
CHITRADURGA NEWS | 10.February 2026
ಹೊಸದುರ್ಗ: ನಮಗೆ ಹೈಕಮಾಂಡ್ ದೇವಸ್ಥಾನವಿದ್ದಂತೆ. ಅಲ್ಲಿಗೆ ಹೋಗಿ ನಮ್ಮ ಕಷ್ಟಸುಖಗಳನ್ನು ಹೇಳಿಕೊಳ್ಳುತ್ತೇವೆ ಮತ್ತು ಅಲ್ಲಿ ನಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಇದನ್ನೂ ಓದಿ: 18ನೇ ಕನ್ನಡ ಸಾಹಿತ್ಯ ಸಮ್ಮೇಳನ | ಜಿಲ್ಲೆಯ ಸರ್ಕಾರಿ ನೌಕರರಿಗೆ ಒಒಡಿ ಸೌಲಭ್ಯ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಬ್ರಹ್ಮವಿದ್ಯಾನಗರದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು.
ವಿರೋಧ ಪಕ್ಷದವರ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, ಅವರು ಹಿಂದುತ್ವದ ಹೆಸರಿನಲ್ಲಿ ಮತ ಕೇಳುತ್ತಾರೆ, ಅವರಿಗೆ ಅಭಿವೃದ್ಧಿ ಬೇಕಾಗಿಲ್ಲ ಎಂಬಂತೆ ವರ್ತಿಸುತ್ತಾರೆ. ಆದರೆ, ನಮ್ಮ ಸರ್ಕಾರ ಎಸ್ಸಿ-ಎಸ್ಟಿ ಸೇರಿದಂತೆ ಎಲ್ಲ ವರ್ಗದವರಿಗೂ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ ಬಂದಿದೆ ಮತ್ತು ಚುನಾವಣೆಗಳನ್ನು ಗೆಲ್ಲುತ್ತಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಸಚಿವರು ತಳ್ಳಿಹಾಕಿದರು. ನೀರಾವರಿ ಮತ್ತು ಪಿಡಬ್ಲ್ಯೂಡಿ ಇಲಾಖೆಗಳಿಗೆ ಅನುದಾನ ನೀಡಲಾಗುತ್ತಿದೆ. ವಿರೋಧ ಪಕ್ಷದವರು ಸುಮ್ಮನೆ ಆರೋಪ ಮಾಡುವುದನ್ನೇ ರೂಢಿ ಮಾಡಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ: ರಾತ್ರಿ 7 ರಿಂದ 9 ರವರೆಗೆ ಟಿವಿ ಮೊಬೈಲ್ ಬಂದ್ ಮಾಡಿ | SSLC ಫಲಿತಾಂಶ ಸುಧಾರಣೆಗೆ ಮಾಸ್ಟರ್ ಪ್ಲಾನ್
ಮೆಟ್ರೋ ದರ ಏರಿಕೆ ತಡೆಹಿಡಿದಿರುವ ವಿಚಾರದ ಬಗ್ಗೆ ಮಾತನಾಡಿದ ಅವರು, ಇದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಬಹುಶಃ ಸಾರ್ವಜನಿಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅಥವಾ ಮಾಧ್ಯಮಗಳ ವರದಿಯಿಂದಾಗಿ ಕೇಂದ್ರ ಸರ್ಕಾರ ದರ ಏರಿಕೆಯನ್ನು ತಡೆಹಿಡಿದಿರಬಹುದು ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ, ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಅಗತ್ಯಕ್ಕೆ ತಕ್ಕಂತೆ ಅನುದಾನ ಮೀಸಲಿಡುವುದಾಗಿ ಭರವಸೆ ನೀಡಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
