CHITRADURGA NEWS | 21 NOVEMBER 2026
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ನಮ್ಮ ಪಾಲಿನ ಇನ್ನೂ 2 ಟಿಎಂಸಿ ನೀರು ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಹಿರಿಯೂರಿನಲ್ಲಿ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲೇ ಇದ್ದ ಜಲಸಂಪನ್ಮೂಲ ಸಚಿವ ಎನ್.ಚೆಲುವರಾಯಸ್ವಾಮಿ ಇದಕ್ಕೆ ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ:ಭದ್ರಾ ಜಲಾಶಯದಿಂದ 2 TMC ನೀರು ಹರಿಸಿ | ಸಚಿವ ಟಿ.ರಘುಮೂರ್ತಿ ಮನವಿ
ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಗೆ ನೀರಿನ ಬೇಡಿಕೆ ಇದೆ. ದಾವಣಗೆರೆ, ಶಿವಮೊಗ್ಗದಲ್ಲೂ ಬೇಡಿಕೆ ಶುರುವಾಗಿದ್ದು, ಈ ಸಂಬಂಧ ಐಸಿಸಿ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸರ್ಕಾರದಿಂದ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಡಿಸೆಂಬರ್ ಅಂತ್ಯದೊಳಗೆ ತುಂಗಾದಿಂದ ಭದ್ರಾ ಜಲಾಶಯಕ್ಕೆ ನೀರು ಹರಿಯುವ ಕಾಮಗಾರಿ ಪೂರ್ಣಗೊಳಿಸಿ ಡಿಸೆಂಬರ್ ೧೫ರ ವೇಳೆಗೆ ಮುಖ್ಯಮಂತ್ರಿಗಳಿಂದ ಲಿಫ್ಟ್ ಮಾಡಿಸುವ ಯೋಜನೆಯಿದೆ. ನೀರಿನ ಲಭ್ಯತೆ ನೋಡಿಕೊಂಡು ನೀರು ಹರಿಸಲಾಗುತ್ತದೆ ಎಂದರು.
ಇದನ್ನೂ ಓದಿ:ಲಂಚ ಕೇಳಿದ ಅಧಿಕಾರಿ ಬಲಿ ಹಾಕಿ | ಜಿಲ್ಲಾಧಿಕಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
ಮುಂದಿನ ವರ್ಷದ ಮಳೆಗಾಲದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ 29 ಟಿಎಂಸಿ ನೀರನ್ನೂ ಹರಿಸಲಾಗುವುದು. ಇದೇ ವೇಳೆ ಕೈ ಬಿಟ್ಟು ಹೋಗಿರುವ ಕೆರೆಗಳನ್ನು ಸೇರಿಸುವ ಕೆಲಸ ಮಾಡಲಿದ್ದೇವೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆ ಎಸ್.ನಿಜಲಿಂಗಪ್ಪ ಅವರ ಕನಸು. ರಾಮಕೃಷ್ಣ ಹೆಗಡೆ ಅವರ ಬಳಿ ನಿಜಲಿಂಗಪ್ಪ ಯೋಜನೆ ಸಾಕಾರಕ್ಕೆ ಕೇಳಿಕೊಂಡಿದ್ದರು. ಎಸ್.ಎಂ.ಕೃಷ್ಣ ಅವರು ಯೋಜನೆ ಮುಂದುವರೆಸಿದರೆ, ಡಿ.ಕೆ.ಶಿವಕುಮಾರ್ ಅಧಿಕಾರಕ್ಕೆ ಬರುತ್ತಿದ್ದಂತೆ ನೀರು ಹರಿಸಿದ್ದಾರೆ ಎಂದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

