
CHITRADURGA NEWS | 19 JUNE 2024
ಚಿತ್ರದುರ್ಗ: ಮನೆಯಲ್ಲಿದ್ದ ಫ್ರಿಡ್ಜ್ (REFRIGERATOR) ಶಾರ್ಟ್ ಸಕ್ರ್ಯೂಟ್‍ನಿಂದ (short circute) ಬ್ಲಾಸ್ಟ್ ಆಗಿದ್ದು, ಭಾರೀ ಅನಾಹುತವೊಂದು ತಪ್ಪಿದೆ.
ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ನಗರದ ಜಯಲಕ್ಷ್ಮೀ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ವಿದ್ಯುತ್ ವ್ಯತ್ಯಯ | ತ್ರೈಮಾಸಿಕ ನಿರ್ವಹಣಾ ಕಾಮಗಾರಿ
ತುರುವನೂರು ಪೊಲೀಸ್ ಠಾಣೆ ಪೊಲೀಸ್ ಇನ್ಸ್‍ಪೆಕ್ಟರ್ ಲತಾ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಫ್ರಿಡ್ಜ್ ಬ್ಲಾಸ್ ಆದಾಗ ಮನೆಯಲ್ಲಿ ಯಾರೂ ಇರಲಿಲ್ಲ.
ಫ್ರಿಡ್ಜ್ ಬ್ಲಾಸ್ಟ್ ರಭಸಕ್ಕೆ ಮನೆಯ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಗೋಡೆ, ಸೀಲಿಂಗ್, ತಾರಸಿ ಎಲ್ಲವೂ ಸುಟ್ಟು ಕಪ್ಪಾಗಿದೆ.
ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಜಾಮೀನು | ನೀತಿ ಸಂಹಿತೆ ಉಲ್ಲಂಘನೆ ಕೇಸ್
ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
