CHITRADURGA NEWS | 06 SEPTEMBER 2026
ಹೊಳಲ್ಕೆರೆ: ಗುರು ಸ್ಥಾನ ಪರಮ ಪವಿತ್ರವಾದುದು. ಶಿಕ್ಷಕರಾಗಿ ದೊರೆತಿರುವ ಅವಕಾಶವನ್ನು ಸಮಾಜಕ್ಕೆ ಧಾರೆ ಎರೆಯುವ ಗುರುತರ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಶಿಕ್ಷಕರಿಗೆ ಕರೆ ನೀಡಿದರು.
ಇದನ್ನೂ ಓದಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
ಪಟ್ಟಣದ ಸಂವಿಧಾನ ಸೌಧದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕ ವೃತ್ತಿಯಿಂದ ದೇಶದ ಅತ್ಯುನ್ನತ ರಾಷ್ಟ್ರಪತಿ ಹುದ್ದೆಗೇರಿದರು. ಹೀಗಾಗಿ ಶಿಕ್ಷಕ ವೃತ್ತಿಗೆ ತನ್ನದೇ ಆದ ಗೌರವವಿದೆ. ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯಾಗಿ ಆಚರಿಸುತ್ತಿರುವುದು ಶಿಕ್ಷಕರಿಗೆ ದೊರೆತಿರುವ ಸೌಭಾಗ್ಯ ಎಂದು ಹೇಳಿದರು.
ಪ್ರತಿಯೊಬ್ಬ ವ್ಯಕ್ತಿಯ ಜೀವನದ ಹಿಂದೆ ಗುರು ಇರುತ್ತಾರೆ. ಶಿಕ್ಷಕ ವೃತ್ತಿಗೆ ಯಾವುದೇ ರೀತಿಯ ಚ್ಯುತಿ ಬರದಂತೆ ಕರ್ತವ್ಯ ನಿರ್ವಹಿಸಬೇಕು. ಮಕ್ಕಳ ಭವಿಷ್ಯ ರೂಪಿಸುವ ಮಹತ್ತರ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅತ್ಯಂತ ದೊಡ್ಡದು. ತಂದೆ-ತಾಯಿಗೆ ಕೀರ್ತಿ ತರುವಂತಹ ಮಕ್ಕಳು ಸಿಗುವುದು ಪುಣ್ಯ ಎಂದರು.
ಇದನ್ನೂ ಓದಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಿ | ಕೇಶವ ಪ್ರಸಾದ್
ಕಳೆದ 32 ವರ್ಷಗಳಿಂದ ಶಾಸಕನಾಗಿ ಸಾರ್ವಜನಿಕರ ಮಧ್ಯೆಯಿದ್ದು, ಅವರ ಕಷ್ಟ-ಸುಖಗಳನ್ನು ಅರ್ಥಮಾಡಿಕೊಂಡು, ಯಾರೇ ಏನೇ ಕೇಳಲಿ ತಮ್ಮ ಕೆಲಸವನ್ನು ಮಾತ್ರ ನಿರ್ವಂಚನೆಯಿಂದ ಮಾಡುತ್ತಿದ್ದೇನೆ ಎಂದು ಶಾಸಕ ಚಂದ್ರಪ್ಪ ಹೇಳಿದರು.
ಕಾರ್ಯಕ್ರಮದಲ್ಲಿ ಹೊಳಲ್ಕೆರೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ತಿಪ್ಪೇಶಪ್ಪ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಶಿವಮೂರ್ತಿ, ಡಿ.ಸಿ.ಮೋಹನ್, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಹಳ್ಳಪ್ಪ ಸೇರಿದಂತೆ ತಾಲ್ಲೂಕಿನ ಎಲ್ಲಾ ಶಿಕ್ಷಕರು ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

