By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ
    ಪೌಷ್ಟಿಕ ಆಹಾರ ಸೇವನೆಯಿಂದ ತಾಯಿ–ಮಗುವಿನ ಆರೋಗ್ಯ ರಕ್ಷಣೆ | ಲಲಿತಮ್ಮ
    7 hours ago
    Gaurasamudra Maramma Devi
    ಸೆ.14, 15 ಗೌರಸಮುದ್ರ ಮಾರಮ್ಮ ಜಾತ್ರೆ | ಪ್ರಾಣಿ ಬಲಿ ನಿಷೇಧ
    7 hours ago
    ಡಯಟ್ ನಲ್ಲಿ ಮಲ್ಲಾಡಿಹಳ್ಳಿ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
    ವೃತ್ತಿನಿಷ್ಠೆಯಿಂದ ಉತ್ತಮ ಬೋಧಕರಾಗಲು ಸಾಧ್ಯ | ಎಸ್. ಬಸವರಾಜು
    8 hours ago
    ಶ್ರೀ ಮಹರ್ಷಿ ವಾಲ್ಮೀಕಿ
    ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ | ಅರ್ಜಿ ಅಹ್ವಾನ | ಸೆ.25 ಕೊನೆದಿನ 
    8 hours ago
    ಮುರುಘಾ ಮಠ
    ಸೆ.12ರಂದು ಕೃಷಿಮೇಳ ಹಾಗೂ ಕುಸ್ತಿಪಂದ್ಯಾವಳಿ ಪೂರ್ವಭಾವಿ ಸಭೆ
    9 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    6 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    6 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    20 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    11 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    eyebrows
    ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
    18 hours ago
    Neck crease
    ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
    19 hours ago
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    2 days ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    2 days ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    3 days ago
Reading: ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ

News Desk Chitradurga News
Last updated: 29 June 2025 19:46
News Desk Chitradurga News
1 year ago
Share
ಮುರುಘಾಮಠದಲ್ಲಿ ಕಾರ್ಯಕಾರಿ ಸಭೆ
SHARE

CHITRADURGA NEWS | 29 JUNE 2025

ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಈಚೆಗೆ ಜಾಗತಿಕ ಲಿಂಗಾಯತ ಮಹಾಸಭಾದ 2025-26 ನೇ ಸಾಲಿನ ಮೊದಲನೇ ಕಾರ್ಯಕಾರಿ ಸಭೆಯು ನಡೆಯಿತು.

Also Read: ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌

ಈ ಸಭೆಯು ನಿಯಮ 18 ಮತ್ತು 19ರ ಅನುಸಾರ ನಡೆದು, ರಾಷ್ಟ್ರೀಯ, ರಾಜ್ಯಮಟ್ಟದ ಪದಾಧಿಕಾರಿಗಳು,ವಿವಿಧ ವಿಭಾಗ ಮುಖ್ಯಸ್ಥರು ಮತ್ತು ಸದಸ್ಯರು, ಮಹಾಪೋಷಕರು, ಪೋಷಕರು, ಮಹಾದಾಸೋಹಿ, ದಾಸೋಹಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರಲ್ಲದೆ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿರುವ ಎಲ್ಲಾ ಘಟಕ ಜಿಲ್ಲಾ ಮಹಿಳಾ ಘಟಕ ಜಿಲ್ಲಾ ಯುವಘಟಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಖಜಾಂಚಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಮುಖ್ಯವಾಗಿ 12 ರಿಂದ 13 ವಿಷಯಗಳು ಚರ್ಚಿತವಾದವು. ಅವುಗಳನ್ನು ಸಭೆಯಲ್ಲಿ ಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಾನಂದ್ ಜಾಮದಾರ್ ಮಾತನಾಡುತ್ತ, ಅವುಗಳಿಗೆ ಸಂಬಂಧಿಸಿದ ಚರ್ಚೆ, ಸಂವಾದಗಳ ಮೂಲಕ ವಿಷಯಗಳಲ್ಲಿ ಪ್ರಮುಖವಾದವುಗಳೆಂದರೆ, ವಚನ ದರ್ಶನ, ಮಿತ್ಯ ವರ್ಸಸ್ ಸತ್ಯ ಪುಸ್ತಕ ಬಿಡುಗಡೆ ಎಲ್ಲಾ ಜಿಲ್ಲೆಗಳಲ್ಲಿ ಆಗುತ್ತಿದೆ. ಆಗದೇ ಇರುವಂತಹ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಾಡುವ ತೀರ್ಮಾನ ತೆಗೆದುಕೊಳ್ಳುವುದರ ಜೊತೆಗೆ ಶರಣರ ಐತಿಹಾಸಿಕ ಸತ್ಯ ಮತ್ತು ನಿಲುವುಗಳು ಸಾರ್ವಜನಿಕರಿಗೆ, ಬಸವಾಭಿಮಾನಿಗಳಿಗೆ ಅರ್ಥೈಸುವ ಅನಿವಾರ್ಯತೆ ಇದೆ ಎಂದರು.

ಕರ್ನಾಟಕ ಸರ್ಕಾರ ಮುಂದೆ ನಡೆಸಲಿರುವ ಜಾತಿ ಮರು ಜನಗಣತಿಯ ಬಗ್ಗೆ ಚರ್ಚಿಸಿದ ಜಾಮದಾರ್, ಈ ನಡುವೆ ಸಭಿಕರಿಂದ ಬಂದ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಜಾತಿ ಕಾಲಂನಲ್ಲಿ ಲಿಂಗಾಯತ ಅಂತಲೇ ಬರೆಸಿ. ಒಳಪಂಗಡ ಇರಲಿ ಅದರ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.

ಬರುವ ಸೆಪ್ಟೆಂಬರ್ 1 ರಿಂದ ಅಕ್ಟೋಬರ್ 1ರವರೆಗೆ ನಡೆಯಲಿರುವ ಬಸವ ಸಂಸ್ಕೃತಿ ಅಭಿಯಾನದ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಅಭಿಯಾನ ಯಶಸ್ವಿಗೊಳಿಸಬೇಕೆಂದರು.

Also Read: ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್

ಎಲ್ಲಾ ಜಿಲ್ಲೆಗಳಲ್ಲಿ ಸಭಾದ ಜಮಾ ಖರ್ಚು ಆಡಿಟ್ ಮಾಡಿಸಿ ಕೇಂದ್ರ ಕಚೇರಿಗೆ ಆದಷ್ಟು ತುರ್ತಾಗಿ ಕಳುಹಿಸಬೇಕು. ಪ್ರಸಕ್ತ ಸಾಲಿನಲ್ಲಿ ವಾರ್ಷಿಕ ವಿಶೇಷ ಮಹಾ ಸಮ್ಮೇಳನ ಒಂದು ಕಡೆ ಏರ್ಪಡಿಸಬೇಕು. ಇದರೊಂದಿಗೆ ಎಲ್ಲ ಪಂಗಡಗಳ ಒಳಪಂಗಡಗಳ ವಧು ವರರ ಸಮ್ಮೇಳನ ಆದರೆ ಒಳಿತು. ಅಲ್ಲಿ ಬರುವ ಎಲ್ಲಾ ವಿಧಿ ವಿಧಾನಗಳು ನಿಜಾಚರಣೆಗಳ ಮೂಲಕ ನಡೆಯುವ ಮತ್ತು ತರಬೇತಿ ನೀಡುವ ಕ್ರಮವಾಗಬೇಕು ಎಂದರು.

ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ವಧು ವರರ ಮಾಹಿತಿ ಕೇಂದ್ರವನ್ನು ಸ್ಥಾಪಿಸಿ, ಆ ಮೂಲಕ ಕಲ್ಯಾಣವಾಗ ಬಯಸುವವರಿಗೆ ನೆರವಾಗಬಹುದಾಗಿದೆ ಎಂಬ ತೀರ್ಮಾನಕ್ಕೆ ಬರಲಾಯಿತು. ಜೊತೆಗೆ ಆನ್ಲೈನ್ ಮಾಸಿಕ ಪತ್ರಿಕೆಗೆ ಲೇಖನ ಮತ್ತು ಸಭಾದ ವತಿಯಿಂದ ನಡೆಯುವ ಕಾರ್ಯಕ್ರಮಗಳನ್ನು ನಡೆದ ಬಗೆಗಿನ ವರದಿಗಳನ್ನು ಪೂರೈಸಬೇಕು. ಎಲ್ಲ ಬಸವ ಸಂಘಟನೆಗಳು ಒಟ್ಟಾಗಿ ಹೋದಾಗ ಮಾತ್ರ ನಾವು ನಮ್ಮ ಗುರಿಯನ್ನು ತಲುಪಬಹುದಾಗಿದೆ ಎಂದು ಸೂಚ್ಯವಾಗಿ ಹೇಳಿದರು.

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಡಿಯಲ್ಲಿ ಕರ್ನಾಟಕದ ಪ್ರತಿಯೊಂದು ಜಿಲ್ಲೆಯಲ್ಲಿ ಬರುವ ಸೆಪ್ಟೆಂಬರ್ 1 ಅಕ್ಟೋಬರ್ 1ರವರೆಗೆ ಬಸವ ಸಂಸ್ಕೃತಿ ಅಭಿಯಾನ, ಅದರಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಬಗ್ಗೆ, ಅವರು ನೀಡಿದ ವಚನ ಸಂವಿಧಾನ, ಸಂಸ್ಕೃತಿಯ ಅಭಿಯಾನದ ಉದ್ದೇಶ, ಅಭಿಯಾನದಲ್ಲಿ ಏನಿರುತ್ತದೆ ಎಂಬ ಇತ್ಯಾದಿ ವಿಚಾರಗಳನ್ನು ಮಂಡಿಸಲಾಯಿತು.

Also Read: ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ

ಬಸವ ಸಂಸ್ಕೃತಿಯ ಅಭಿಯಾನದಲ್ಲಿ ಜಿಲ್ಲಾ ಸಮಿತಿಯ ಜವಾಬ್ದಾರಿಗಳೇನು? ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಜವಾಬ್ದಾರಿ ಮತ್ತು ಅಭಿಯಾನ ಯಾವ ದಿನಾಂಕ ಎಲ್ಲೆಲ್ಲಿ ನಡೆಯುತ್ತದೆಂಬ ವಿವರ ಪಟ್ಟಿಯಲ್ಲಿ ಪ್ರಕಟಗೊಂಡಿದೆ.

ಇದರೊಂದಿಗೆ ಅಭಿಯಾನದ ಆಶಯಗಳೇನು ಎಂದು ನೋಡುವುದಾದರೆ ಸಮ ಸಮಾಜದ ನಿರ್ಮಾಣ, ವ್ಯಸನ ಮುಕ್ತ ಸಮಾಜದ ನಿರ್ಮಾಣ, ಅಂದರ0ತೆ ಅಂಧಶ್ರದ್ಧೆ ಅಳಿಸಿ ಸುಜ್ಞಾನ ಬೆಳೆಸುವುದು, ಸದೃಢ ಸಮಾಜ ಕಟ್ಟುವುದು, ಮಕ್ಕಳಲ್ಲಿ ಆಧ್ಯಾತ್ಮಿಕ ಅರಿವು ಮೂಡಿಸುವುದು, ಮಹಿಳೆಯರ ಘನತೆಯನ್ನು ಕಾಪಾಡುವುದು ಹಾಗೂ ವ್ಯಕ್ತಿತ್ವ ವಿಕಸನ ಇತ್ಯಾದಿ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಸಾಣೇಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಅಥಣಿ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ, ಚಿತ್ರದುರ್ಗ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ದಾವಣಗೆರೆ ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ, ಮರುಳಶಂಕರ ಪೀಠದ ಸಿದ್ಧಬಸವ ಕಬೀರ ಸ್ವಾಮಿಗಳು, ಗುರುಮಠಕಲ್ ಖಾಸಾಮಠದ ಶಾಂತವೀರ ಗುರು ಮುರುಘಾ ರಾಜೇಂದ್ರ ಸ್ವಾಮಿಗಳು, ಹೊಳಲ್ಕೆರೆ ತಿಪ್ಪೇರುದ್ರ ಸ್ವಾಮಿಗಳು, ಮುರುಘಾಮಠದ ಮುರುಘೇಂದ್ರ ಸ್ವಾಮಿಗಳು ಸೇರಿದಂತೆ ಅನೇಕ ಪೀಠಾಧಿಪತಿಗಳು ಭಾಗವಹಿಸಿದ್ದರು.

ನಿವೃತ್ತ ನ್ಯಾಯಾಧೀಶರಾದ ಎನ್.ಕೆಂಪೇಗೌಡರವರು ಅಧ್ಯಕ್ಷತೆ ವಹಿಸಿದ್ದರು.

Also Read: ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ

ಸಭೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಸವರಾಜ್ ರೊಟ್ಟಿ, ಉಪಾಧ್ಯಕ್ಷರುಗಳಾದ ಮಾದೇವಪ್ಪ, ಬಸವರಾಜ ಧನ್ನೂರ್, ಮಹಾರಾಷ್ಟ್ರದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ್ ಕಣಜೆ, ಕೊಂಗವಾಡ್, ಪರಮೇಶ್ವರ ಕಾಗಿನೆಲೆ, ಡಾ. ಜೆ.ಎಸ್. ಪಾಟೀಲ್, ಸವಿತಾ ನಡಕಟ್ಟಿ, ನಳಿನಿ ಮಹಾಗಾವಕರ್, ಶೈಲಜಾ ಬಾಬು, ಅಶೋಕ ಮಳಗಲಿ, ಮುರಿಗೆಪ್ಪ ಬಾಳಿ, ಚಂದ್ರಶೇಖರ್ ಗುಡಸಿ, ಬಸನಗೌಡ ಹರನಾಳ ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಖಜಾಂಚಿಗಳು, ಮಹಿಳಾ ಘಟಕ, ಯುವ ಘಟಕಗಳ ಪದಾಧಿಕಾರಿಗಳು, ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesdignitariesExecutive CouncilGlobal Lingayat MahasabhaKannada Latest NewsKannada NewsMathadhisMuruga Mathಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಾರ್ಯಕಾರಿ ಸಭೆಗಣ್ಯರುಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾಗತಿಕ ಲಿಂಗಾಯತ ಮಹಾಸಭಾಮಠಾಧೀಶರುಮುರುಘಾ ಮಠ
Share This Article
Facebook Email Print
Previous Article ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Next Article Gavayi smaranothsava ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
Leave a Comment

Leave a Reply Cancel reply

Your email address will not be published. Required fields are marked *

ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ
ಪೌಷ್ಟಿಕ ಆಹಾರ ಸೇವನೆಯಿಂದ ತಾಯಿ–ಮಗುವಿನ ಆರೋಗ್ಯ ರಕ್ಷಣೆ | ಲಲಿತಮ್ಮ
ಮುಖ್ಯ ಸುದ್ದಿ
Gaurasamudra Maramma Devi
ಸೆ.14, 15 ಗೌರಸಮುದ್ರ ಮಾರಮ್ಮ ಜಾತ್ರೆ | ಪ್ರಾಣಿ ಬಲಿ ನಿಷೇಧ
ಮುಖ್ಯ ಸುದ್ದಿ
ಡಯಟ್ ನಲ್ಲಿ ಮಲ್ಲಾಡಿಹಳ್ಳಿ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
ವೃತ್ತಿನಿಷ್ಠೆಯಿಂದ ಉತ್ತಮ ಬೋಧಕರಾಗಲು ಸಾಧ್ಯ | ಎಸ್. ಬಸವರಾಜು
ಮುಖ್ಯ ಸುದ್ದಿ
ಶ್ರೀ ಮಹರ್ಷಿ ವಾಲ್ಮೀಕಿ
ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ | ಅರ್ಜಿ ಅಹ್ವಾನ | ಸೆ.25 ಕೊನೆದಿನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up