By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
    ಯಾಂತ್ರಿಕ ಯುಗದಲ್ಲಿ ಕಲೆಯ ಉಳಿವಿಗೆ ಸರ್ಕಾರದ ಪ್ರೋತ್ಸಾಹ ಅಗತ್ಯ | ಎಸ್.ಕೆ. ಬಸವರಾಜನ್
    2 hours ago
    ಸರಸ್ವತಿ ಕಾನೂನು ಕಾಲೇಜಿನ 60ನೇ ವರ್ಷದ ವಜ್ರ ಮಹೋತ್ಸವ ಉದ್ಘಾಟನೆ
    ಕಾನೂನು ವೃತ್ತಿ ವ್ಯಾಪಾರವಲ್ಲ, ಸಮಾಜ ಸೇವೆ | ಸುಪ್ರೀಂ ಕೋರ್ಟ್ ನ್ಯಾ. ಪ್ರಸನ್ನ ಭಾಲಚಂದ್ರ ವರಾಳೆ
    2 hours ago
    ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ
    ವಿಶೇಷ ಡಿ.ಎಡ್ ತರಬೇತಿಗೆ ಅ.28ರೊಳಗೆ ಅರ್ಜಿ ಆಹ್ವಾನ
    13 hours ago
    ಸಾಂದರ್ಭಿಕ ಚಿತ್ರ
    ಅ.27, 28ರಂದು ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
    13 hours ago
    ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ, ಸಾಹಸ ಹೆಣ್ಣುಮಕ್ಕಳಿಗೆ ಪ್ರೇರಣೆ | ಬಿ.ಟಿ.ಕುಮಾರಸ್ವಾಮಿ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 week ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 24 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಅನುಕೂಲಕರ
    15 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 23 | ದೂರದ ಪ್ರಯಾಣ ಬೇಡ, ಶುಭ ಸುದ್ದಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 22 | ಆದಾಯಕ್ಕಿಂತ ಖರ್ಚು ಹೆಚ್ಚು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 21 | ವಿಜಯದಶಮಿ ಹಬ್ಬದಂದು ನಿಮ್ಮ ರಾಶಿ ಫಲವೇನು?
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 20 | ಪರಿಶ್ರಮಕ್ಕೆ ತಕ್ಕ ಫಲಿತಾಂಶ, ಶುಭಸುದ್ದಿಗಳು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    7 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 19 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    3 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 week ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    jola roti
    ಜೋಳ ರೊಟ್ಟಿ ತೂಕ ಇಳಿಸಿಕೊಳ್ಳಲು ಸಹಕಾರಿಯೇ? ತಿಳಿಯಿರಿ
    12 hours ago
    Custard apple
    ಸೀತಾಫಲದ ಎಲೆ ಈ ರೋಗಗಳಿಗೆ ಅದ್ಭುತ ಪರಿಹಾರವಂತೆ
    13 hours ago
    peanuts
    ನೆಲಗಡಲೆ ತಿಂದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    2 days ago
    black grapes
    ಕಪ್ಪು ದ್ರಾಕ್ಷಿ ಸೇವಿಸಿ; ಈ ಪ್ರಯೋಜನವನ್ನು ಪಡೆಯಿರಿ
    2 days ago
    itchy breast a symptom of cancer
    ಸ್ತನದಲ್ಲಿ ತುರಿಕೆ ಕ್ಯಾನ್ಸರ್‌ನ ಲಕ್ಷಣವೇ?
    3 days ago
Reading: ಕಾನೂನು ವೃತ್ತಿ ವ್ಯಾಪಾರವಲ್ಲ, ಸಮಾಜ ಸೇವೆ | ಸುಪ್ರೀಂ ಕೋರ್ಟ್ ನ್ಯಾ. ಪ್ರಸನ್ನ ಭಾಲಚಂದ್ರ ವರಾಳೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕಾನೂನು ವೃತ್ತಿ ವ್ಯಾಪಾರವಲ್ಲ, ಸಮಾಜ ಸೇವೆ | ಸುಪ್ರೀಂ ಕೋರ್ಟ್ ನ್ಯಾ. ಪ್ರಸನ್ನ ಭಾಲಚಂದ್ರ ವರಾಳೆ

News Desk Chitradurga News
Last updated: 24 October 2026 18:40
News Desk Chitradurga News
2 hours ago
Share
ಸರಸ್ವತಿ ಕಾನೂನು ಕಾಲೇಜಿನ 60ನೇ ವರ್ಷದ ವಜ್ರ ಮಹೋತ್ಸವ ಉದ್ಘಾಟನೆ
ಸರಸ್ವತಿ ಕಾನೂನು ಕಾಲೇಜಿನ 60ನೇ ವರ್ಷದ ವಜ್ರ ಮಹೋತ್ಸವ ಉದ್ಘಾಟನೆ
SHARE

CHITRADURGA NEWS | 24 OCTOBER 2026

ಚಿತ್ರದುರ್ಗ: ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕೇವಲ ಸಂವಿಧಾನದ ಶಿಲ್ಪಿ ಎಂದು ಸೀಮಿತಗೊಳಿಸುವುದು ಅವರಿಗೆ ಮಾಡುವ ಅನ್ಯಾಯವಾಗಿದೆ. ಅವರು ಶ್ರೇಷ್ಠ ಸಮಾಜ ಸುಧಾರಕ, ದೂರದೃಷ್ಟಿಯ ನಾಯಕ ಹಾಗೂ ರಾಜಕೀಯ ತತ್ವಜ್ಞಾನಿಯಾಗಿದ್ದರು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪ್ರಸನ್ನ ಭಾಲಚಂದ್ರ ವರಾಳೆ ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ನಗರದ ಸರಸ್ವತಿ ವಿದ್ಯಾಸಂಸ್ಥೆಯ ಸರಸ್ವತಿ ಕಾನೂನು ಕಾಲೇಜಿನ 60ನೇ ವರ್ಷದ ವಜ್ರ ಮಹೋತ್ಸವ ಉದ್ಘಾಟಿಸಿ, ಸಂವಿಧಾನ ಮತ್ತು ಕಾನೂನು ವಿಷಯದ ಸ್ನಾತಕೋತ್ತರ ಪದವಿ (ಎಲ್‌ಎಲ್‌ಎಂ) ಕೋರ್ಸ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತೀಯ ಸಂವಿಧಾನದ ಶಕ್ತಿ ಹಾಗೂ ಅಂಬೇಡ್ಕರ್ ಅವರ ಕೊಡುಗೆಯಿಂದಾಗಿ ವಿವಿಧ ಸಾಮಾಜಿಕ ಹಿನ್ನೆಲೆಯ ಜನರು, ವಿಶೇಷವಾಗಿ ಅಂಚಿನಲ್ಲಿರುವ ಮತ್ತು ಪರಿಶಿಷ್ಟ ಜಾತಿಗಳ ಸಮುದಾಯದವರು, ಸಮಾನ ಅವಕಾಶಗಳನ್ನು ಪಡೆಯಲು ಸಾಧ್ಯವಾಗಿದೆ. ಅಂಬೇಡ್ಕರ್ ಅವರ ಬಹುಮುಖ ವ್ಯಕ್ತಿತ್ವ, ದೂರದೃಷ್ಟಿಯ ಚಿಂತನೆಗಳು ಮತ್ತು ಸಮಾಜ ಸುಧಾರಣೆಯ ಕಾರ್ಯಗಳ ಕುರಿತು ಇನ್ನಷ್ಟು ತಿಳಿದುಕೊಳ್ಳುವ ಅಗತ್ಯವಿದೆ ಎಂದರು.

ಕಾನೂನು ವೃತ್ತಿ ಪವಿತ್ರವಾದ ಸಾರ್ವಜನಿಕ ಸೇವೆಯಾಗಿದ್ದು, ಅದನ್ನು ಕೇವಲ ಹಣ ಸಂಪಾದನೆಯ ಮಾರ್ಗವಾಗಿ ಪರಿಗಣಿಸಬಾರದು. ಯುವ ವಕೀಲರು ಪ್ರಾಮಾಣಿಕತೆ, ಕಠಿಣ ಪರಿಶ್ರಮ ಮತ್ತು ಸಮಾಜಮುಖಿ ಚಿಂತನೆಯೊಂದಿಗೆ ಕಾರ್ಯನಿರ್ವಹಿಸಿ, ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯಬೇಕು. ಶಿಕ್ಷಣವು ವ್ಯಕ್ತಿಗೆ ತನ್ನ ಹಕ್ಕುಗಳ ಅರಿವು ಮೂಡಿಸುವುದರ ಜತೆಗೆ ಅವುಗಳನ್ನು ಪಡೆಯುವ ಧೈರ್ಯವನ್ನೂ ನೀಡುತ್ತದೆ. ಆದ್ದರಿಂದ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ವಿಶೇಷ ಡಿ.ಎಡ್ ತರಬೇತಿಗೆ ಅ.28ರೊಳಗೆ ಅರ್ಜಿ ಆಹ್ವಾನ

ಹೊಸ ಕಾಲಘಟ್ಟದಲ್ಲಿ ಭಾರತೀಯ ನ್ಯಾಯ ಸಂಹಿತೆ ಸೇರಿದಂತೆ ಕಾನೂನುಗಳಲ್ಲಿ ಬದಲಾವಣೆಗಳಾಗುತ್ತಿದ್ದು, ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ರಕ್ಷಣೆಯಂತಹ ಹೊಸ ಸವಾಲುಗಳನ್ನು ಎದುರಿಸಬೇಕಾಗಿದೆ. ಸುಪ್ರೀಂ ಕೋರ್ಟ್ ತೀರ್ಪುಗಳು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುತ್ತಿರುವುದು ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಸಹಕಾರಿಯಾಗಲಿದೆ ಎಂದರು.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಮಾತನಾಡಿ, ಶಿಕ್ಷಣವು ಸಮಾಜವನ್ನು ಪರಿವರ್ತಿಸುವ ಪ್ರಬಲ ಸಾಧನವಾಗಿದೆ. ಅವಕಾಶಗಳಿಂದ ವಂಚಿತರಾದವರು ಕೂಡ ಉನ್ನತ ಶಿಕ್ಷಣದ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು. ಕಾನೂನು ವಿದ್ಯಾರ್ಥಿಗಳು ಹಣ ಸಂಪಾದನೆಯನ್ನಷ್ಟೇ ಗುರಿಯಾಗಿಸಿಕೊಳ್ಳದೆ ಬಡವರು ಮತ್ತು ಅವಕಾಶ ವಂಚಿತರ ಪರವಾಗಿ ನಿಲ್ಲಬೇಕು ಎಂದರು.

ವಕೀಲರು ಕಾಲೇಜಿನ ಪಠ್ಯಜ್ಞಾನಕ್ಕೆ ಸೀಮಿತವಾಗದೆ ನ್ಯಾಯಾಲಯಗಳ ಕಾರ್ಯವೈಖರಿ, ವಕೀಲರ ಕಚೇರಿಗಳ ಪ್ರಾಯೋಗಿಕ ಕೆಲಸ ಹಾಗೂ ಸಮಾಜದ ನೈಜ ಸ್ಥಿತಿಗತಿಗಳನ್ನು ಅರಿತುಕೊಳ್ಳಬೇಕು. ದಾಖಲೆಗಳ ರಚನೆ ಮತ್ತು ವಾದ ಮಂಡನೆಯ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ಯಶಸ್ಸು ಕೇವಲ ಹಣ ಸಂಪಾದನೆಯಲ್ಲ; ಗುಣಮಟ್ಟದ ಜೀವನ ಮತ್ತು ಸಮಾಜಕ್ಕೆ ನೀಡುವ ಕೊಡುಗೆಯಲ್ಲಿದೆ ಎಂದು ಹೇಳಿದರು.

ಇದನ್ನೂ ಓದಿ: ಅ.27, 28ರಂದು ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ

ಹೈಕೋರ್ಟ್ ನ್ಯಾಯಮೂರ್ತಿ ಬಸವರಾಜ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ ನ್ಯಾಯಾಧೀಶರು ಹಾಗೂ ಸರ್ಕಾರಿ ಅಭಿಯೋಜಕರಾಗಲು ಸಂವಿಧಾನ ಮತ್ತು ಕಾನೂನು ಶಿಕ್ಷಣ ಉತ್ತಮ ಅವಕಾಶಗಳನ್ನು ಕಲ್ಪಿಸಿವೆ ಎಂದರು.

ತಮ್ಮ ವೃತ್ತಿಜೀವನಕ್ಕೆ ಮಾರ್ಗದರ್ಶಕರಾಗಿದ್ದ ಹಿರಿಯರಾದ ಸಿ. ಅಬ್ದುಲ್ ರಹೀಮ್ ಅವರ ಸ್ಮರಣಾರ್ಥ ಅಕ್ಟೋಬರ್ 31ರಂದು ‘ಶ್ರೀ ಅಬ್ದುಲ್ ರಹೀಮ್ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್’ ಆರಂಭಿಸಲಾಗುವುದು. ಟ್ರಸ್ಟ್ ಮೂಲಕ ಕಾನೂನು ಉಪನ್ಯಾಸಗಳು, ಕಾನೂನು ಸಾಕ್ಷರತಾ ಶಿಬಿರಗಳು ಹಾಗೂ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಹೈಕೋರ್ಟ್ ನ್ಯಾಯಮೂರ್ತಿ ವೆಂಕಟೇಶ್ ನಾಯ್ಕ್ ಮಾತನಾಡಿ, ಸರಸ್ವತಿ ಕಾನೂನು ಕಾಲೇಜು ಆರು ದಶಕಗಳ ಕಾಲ ಕಾನೂನು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಶ್ಲಾಘನೀಯ. ಕಾಲೇಜು ಮಧ್ಯ ಕರ್ನಾಟಕದ ಪ್ರಮುಖ ಕಾನೂನು ಶಿಕ್ಷಣ ಸಂಸ್ಥೆಯಾಗಿ ಬೆಳೆಯಲು ಮಾಜಿ ಸಂಸದ ಎಚ್. ಹನುಮಂತಪ್ಪ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ಇದನ್ನೂ ಓದಿ: ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ, ಸಾಹಸ ಹೆಣ್ಣುಮಕ್ಕಳಿಗೆ ಪ್ರೇರಣೆ

ಕಾನೂನು ವೃತ್ತಿಯು ಕೇವಲ ಬದುಕು ಕಟ್ಟಿಕೊಳ್ಳುವ ಸಾಧನವಲ್ಲ. ಜನರ ಹಕ್ಕುಗಳನ್ನು ರಕ್ಷಿಸುವುದು, ವಿವಾದಗಳನ್ನು ಬಗೆಹರಿಸುವುದು ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವುದು ವಕೀಲರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳು ನಿರಂತರ ಅಧ್ಯಯನ, ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯ ಮೂಲಕ ವೃತ್ತಿಯಲ್ಲಿ ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ವಿದ್ಯಾಸಂಸ್ಥೆಯ ಅಧ್ಯಕ್ಷರು ಹಾಗೂ ಹಿರಿಯ ವಕೀಲ ಫಾತ್ಯರಾಜನ್ ವಹಿಸಿದ್ದರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಡಿ. ಮಹಾವರ್‌ಕರ್, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. (ಡಾ.) ರತ್ನಾ ಆರ್. ಭರಮಗೌಡರ್, ಸರಸ್ವತಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಟಿ.ಎಚ್. ಬಸವರಾಜು ಉಪಸ್ಥಿತರಿದ್ದರು.

ಸಂಸ್ಥೆಯ ಕಾರ್ಯದರ್ಶಿ ಡಿ.ಕೆ. ಶೀಲ ಸಂಸ್ಥೆಯ ನಡೆದುಬಂದ ಹಾದಿಯನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ. (ಡಾ.) ಎಂ.ಎಸ್. ಸುಧಾದೇವಿ ಸ್ವಾಗತಿಸಿದರು. ಪೂರ್ಣಚಂದ್ರ ತೇಜಸ್ವಿ ಪ್ರಾರ್ಥಿಸಿದರು. ವೀಣಾ ಮತ್ತು ಕವನ ತಂಡ ನಾಡಗೀತೆ ಹಾಡಿತು. ಸಂದೇಶ ವಂದಿಸಿದರು. ಹರ್ಷ ಹಾಗೂ ಅಬೀನೇತ್ರಿ ಪಟುವರ್ಧನ್ ಕಾರ್ಯಕ್ರಮ ನಿರೂಪಿಸಿದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಅ.31ರಿಂದ ಬೃಹತ್ ಅಗ್ನಿವೀರ ನೇಮಕಾತಿ ರ್ಯಾಲಿ

ಕಾಲೇಜಿನಲ್ಲಿ ಅಭ್ಯಾಸ ಮಾಡಿ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರು ಹಾಗೂ ಸಾರ್ವಜನಿಕ ಅಭಿಯೋಜಕರಾಗಿ ಸೇವೆ ಸಲ್ಲಿಸುತ್ತಿರುವ ಈರಣ್ಣ, ರಾಜಕುಮಾರ್, ಸ್ಮಿತಾ, ಸುಮಾ, ಮಧು, ರಾಧಾ, ರಾಜು, ಅಜಿತ್, ಮೊಹಮ್ಮದ್ ಷಮಾಶ್ರೀ ಮತ್ತು ಆಲಿ ಅವರನ್ನು ಗೌರವಿಸಲಾಯಿತು. 2023-24ನೇ ಸಾಲಿನಲ್ಲಿ ಮೂರನೇ ರ‍್ಯಾಂಕ್ ಪಡೆದ ಕಾಲೇಜಿನ ವಿದ್ಯಾರ್ಥಿನಿ ಸ್ವಾತಿ ಅವರನ್ನೂ ಸನ್ಮಾನಿಸಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ಚಿತ್ರದುರ್ಗ, ಕನ್ನಡ ನ್ಯೂಸ್, ಸರಸ್ವತಿ ಕಾನೂನು ಕಾಲೇಜು, ವಜ್ರ ಮಹೋತ್ಸವ, Chitradurga, Kannada News, Saraswati Law College, Diamond Jubilee,
Share This Article
Facebook Email Print
Previous Article ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
Next Article ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಯಾಂತ್ರಿಕ ಯುಗದಲ್ಲಿ ಕಲೆಯ ಉಳಿವಿಗೆ ಸರ್ಕಾರದ ಪ್ರೋತ್ಸಾಹ ಅಗತ್ಯ | ಎಸ್.ಕೆ. ಬಸವರಾಜನ್
Leave a Comment

Leave a Reply Cancel reply

Your email address will not be published. Required fields are marked *

ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
ಯಾಂತ್ರಿಕ ಯುಗದಲ್ಲಿ ಕಲೆಯ ಉಳಿವಿಗೆ ಸರ್ಕಾರದ ಪ್ರೋತ್ಸಾಹ ಅಗತ್ಯ | ಎಸ್.ಕೆ. ಬಸವರಾಜನ್
ಮುಖ್ಯ ಸುದ್ದಿ
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
jola roti
ಜೋಳ ರೊಟ್ಟಿ ತೂಕ ಇಳಿಸಿಕೊಳ್ಳಲು ಸಹಕಾರಿಯೇ? ತಿಳಿಯಿರಿ
Life Style
ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ
ವಿಶೇಷ ಡಿ.ಎಡ್ ತರಬೇತಿಗೆ ಅ.28ರೊಳಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up