನಾವಣೆ ಶಾಖೆಯ ಸಿಬ್ಬಂದಿ ವರ್ಗದವರು ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top