
CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಸಾಗಿದ್ದು 13ನೇ ಸುತ್ತಿನಲ್ಲೂ ಬಿಜೆಪಿ ವೇಗಕ್ಕೆ ಬ್ರೇಕ್ ಬಿದ್ದಿದೆ. ಪ್ರಾರಂಭದಿಂದ ತೀವ್ರ ಅಂತರ ಕಾಯ್ದುಕೊಂಡಿದ್ದ ಬಿಜೆಪಿ ಮತಗಳಿಕೆ ಪುನಃ ಇಳಿಕೆ ಕಂಡಿದೆ.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 4,51,781ಮತಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 4,27,212ಮತ ಪಡೆದಿದ್ದಾರೆ. 24,569ಮತಗಳ ಮುನ್ನಡೆಯನ್ನು ಬಿಜೆಪಿ ಸಾಧಿಸಿದೆ.
ಮೊದಲ ಸುತ್ತಿನಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಬಳಿಕ ಎರಡು, ಮೂರು, ನಾಲ್ಕು, ಐದು, ಆರು, ಏಳು, ಎಂಟು, ಒಂಭತ್ತು, ಹತ್ತು, ಹನ್ನೊಂದು, ಹನ್ನೆರಡು, ಹದಿಮೂರನೇ ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಸುತ್ತಿನಿಂದ ಸುತ್ತಿಗೆ ಅಂತರವನ್ನು ಹೆಚ್ಚಿಸಿಕೊಳ್ಳುತ್ತಿದ್ದರು. ಆದರೆ ಕೊಂಚ ತಡೆ ನೀಡಿದ್ದ ಹನ್ನರಡನೇ ಸುತ್ತಿನ ಆಟ ಹದಿಮೂರಕ್ಕು ಮುಂದುವರೆದಿದೆ. 24,569 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.
ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಬಿ.ಎನ್.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
